ರಸ್ತೆ, ಮೆಟ್ರೋ, ಕೆರೆಗಳ ಅಭಿವೃದ್ಧಿ; ಮಿಷನ್ 2022 ಪ್ರಗತಿ ಪರಿಶೀಲನ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಸಲಹೆ

ರಸ್ತೆ, ಮೆಟ್ರೋ, ಕೆರೆಗಳ ಅಭಿವೃದ್ಧಿ; ಮಿಷನ್ 2022 ಪ್ರಗತಿ ಪರಿಶೀಲನ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಸಲಹೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Basavaraj Bommai: ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು 128 ಕೋಟಿ ರೂ. ವೆಚ್ಚದಲ್ಲಿ 25 ಕೆರೆಗಳ ಅಭಿವೃದ್ಧಿ ಕಾರ್ಯ ಜನವರಿ ಅಂತ್ಯದ ವೇಳೆಗೆ ಪೂರ್ಣ ಮಾಡಬೇಕು. ಈ ಕೆರೆಗಳಿಗೆ ಒಳಚರಂಡಿ ನೀರು ಸೇರದಂತೆ ಕ್ರಮ ವಹಿಸುವಂತೆ ತಿಳಿಸಿದರು.

TV9kannada Web Team

| Edited By: ganapathi bhat

Nov 07, 2021 | 9:52 PM

ಬೆಂಗಳೂರು: ನಗರದ ಕೇಂದ್ರ ಭಾಗದ ರಸ್ತೆಗಳ ಅತ್ಯುತ್ತಮ ನಿರ್ವಹಣೆ, ಸುಗಮ ಸಂಚಾರ ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸುತ್ತೇನೆ. ಮೆಟ್ರೋ ರೈಲು ಯೋಜನೆ ಮೊದಲೇ ಪೂರ್ಣಗೊಳಿಸಬೇಕು. ನಿಗದಿತ ಗುರಿಗೆ ಒಂದು ವರ್ಷ ಮೊದಲೇ ಪೂರ್ಣಗೊಳಿಸಿ ಎಂದು ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನೆ ಸಭೆ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ನವೆಂಬರ್ 7) ಹೇಳಿದರು. ಈ ಬಗ್ಗೆ, ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕೆಲ ಸಲಹೆ ನೀಡಿದರು.

ಉಪನಗರ ರೈಲು ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಗೆ 15.40 ಕಿ.ಮೀ. ಮಾರ್ಗ ನಿರ್ಮಾಣಕ್ಕೆ ಕೆಐಎಡಿಬಿ ಮೂಲಕ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸೂಚನೆ ಕೊಟ್ಟರು. ಕೆ 100 ವಾಟರ್ ವೇ ಯೋಜನೆಯಡಿ 11 ಕಿ.ಮೀ. ರಾಜಕಾಲುವೆಯನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಯಲ್ಲಿ ಒಳಚರಂಡಿ ನೀರು ಕಾಲುವೆಗೆ ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು. ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು 128 ಕೋಟಿ ರೂ. ವೆಚ್ಚದಲ್ಲಿ 25 ಕೆರೆಗಳ ಅಭಿವೃದ್ಧಿ ಕಾರ್ಯ ಜನವರಿ ಅಂತ್ಯದ ವೇಳೆಗೆ ಪೂರ್ಣ ಮಾಡಬೇಕು. ಕೆರೆ ಅಭಿವೃದ್ಧಿ ಮಾಡುವಾಗ ಒತ್ತುವರಿ ತೆರವುಗೊಳಿಸಿ ಹಸಿರು ಬೇಲಿ ಹಾಕುವಂತೆ ಸೂಚನೆ ನೀಡಿದರು. ಈ ಕೆರೆಗಳಿಗೆ ಒಳಚರಂಡಿ ನೀರು ಸೇರದಂತೆ ಕ್ರಮ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ನೀಡಿದ ಸಲಹೆಗಳು: * ನಗರದ ಕೇಂದ್ರ ಭಾಗದ ರಸ್ತೆಗಳ ಅತ್ಯುತ್ತಮ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ * ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ * ಬೆಂಗಳೂರು ಮೆಟ್ರೋ ರೈಲು ಯೋಜನೆಯನ್ನು ನಿಗದಿತ ಗುರಿಗೆ ಒಂದು ವರ್ಷ ಮೊದಲೇ ಪೂರ್ಣಗೊಳಿಸಲು ಸೂಚನೆ ಹಾಗೂ ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ * ಉಪನಗರ ರೈಲು ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಗೆ 15.40 ಕಿ.ಮೀ. ಮಾರ್ಗ ನಿರ್ಮಾಣಕ್ಕೆ ಕೆಐಎಡಿಬಿ ಮೂಲಕ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದಾರೆ * ಕೆ 100 ವಾಟರ್ ವೇ ಯೋಜನೆಯಡಿ 11 ಕಿ.ಮೀ. ರಾಜಕಾಲುವೆಯನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಯಲ್ಲಿ ಒಳಚರಂಡಿ ನೀರು ಕಾಲುವೆಗೆ ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ * ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು 128 ಕೋಟಿ ರೂ. ವೆಚ್ಚದಲ್ಲಿ 25 ಕೆರೆಗಳ ಅಭಿವೃದ್ಧಿ ಕಾರ್ಯ ಜನವರಿ ಅಂತ್ಯದ ವೇಳೆಗೆ ಪೂರ್ಣ ಆಗುವ ಬಗ್ಗೆ ಹೇಳಿದ್ದಾರೆ * ಕೆರೆ ಅಭಿವೃದ್ಧಿ ಮಾಡುವಾಗ ಒತ್ತುವರಿ ತೆರವುಗೊಳಿಸಿ ಹಸಿರು ಬೇಲಿ ಹಾಕುವಂತೆ ಸೂಚನೆ ಕೊಟ್ಟಿದ್ದಾರೆ * ಈ ಕೆರೆಗಳಿಗೆ ಒಳಚರಂಡಿ ನೀರು ಸೇರದಂತೆ ಕ್ರಮ ವಹಿಸುವಂತೆ ಸೂಚನೆ ಕೊಡಲಾಗಿದೆ

ಇದನ್ನೂ ಓದಿ: ಅಪ್ಪು ಮೇಲಿನ ಜನರ ಪ್ರೀತಿ ಅನುಸಾರ ಸರ್ಕಾರ ಅವರನ್ನು ಗೌರವಿಸಲಿದೆ: ಬಸವರಾಜ ಬೊಮ್ಮಾಯಿ ಹೇಳಿಕೆ

ಇದನ್ನೂ ಓದಿ: Bengaluru Rain: ರಾಜಕಾಲುವೆಯಲ್ಲಿ ಹೂಳು ತುಂಬಿರುವುದೇ ಹೆಚ್ಚು ಸಮಸ್ಯೆ- ತುರ್ತು ಸಭೆ ಬಳಿಕ ಸಿಎಂ ಬೊಮ್ಮಾಯಿ

Follow us on

Related Stories

Most Read Stories

Click on your DTH Provider to Add TV9 Kannada