Mysore Dasara 2022 – ಈ ಬಾರಿ ಮೈಸೂರಿನಲ್ಲಿ ದಸರಾ ವೈಭವ ಜೋರು: ಸಿಎಂ ಬೊಮ್ಮಾಯಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?

Mysuru Dasara 2022 - ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ. ಈ ಬಾರಿ ದಸರಾ ಬಗ್ಗೆ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ. -ಸಿಎಂ ಬೊಮ್ಮಾಯಿ

Mysore Dasara 2022 - ಈ ಬಾರಿ ಮೈಸೂರಿನಲ್ಲಿ ದಸರಾ ವೈಭವ ಜೋರು: ಸಿಎಂ ಬೊಮ್ಮಾಯಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: Digi Tech Desk

Updated on:Jul 20, 2022 | 7:48 AM

ಬೆಂಗಳೂರು: ಕೊರೊನಾ(Coronavirus) ಕಾಟದಿಂದ ಮುಕ್ತವಾಗಿರುವ ನಾಡಿನಲ್ಲಿ ಈ ಬಾರಿ ಮೈಸೂರು ದಸರಾ ಆಚರಣೆ ಕಳೆಕಟ್ಟಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಇಂದು ಸಂಜೆ ಸಭೆ ನಡೆಸಿದ್ದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022(Mysuru Dasara 2022) ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ.

ನಾಡಹಬ್ಬ ದಸರಾ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೈರಾಗಿದದ್ದು ಎದ್ದು ಕಾಣುತ್ತಿತ್ತು. ಇನ್ನು ಸಭೆಯಲ್ಲಿ ಮೈಸೂರು, ಮಂಡ್ಯ ಭಾಗದ ಜನಪ್ರತಿನಿಧಿಗಳು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಜಿಟಿ ದೇವೇಗೌಡ, ಪ್ರತಾಪ್ ಸಿಂಹ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತನ್ವೀರ್ ಸೇಠ್, ಸಾರಾ ಮಹೇಶ್, ಹರ್ಷವರ್ಧನ್, ರಾಮ್ ದಾಸ್, ಪರಿಷತ್ ಸದಸ್ಯ ವಿಶ್ವನಾಥ್, ಮೈಸೂರು ಜಿಲ್ಲಾಧಿಕಾರಿ ಗೌತಮ್‌ ಬಗಾದಿ, ಮೈಸೂರು ಪೊಲೀಸ್ ಕಮಿಷನರ್, ಮಂಡ್ಯ ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ರು.

ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭ

ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ. ಈ ಬಾರಿ ದಸರಾ ಬಗ್ಗೆ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ. ದಸರಾ ಬ್ರ್ಯಾಂಡ್ ನೇಮ್ ಆಗಬೇಕು, ವಿಶ್ವದಾದ್ಯಂತ ಪ್ರಚಾರ ಮಾಡಲಾಗುತ್ತೆ. ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಅಕ್ಟೋಬರ್ 5ರಂದು ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂದರು.

ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಲು ವ್ಯವಸ್ಥೆ ಮಾಡಬೇಕಿದೆ. ಗಜಪಯಣ ಮಾವುತರಿಗೆ ಗೌರವ ಕಾಣಿಕೆ ಕೊಟ್ಟು ಕಾರ್ಯಕ್ರಮ ಮಾಡಬೇಕು. ವಸ್ತು ಪ್ರದರ್ಶನ 15 ದಿನ ಮೊದಲೇ ಪ್ರಾರಂಭಕ್ಕೆ ಸೂಚಿಸಲಾಗಿದೆ. ಸ್ಥಳೀಯ ಕಲಾಕಾರರಿಗೆ ಹೆಚ್ಚಿನ ಒತ್ತು ಕೊಡಬೇಕು. ದಿವಸಕ್ಕೆ ಒಬ್ಬರಾದರೂ ಕೂಡ ರಾಷ್ಟ್ರೀಯ ಕಲಾಕಾರರನ್ನು ಮುಖ್ಯ ಆಕರ್ಷಣೆಯಾಗಿ ಕರೆಯುವ ಉದ್ದೇಶವಿದೆ. ಶ್ರೀರಂಗಪಟ್ಟಣ ಚಾಮರಾಜನಗರದಲ್ಲೂ ವೈಭವದ ದಸರಾ ಆಯೋಜಿಸಲಾಗುತ್ತೆ. ಮುಂದಿನ ಒಂದು ವಾರದ ಒಳಗಡೆ ಟೂರಿಸ್ಟ್ ಸರ್ಕ್ಯೂಟ್ ಅಂತ ಆದೇಶ ಮಾಡ್ತಿದ್ದೇವೆ. ಮೈಸೂರು ಹಾಗೂ ಹಂಪಿ ಟೂರಿಸ್ಟ್ ಸರ್ಕ್ಯೂಟ್ ಚಾಲನೆ ನೀಡ್ತೇವೆ ಎಂದು ತಿಳಿಸಿದ್ದಾರೆ.

ಮಳೆ, ಬೆಳೆ ಚೆನ್ನಾಗಿ ಆಗಿರುವುದರಿಂದ ವೈಭವದ ದಸರಾ ಮಾಡಲಾಗುತ್ತೆ

ಇನ್ನು ಮೈಸೂರು ದಸರಾ ಹೈಪವರ್ ಕಮಿಟಿ ಮೀಟಿಂಗ್ ಅಂತ್ಯದ ಬಳಿಕ ಎಸ್ಟಿ ಸೋಮಶೇಖರ್ ಮಾಹಿತಿ ನೀಡಿದ್ದಾರೆ. ಈ ಬಾರಿ ವೈಭವದಿಂದ ದಸರಾ ಮಾಡಬೇಕು ಅಂತ ಜನಪ್ರತಿನಿಧಿಗಳು ಹೇಳಿದ್ದಾರೆ. ಮೈಸೂರು ದಸರಾ ಆಕರ್ಷಕವಾಗಿ, ಸಾಂಪ್ರದಾಯಿಕವಾಗಿ ಮಾಡುವುದಕ್ಕೆ ಹೇಳಿದ್ದಾರೆ. ಮಳೆ, ಬೆಳೆ ಚೆನ್ನಾಗಿ ಆಗಿರುವುದರಿಂದ ವೈಭವದ ದಸರಾ ಮಾಡಲಾಗುತ್ತೆ ಎಂದರು.

ದಸರಾ ನೆಪದಲ್ಲಿ ಅಧಿಕಾರಿಗಳು ಸಾರ್ವಜನಕರಿಂದ ದೂರ ಆಗಬಾರದು. ದಿನನಿತ್ಯದ ಜನರ ಕೆಲಸಗಳಿಗೆ ತೊಂದರೆ ಆಗದಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಪ್ರತಿವರ್ಷ ಲೈಟಿಂಗ್ ಅರೇಂಜಮೆಂಟ್ ಆಯಾ ಇಲಾಖೆಗೆ ನೀಡಲಾಗಿದೆ. ಮೂಡಾದಿಂದ(MUDA) 10 ಕೋಟಿ ನೀಡಲಾಗುತ್ತಿದ್ದು ಉಳಿದ ವೆಚ್ಚಕ್ಕೆ ಸರ್ಕಾರ ಹಣ ನೀಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಅದ್ದೂರಿ ದಸರಾ ಆಚರಣೆ ಬೆನ್ನಲ್ಲೇ ಮಾವುತರ ಹಾಗೂ ಕಾವಾಡಿಗರ ವಾರ್ನಿಂಗ್

ದಸರಾ ಮುಂಚಿತವಾಗಿ ವೇತನ ಹೆಚ್ಚಳಕ್ಕೆ ಮಾವುತರು ಹಾಗೂ ಕಾವಾಡಿಗರ ಸಂಘಟನೆ ಒತ್ತಡ ಹಾಕಿದೆ. ವೇತನ ಹೆಚ್ಚಳ‌‌ ಮಾಡದಿದ್ದರೆ ಗಜಪಯಣ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ, ಚಾಮರಾಜನಗರ ಹಾಗೂ ಮೈಸೂರಿನ ಮಾವುತರು ಎಚ್ಚರಿಕೆ ನೀಡಿದ್ದಾರೆ. ಕುಶಾಲನಗರ ದುಬಾರೆ ಆನೆ ಶಿಬಿರದಲ್ಲಿ ಸಭೆ ಸೇರಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.

Published On - 6:12 pm, Tue, 19 July 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್