Lalbagh Flower Show: ಪುಷ್ಪಾರ್ಚನೆ ಮಾಡುವ ಮೂಲಕ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್​ಬಾಗ್​ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ.

Lalbagh Flower Show: ಪುಷ್ಪಾರ್ಚನೆ ಮಾಡುವ ಮೂಲಕ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಲಾಲ್​ಬಾಗ್ ಫಲಪುಷ್ಪ ಪ್ರದರ್ಶನ
Follow us
TV9 Web
| Updated By: ಆಯೇಷಾ ಬಾನು

Updated on:Jan 20, 2023 | 12:12 PM

ಬೆಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆ ಇಂದಿನಿಂದ 10 ದಿನಗಳ ಕಾಲ ಲಾಲ್​ಬಾಗ್​ನಲ್ಲಿ ನಡೆಯಲಿರುವ 213ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಸಿಕ್ಕಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಲಾಲ್​ಬಾಗ್ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ.

ಉದ್ಘಾಟನೆ ಬಳಿಕ ಮಾತನಾಡಿದ ಅವರು, ಇಂದು ಬಹಳ ಸಂತೋಷದಿಂದ 213 ಪ್ಲವರ್ ಶೋ ಉದ್ಘಾಟನೆ ಮಾಡಿದ್ದೇನೆ. ಈ ಬಾರಿಯ ಫ್ಲವರ್ ಶೋ ತುಂಬ ಚೆನ್ನಾಗಿ ಮೂಡಿಬಂದಿದೆ. ಪ್ರತಿವರ್ಷ ಲಕ್ಷಗಟ್ಟಲೆ ಜನರು ಈ ಫ್ಲವರ್ ಶೋಗೆ ಬರ್ತಾರೆ. ಈ ಬಾರಿ 10 ರಿಂದ15 ಲಕ್ಷ ಜನರು ಬರ್ತಾರೆ. ಜನರನ್ನ ನಿಭಾಯಿಸುವುದಕ್ಕೆ ಎಲ್ಲಾ ರೀತಿಯ ಸಿದ್ದತೆಯನ್ನ ತೋಟಗಾರಿಕೆ ಇಲಾಖೆ ಮಾಡಿಕೊಂಡಿದೆ. ತೋಟಾಗಾರಿಕೆಯ ಫಲಪುಷ್ಪ ಪ್ರದರ್ಶನ ವಿಶಿಷ್ಟವಾದದ್ದು ಪ್ರದರ್ಶನದಲ್ಲಿ ನಮ್ಮ ರಾಜ್ಯ ಸಂಪತ್ತು ಎಷ್ಟು ಇದೆ, ಎಷ್ಟು ವಿಶೇಷ ಹಾಗೂ ವಿಶಾಲವಾಗಿದೆ ಎಂಬುವುದನ್ನ ತಿಳಿಸುತ್ತದೆ. ನಗರದಲ್ಲಿ ತೋಟಗಾರಿಕೆಯ ಹಸೀರಿಕರಣವನ್ನ ಹೆಚ್ಚಿಸಲು ಅನುಧಾನವನ್ನ ಮೀಸಲಿಡುತ್ತಿದ್ದೇವೆ. ಈ ವರ್ಷದ ಬಜೆಟ್ ನಲ್ಲಿ 100 ಕೋಟಿಯನ್ನ ಹಸಿರೀಕರಣ ಹೆಚ್ಚಿಸಲು ಮೀಸಲಿಟ್ಟಿದ್ದೇವೆ. ಗುಡ್ಡಗಾಡು ಪ್ರದೇಶದಲ್ಲಿ ಹಸೀಕರಣ ಮಾಡುತ್ತೇವೆ.

ತೋಟಗಾರಿಕೆ ಫಾಮ್ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ‌ ಮಾಡುತ್ತೇವೆ. ತೋಟಗಾರಿಕೆಯಲ್ಲಿ ಹಸಿರೀಕರಣ ಅಷ್ಟೇ ಅಲ್ಲದೇ ಉತ್ಪಾದನೆಯು ಹೆಚ್ಚಾಗಲಿದೆ. ಬೆಂಗಳೂರು ಗಾರ್ಡಾನ್ ಸಿಟಿ ಎಂದು ಹೆಸರುವಾಸಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಗಾರ್ಡನ್ ಸಿಟಿ ಅಭಿವೃದ್ಧಿ ಕಡಿಮೆಯಾಗಿದೆ. ಇನ್ಮುಂದೆ ಗಾರ್ಡಾನ್ ಸಿಟಿ ಹೆಸರಿಗೆ ತಕ್ಕಂತೆ ಗಾರ್ಡಾನ್ ಗಳನ್ನ ಅಭಿವೃದ್ಧಿ ಪಡಿಸುತ್ತೇವೆ. ಬಿಬಿಎಂಪಿ ವ್ಯಾಪ್ತಿಯಾ ಗಾರ್ಡನ್ ಹಾಗೂ ತೋಟಗಾರಿಕೆ ಗಾರ್ಡನ್ ಗಳು ಅಭಿವೃದ್ಧಿ ಪಡಿಸುತ್ತೇವೆ. ಫಲಪುಷ್ಪ ಪ್ರದರ್ಶನ ಈ ಬಾರಿ ಯಶಸ್ವಿಯಾಗಲಿ ಎಂದರು.

ಲಾಲ್​ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಬೆಂಗಳೂರಿನ ಇತಿಹಾಸ

ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್​ಬಾಗ್​ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಸಾರಲಿದ್ದಾರೆ. ಬೆಂಗಳೂರಿನ 1500 ವರ್ಷಗಳ ಹಿಂದಿನ ಇತಿಹಾಸದ ಬಗ್ಗೆ, ಬೆಂಗಳೂರಿನ ಸ್ವಾತಂತ್ರ್ಯ ಪೂರ್ವ & ನಂತರದ ಇತಿಹಾಸದ ಮಾಹಿತಿಯನ್ನು ದೇಶದ ವಿವಿಧ ಬಗೆಯ ಪುಷ್ಪಗಳ ಮೂಲಕ ಪ್ರದರ್ಶಿಸಲಾಗುತ್ತೆ. ಫ್ಲವರ್​ ಶೋಗೆ ಬರುವ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು ಈ ಬಾರಿ ಫ್ಲವರ್ ಶೋನಲ್ಲಿ 15-20 ಲಕ್ಷ ಜನ ಸೇರುವ ಸಾಧ್ಯತೆ ಇದೆ.

ಇದನ್ನೂ ಓದಿ: Lalbagh Flower Show: ಲಾಲ್​ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ತಯಾರಿ

ಈ ಬಾರಿ ಒಟ್ಟು112 ಪುಷ್ಪ ಡೋಮ್ ಪ್ರದರ್ಶನವಿದ್ದು, ಹಾಲೆಂಡ್, ಕೊಲಂಬಿಯಾ, ಇಸ್ರೇಲ್, ಚಿಲಿ, ನೆದರ್ ಲ್ಯಾಂಡ್ಸ್, ಬೆಲ್ಜಿಯಂ, ಕೀನ್ಯಾ, ಆಸ್ಟ್ರೇಲಿಯಾ, ಯಥೋಪಿಯಾ ಸೇರಿದಂತೆ 11 ವಿದೇಶಗಳ 69 ಜಾತಿಯ ಹೂಗಳನ್ನು ಪ್ರದರ್ಶಿಸಲಾಗುತ್ತಿದೆ. ಡಾರ್ಜಿಲಿಂಗ್ ನ ಸಿಂಬಡಿಯ ಆರ್ಕಿಡ್ಸ್ ಹೂವು ಈ ಬಾರಿಯ ಮೇನ್ ಅರ್ಟ್ರಾಕ್ಷನ್ ಆಗಿದೆ. ಇನ್ನೂ ತೋಟಗಾರಿಕೆ ಇಲಾಖೆ ವತಿಯಿಂದಲೇ 6 ಲಕ್ಷ ಹೂವಿನ ಕುಂಡಗಳನ್ನು ಪ್ರದರ್ಶಿಸಲಾಗುತ್ತಿದೆ.

ವಯಸ್ಕರಿಗೆ ಸಾಮಾನ್ಯ ದಿನಗಳಲ್ಲಿ 70 ರೂಪಾಯಿ, ರಾಜಾ ದಿನಗಳಲ್ಲಿ ‌75 ರೂಪಾಯಿ ನಿಗದಿ ಮಾಡಲಾಗಿದೆ. ಇನ್ನೂ 12 ವರ್ಷ ಒಳಗಿನ ಮಕ್ಕಳಿಗೆ ಎಲ್ಲಾ ದಿನಗಳಲ್ಲಿ 30 ರೂಪಾಯಿ ಫಿಕ್ಸ್ ಮಾಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಾಲ್ಕು ಗೇಟ್ ಗಳಲ್ಲಿಯೂ ಟಿಕೆಟ್ ಕೌಂಟರ್ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:54 am, Fri, 20 January 23

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ