AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ; ಕರ್ನಾಟಕ ಕೊರೊನಾ ಪರಿಸ್ಥಿತಿ ವಿವರಿಸಿದ ಸಿಎಂ ಬೊಮ್ಮಾಯಿ

ಟೆಲಿಕಾಲ್ ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಲಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಮೋದಿಗೆ ಸಿಎಂ ಬೊಮ್ಮಾಯಿ ವಿವರಣೆ ನೀಡಿದ್ದಾರೆ.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ; ಕರ್ನಾಟಕ ಕೊರೊನಾ ಪರಿಸ್ಥಿತಿ ವಿವರಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ganapathi bhat|

Updated on: Jan 13, 2022 | 7:59 PM

Share

ಬೆಂಗಳೂರು: ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕರ್ನಾಟಕ ರಾಜ್ಯದ ಕೊವಿಡ್‌ ಸ್ಥಿತಿ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜ್ಯದ ಸ್ಥಿತಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಸಭೆಗೂ ಪೂರ್ವಭಾವಿಯಾಗಿ ಬೊಮ್ಮಾಯಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ದು, ಸಭೆಯಲ್ಲಿ ಸಚಿವ ಡಾ.ಸುಧಾಕರ್​​, ಸಿಎಸ್​ ರವಿಕುಮಾರ್, ಹಿರಿಯ ಅಧಿಕಾರಿಗಳ ಜೊತೆ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ.

ಸಭೆಯಲ್ಲಿ ಕರ್ನಾಟಕ ರಾಜ್ಯದ ಕೊರೊನಾ ಸ್ಥಿತಿ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ವಿವರಣೆ ನೀಡಿದ್ದಾರೆ. ರಾಜ್ಯದ ಏರ್​ಪೋರ್ಟ್, ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪರಿಣಾಮಕಾರಿಯಾಗಿ ಕೊವಿಡ್-19 ಟೆಸ್ಟಿಂಗ್ ನಡೆಯುತ್ತಿದೆ. ರಾಜ್ಯದಲ್ಲಿ ನೈಟ್​ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಆಸ್ಪತ್ರೆಗಳಲ್ಲಿ ಬೆಡ್​ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಐಸಿಯು, ವೆಂಟಿಲೇಟರ್​ ವ್ಯವಸ್ಥೆ ಬೆಡ್​ ಸಂಖ್ಯೆ ಹೆಚ್ಚಿಸಲಾಗಿದೆ. ಹೋಮ್​ ಐಸೋಲೇಷನ್​ನಲ್ಲಿರುವವರ ಆರೋಗ್ಯ ವಿಚಾರಣೆ ಮಾಡಲಾಗುತ್ತಿದೆ. ಟೆಲಿಕಾಲ್ ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಲಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಮೋದಿಗೆ ಸಿಎಂ ಬೊಮ್ಮಾಯಿ ವಿವರಣೆ ನೀಡಿದ್ದಾರೆ.

ಹೋಮ್ ಐಸೋಲೇಷನ್ ಜಾಸ್ತಿಯಾಗುತ್ತಿದೆ. ಅದರ ಬಗ್ಗೆ ಜಾಸ್ತಿ ನಿಗಾ ಇಡಿ. ಸಣ್ಣ ಪ್ರಮಾಣದ ಲಕ್ಷಣಗಳಿಗೆ ಹೋಮ್ ಐಸೋಲೇಷನ್ ಆದ್ಯತೆ ಕೊಡಿ. ಟ್ರೇಸಿಂಗ್, ಟ್ರ್ಯಾಕಿಂಗ್, ಟೆಸ್ಟಿಂಗ್, ಟ್ರಯಾಜಿಂಗ್ ಗೆ ಹೆಚ್ಚು ಗಮನ ಇರಲಿ. ಪಾಸಿಟಿವಿಟಿ ಜಾಸ್ತಿ ಇರುವ ರಾಜ್ಯಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಾಗಲಿ ಎಂದು ವೀಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯಗಳಿಗೆ ಪ್ರಧಾನಿ‌ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ, ನೈಟ್​​ ಕರ್ಫ್ಯೂಗೆ ಹೋಟೆಲ್, ರೆಸ್ಟೋರೆಂಟ್, ಬಾರ್ ಮಾಲೀಕರ ಸಂಘದಿಂದ ಭಾರಿ ವಿರೋಧ

ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ, ಕೊಪ್ಪಳ ಗವಿಮಠ ಜಾತ್ರೆ ರದ್ದು