ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ: ಜನೋತ್ಸವ ಸಾಧನಾ ಸಮಾವೇಶದಲ್ಲಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭಾಗಿ, ಲೈವ್ ವೀಕ್ಷಿಸಲು ಲಿಂಕ್ ಇಲ್ಲಿದೆ
ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಲಿದ್ದಾರೆ.
ಬೆಂಗಳೂರು: ರಾಜ್ಯ ಬಿಜೆಪಿ ಸರಕಾರದ(Karnataka BJP) ಮೂರು ವರ್ಷ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ನೇತೃತ್ವದ ಸರಕಾರ 1 ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಾಳೆ (ಜುಲೈ 28) 2 ಸಮಾರಂಭಗಳನ್ನು ಆಯೋಜಿಸಲಾಗಿದೆ. ಒಂದು ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಮಾಡಲಾಗುತ್ತಿದ್ದು. ಮತ್ತೊಂದು ಪಕ್ಷದ ವತಿಯಿಂದ ಮಾಡಲಾಗುತ್ತಿದೆ. ಸರ್ಕಾರದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದರೆ, ಪಕ್ಷದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಸರ್ಕಾರದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. Link : https://youtu.be/Du7faxQ6vMQ ಈ ಲಿಂಕ್ ಮೂಲಕ ಸರಕಾರದ ಕಾರ್ಯಕ್ರಮವನ್ನು ವೀಕ್ಷಿಸಬಹುದು. ಹಾಗೂ ಮಧ್ಯಾಹ್ನ 12.30 ಕ್ಕೆ ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಸಮಾವೇಶ ವೀಕ್ಷಿಸಲು Link : https://youtu.be/_61h2ybwgp0 ಈ ಲಿಂಕ್ ಒತ್ತಿ.
ಜನೋತ್ಸವ ಸಾಧನಾ ಸಮಾವೇಶದಲ್ಲಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭಾಗಿ
ಇನ್ನು ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಲಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ಗೆ ನಡ್ಡಾ ಆಗಮಿಸಲಿದ್ದು ಮಧ್ಯಾಹ್ನ 12.10ಕ್ಕೆ ದೇವನಹಳ್ಳಿಯ ಹೋಟೆಲ್ ತಾಜ್ಗೆ ಬರುತ್ತಾರೆ. ನಂತರ ಮಧ್ಯಾಹ್ನ 1 ಗಂಟೆಗೆ ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಾರೆ.
ಬಳಿಕ ಜನೋತ್ಸವ ಸಾಧನಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2.15ಕ್ಕೆ ಸಮಾವೇಶ ಸ್ಥಳದಿಂದ ನಿರ್ಗಮಿಸಿ ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಹೋಟೆಲ್ ತಾಜ್ಗೆ ವಾಪಸ್ ಆಗಿ ಸಂಜೆ 6 ಗಂಟೆಗೆ ಕೆಐಎಎಲ್ನಿಂದ ದೆಹಲಿಗೆ ನಡ್ಡಾ ವಾಪಸ್ ಆಗಲಿದ್ದಾರೆ.
ಜನೋತ್ಸವ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಧರಿಸಿ ಬರುವಂತೆ ಕರೆ
ಹಿಂದೂ ಕಾರ್ಯಕರ್ತ ಪ್ರವೀಣ್ ಕೊಲೆ ಖಂಡಿಸಿ ಸರ್ಕಾರದ ಜನೋತ್ಸವ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಧರಿಸಿ ಬರುವಂತೆ ಕರೆ ನೀಡಲಾಗಿದೆ. ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಭಾಗವಹಿಸುವಂತೆ ಭಜರಂಗದಳ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದಾರೆ.
Published On - 9:44 pm, Wed, 27 July 22