ಸಾಲುಮರದ ತಿಮ್ಮಕ್ಕಗೆ ಸಚಿವ​ ಸ್ಥಾನಮಾನ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಶಾಲು ಹಾಕಿ, ಕೈಗೆ ಕಡಗ ತೊಡಿಸಿ ಸನ್ನಾನಿಸಿದ್ದಾರೆ. ಇನ್ನು ಸಮಾರಂಭದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, 'ರಾಜ್ಯದ ಉದ್ದಕ್ಕೂ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ ಎಂದರು.

ಸಾಲುಮರದ ತಿಮ್ಮಕ್ಕಗೆ ಸಚಿವ​ ಸ್ಥಾನಮಾನ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಶಾಲು ಹಾಕಿ, ಕೈಗೆ ಕಡಗ ತೊಡಿಸಿದ್ರು.
Follow us
TV9 Web
| Updated By: ಆಯೇಷಾ ಬಾನು

Updated on:Jun 30, 2022 | 6:37 PM

ಬೆಂಗಳೂರು: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ(Saalumarada Thimmakka) ಅವರಿಗೆ ತಮ್ಮ 111ನೇ ವರ್ಷದ ಹುಟ್ಟು ಹಬ್ಬದ ಸಂಭ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಉನ್ನತ ಹುದ್ದೆ ನೀಡಿ ಗೌರವಿಸಿದ್ದಾರೆ. 111 ವರ್ಷ ಸಂಭ್ರಮದಲ್ಲಿರುವ ಸಾಲುಮರದ ತಿಮ್ಮಕ್ಕ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿ ‘ಗ್ರೀನ್ ಅಂಬಾಸಿಡರ್’ ಗೌರವ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಾಲುಮರದ ತಿಮ್ಮಕ್ಕ ಇಂಟರ ನ್ಯಾಷನಲ್ ಫೌಂಡೇಶನ್ ಸಂಸ್ಥೆ ಏರ್ಪಡಿಸಿದ್ದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಶಾಲು ಹಾಕಿ, ಕೈಗೆ ಕಡಗ ತೊಡಿಸಿ ಸನ್ನಾನಿಸಿದ್ದಾರೆ. ಇನ್ನು ಸಮಾರಂಭದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ‘ರಾಜ್ಯದ ಉದ್ದಕ್ಕೂ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ ಎಂದರು.

ಕರ್ಮದಿಂದ ಏನನ್ನೂ ಬೇಕಾದರೂ ಸಾಧಿಸಲು ಸಾಧ್ಯ. ಅದಕ್ಕೆ ವಿದ್ಯೆ, ನೆರವು, ಉದ್ದೇಶ ಎಂಬುದು ಬೇಕಿಲ್ಲ. ಒಂದು ಧ್ಯೇಯವನ್ನಿಟ್ಟುಕೊಂಡು, ಕಾಯಕನಿಷ್ಠೆಯಿಂದ, ಸರ್ವರಿಗೂ ಒಳಿತಾಗುವಂತೆ ಕೆಲಸ ಮಾಡಿದರೇ, ಬದಲಾವಣೆಯ ಪ್ರೇರಕ ಶಕ್ತಿಯಾಗಬಹುದು ಎಂಬುದನ್ನು ಸಾಲುಮರದ ತಿಮ್ಮಕ್ಕನವರು ಸಾಧಿಸಿ ತೋರಿದ್ದಾರೆ. ಸಾಲು ಮರದ ತಿಮ್ಮಕ್ಕನವರ ಕಾರ್ಯಗಳು ಸಮಾಜಕ್ಕೆ ಉಪಯೋಗವಾಗುವುದಲ್ಲದೇ, ಹಲವಾರು ಜನರಿಗೆ ಪ್ರೇರಕವಾಗಿವೆ. ಅವರಿಗೆ ಬಂದಿರುವ ಪ್ರಶಸ್ತಿಗಳು, ಆ ಪ್ರಶಸ್ತಿಗಳ ಮೌಲ್ಯ ಹೆಚ್ಚಿದೆ. ತಿಮ್ಮಕ್ಕನವರ ಸೇವೆಯನ್ನು ಈ ನಾಡು ಎಂದಿಗೂ ಮರೆಯಲಾರದು ಎಂದು ಪ್ರಶಂಸಿಸಿದ್ದಾರೆ. ಇದನ್ನೂ ಓದಿ: ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಪತ್ರ ಹಸ್ತಾಂತರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕಾಯಕ ನಿಷ್ಠೆ ಮಾಡಿಕೊಂಡು ಸರ್ವರಿಗೂ ಒಳಿತು ಮಾಡುವ ಕೆಲಸ ಮಾಡಿದರೆ ಇಡೀ ಜಗತ್ತಿನಲ್ಲಿ ಬದಲಾವಣೆ ಮಾಡುವ ಪ್ರಭಾವಿಶಕ್ತಿ ಆಗಬಹುದು. ಎಂಬುದಕ್ಕೆ ನಮ್ಮ ಕರ್ನಾಟಕದಲ್ಲಿ, ನಮ್ಮ ನಡುವೆ ಇರುವುದು ಸಾಲುಮರದ ತಿಮ್ಮಕ್ಕ. ಜೀವನದಲ್ಲಿ ಎರಡು ಕೆಲಸ ಬಹಳ ಕಠಿಣ. ಹುಟ್ಟಿದಾಗ ಮುಗ್ಧತೆಯಿಂದ ಇರುತ್ತೇವೆ. ಮುಂದೆ ಮುಗ್ಧತೆಯನ್ನು ಕಳೆದುಕೊಳ್ಳುತ್ತೇವೆ. ಮುಗ್ಧತೆಯನ್ನು ಕೊನೆವರೆಗೂ ಇಟ್ಟುಕೊಳ್ಳುವುದು ಬಹಳ ಕಠಿಣ. ಸದಾ ಕಾಲ ಆತ್ಮಸಾಕ್ಷಿಯಿಂದ ನಡೆದುಕೊಳ್ಳುವುದು ಕಠಿಣ. ಈ ಎರಡು ಜಯಿಸಿದವರು ಬದುಕನ್ನು ಜಯಿಸಿದವರು ಮಾನವರಲ್ಲ, ದೇವ ಮಾನವರು. ಸಾಲು ಮರದ ತಿಮ್ಮಕ್ಕ ಅಜ್ಜಿ ಅವರ ಮುಖದಲ್ಲಿ ಮಗುವಿನ ಮುಗ್ಧತೆ ಇದೆ. ಅದು ಅವರ ಪ್ರಾಂಜಲವಾದ ಮನಸ್ಸು, ಶುದ್ಧ ಅಂತಃಕರಣದಿಂದ ಮಾಡಿರುವ ಕಾಯಕಯೋಗಿ. ಹೀಗಾಗಿ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಸಾಲುಮರದ ತಿಮ್ಮಕ್ಕ ಅವರನ್ನು ಹೊಗಳಿದ್ದಾರೆ.

Published On - 6:22 pm, Thu, 30 June 22