ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಪತ್ರ ಹಸ್ತಾಂತರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50X80 ಅಳತೆಯ ಸೈಟ್ ನೀಡಲಾಗಿದ್ದು, ಇಂದು ನಿವೇಶನ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಪತ್ರ ಹಸ್ತಾಂತರಿಸಿದ ಸಿಎಂ ಬಸವರಾಜ ಬೊಮ್ಮಾಯಿ
ನಿವೇಶನ ಪತ್ರವನ್ನು ಬೊಮ್ಮಾಯಿ ಸಾಲುಮರದ ತಿಮ್ಮಕ್ಕನಿಗೆ ನೀಡಿದರು
TV9kannada Web Team

| Edited By: sandhya thejappa

Jun 25, 2022 | 11:25 AM

ಬೆಂಗಳೂರು: ಸಾಲುಮರದ ತಿಮ್ಮಕ್ಕ (Saalumarada Thimmakka) ಅವರಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಜೂನ್ 25) ನಿವೇಶನ ಪತ್ರವನ್ನು ಹಸ್ತಾಂತರಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಬೊಮ್ಮಾಯಿ ಅವರನ್ನು ಸಾಲುಮರದ ತಿಮ್ಮಕ್ಕ ಭೇಟಿಯಾಗಿದ್ದರು. ಈ ವೇಳೆ ಒಂದು ಸೈಟು ಹಾಗೂ ಮತ್ತಷ್ಟು ಮರ ಬೆಳೆಸಿ ಪೋಷಿಸಲು ಸೂಕ್ತ ಜಮೀನು ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಅದರಂತೆ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50X80 ಅಳತೆಯ ಸೈಟ್ ನೀಡಲಾಗಿದ್ದು, ಇಂದು ನಿವೇಶನ ಪತ್ರವನ್ನು ಹಸ್ತಾಂತರಿಸಿದ್ದಾರೆ.

ವೃಕ್ಷ ಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಜೂನ್ 22ರಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿರನ್ನ ಭೇಟಿಯಾಗಿದ್ದರು. ಈ ವೇಳೆ ಒಂದು ಸೈಟು ಹಾಗೂ ಮರಗಳನ್ನು ಬೆಳೆಸಲು ತಿಮ್ಮಕ್ಕ ಅವರಿಗೆ ಸೂಕ್ತ ಜಮೀನು ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದರು.

ಸಿಎಂ ಸೂಚನೆಯಂತೆ ಬಿಡಿಎ ಅಧ್ಯಕ್ಷ ಎಸ್​​ಆರ್​ ವಿಶ್ವನಾಥ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡ ಸೈಟ್ ನೋಂದಣಿ ಮಾಡಿದ್ದು, ಜೂನ್ 22ಕ್ಕೆ ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಹಂಚಿಕೆಯಾಗಿದೆ.

ಇದನ್ನೂ ಓದಿ: ಕಳೆದಿದ್ದ ಹದಿಹರೆಯದ ಮಗ ಬೆಂಗಳೂರಲ್ಲಿ ಸಿಕ್ಕಾಗ ಉತ್ತರದ ಭಾರತದ ಅವನಮ್ಮ ತಬ್ಬಿ ಮುದ್ದಾಡಿದ್ದು ನಮ್ಮನ್ನು ಭಾವುಕರನ್ನಾಗಿಸುತ್ತದೆ!

ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್​ನಲ್ಲಿರುವ ನಿವೇಶನದ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಸಾಲುಮರದ ತಿಮ್ಮಕ್ಕನಿಗೆ ಬಿಡಿಎ ವತಿಯಿಂದ ನಿವೇಶನ ಪತ್ರ ನೀಡಲಾಗಿತ್ತು. ಇಂದು ರಾಜ್ಯದ ಸಿಎಂ ರೇಸ್ ಕೋರ್ಸ್ ನಿವಾಸದಲ್ಲಿ ಸ್ವತಃ ತಾವೇ ಹಸ್ತಾಂತರಿಸಿದ್ದಾರೆ. ನಿವೇಶನಕ್ಕಾಗಿ ಸಮಾಜ ಕಲ್ಯಾಣ ಇಲಾಖೆ 1.12 ಕೋಟಿ ರೂ ಹಣ ಪಾವತಿಸಿದೆ ಎಂದು ಬಿಡಿಎ ಆಯುಕ್ತ ರಾಜೇಶ್ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮುಗೆ ನಮ್ಮ ಬೆಂಬಲ; ಮಾಯಾವತಿ ಘೋಷಣೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada