ಕಾಶಿಯಾತ್ರೆ ಕೈಗೊಳ್ಳುವವರಿಗೆ ₹5 ಸಾವಿರ ಸಹಾಯಧನ ನೀಡಲಾಗುವುದು. ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸಹಾಯಧನ ನೀಡುವುದಾಗಿ ಘೋಷಿಸಲಾಗಿದೆ. ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರುಗೆ ಪ್ಯಾಕೇಜ್ ಟ್ರಿಪ್ ಸೇವೆ ಆರಂಭ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗುಲಗಳ ಸ್ವಾಯತ್ತತೆ, ದೇಗುಲಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂಪಾಯಿ ವೆಚ್ಚ ನೀಡಲಾಗಿದೆ. ತಸ್ತೀಕ್ ಮೊತ್ತ 60 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ
ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡಲಾಗಿದೆ. 20 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆಯಲ್ಲಿ ಕನ್ನಡ ಭವನ, ವಿಶಿಷ್ಟ ಕಲೆಗಳ ಉತ್ತೇಜನಕ್ಕೆ 4 ಸಾಂಸ್ಕೃತಿಕ ಶಿಬಿರ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Budget 2022: ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್; ಯಾವ ಇಲಾಖೆಗೆ ಎಷ್ಟು ಅನುದಾನ?
ಇದನ್ನೂ ಓದಿ: Karnataka Budget 2022; ಬಜೆಟ್ನಲ್ಲಿ ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ