ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ
ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನೆಗೆ ಶನಿವಾರ ಚಾಲನೆ ನೀಡಲಾಗಿದೆ.
ಬೆಂಗಳೂರು: ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನೆಗೆ ಶನಿವಾರ ಚಾಲನೆ ನೀಡಲಾಗಿದೆ. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ, ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಈ ವೇಳೆ ಉಪಸ್ಥಿತರಿದ್ದರು.
ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ 2 ವಾರ ಸದನ ನಡೆಸುವುದು ಉತ್ತಮ ಎಂದು ಸಿಎಂ ಹೇಳಿದ್ದಾರೆ.
ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುವರ್ಣಸೌಧದ ಸುತ್ತ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಟಿವಿ9ಗೆ ಬೆಳಗಾವಿಯಲ್ಲಿ ಡಿಸಿಪಿ ವಿಕ್ರಂ ಆಮಟೆ ಈ ಕುರಿತು ಹೇಳಿಕೆ ನೀಡಿದ್ದಾರೆ. ನಿಷೇಧಾಜ್ಞೆ ಹಿನ್ನೆಲೆ ಅನುಮತಿ ಇಲ್ಲದೆ ಧರಣಿ ಮಾಡುವಂತಿಲ್ಲ. ನಿಗದಿ ಪಡಿಸಿದ ಸ್ಥಳಗಳಲ್ಲೇ ಪ್ರತಿಭಟನೆ ನಡೆಸುವಂತೆ ಸೂಚನೆ ಕೊಡಲಾಗಿದೆ. ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆಯೂ ಹೇಳಲಾಗಿದೆ.
ಇದನ್ನೂ ಓದಿ: ಬೆಳಗಾವಿ: ಈ ಬಾರಿ ಸುವರ್ಣಸೌಧದಲ್ಲೇ ಅಧಿವೇಶನ- ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
ಇದನ್ನೂ ಓದಿ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ ಗೆಹ್ಲೋಟ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ
Published On - 4:57 pm, Sat, 11 December 21