ಬೆಂಗಳೂರಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ: ಕೈಲಿ ಕನ್ನಡ ಬಾವುಟ, ಗೀತೆಗಳ ಅನುರಣನ

| Updated By: ಆಯೇಷಾ ಬಾನು

Updated on: Oct 28, 2022 | 12:59 PM

Koti Kanta Gayana: ಕಂಠೀರವ ಸ್ಟೇಡಿಯಂನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಬಾವುಟವನ್ನು ಹಿಡಿದು ಸುಮಾರು 30 ಸಾವಿರ ಜನರಿಂದ ಗಾಯನ ನಡೆಯುತ್ತಿದೆ.

ಬೆಂಗಳೂರಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ: ಕೈಲಿ ಕನ್ನಡ ಬಾವುಟ, ಗೀತೆಗಳ ಅನುರಣನ
ಬೆಂಗಳೂರಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ
Follow us on

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವ(Kannada Rajyotsava 2022) ಪ್ರಯುಕ್ತ ರಾಜ್ಯ ಸರ್ಕಾರ ಇಂದು ‘ಕೋಟಿ ಕಂಠ ಗಾಯನ’(Koti Kanta Gayana) ಕಾರ್ಯಕ್ರಮ ಹಮ್ಮಿಕೊಂಡಿದ್ದು ರಾಜ್ಯಾದ್ಯಂತ ಗಾಯನ ಮೊಳಗಿದೆ. ಕನ್ನಡ, ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಮೈಸೂರು, ಮಂಡ್ಯ, ಧಾರವಾಡ, ಕೋಲಾರ, ಯಾದಗಿರಿ, ಕೊಪ್ಪಳ, ಬೆಳಗಾವಿ, ಮಂಗಳೂರು, ಚಿತ್ರದುರ್ಗ, ಕಲಬುರಗಿ ಸೇರಿ ಹಲವೆಡೆ ಸಾವಿರಾರು ಜನರು ಕನ್ನಡದ ಗಾಯನ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ರಾಜ್ಯದೆಲ್ಲೆಡೆ ಒಂದೇ ಸ್ವರದಲ್ಲಿ ಕೋಟಿ ಕಂಠಗಳ ಗಾಯನ ಮೊಳಗಿದೆ.

ಕಂಠೀರವ ಸ್ಟೇಡಿಯಂನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಬಾವುಟವನ್ನು ಹಿಡಿದು ಸುಮಾರು 30 ಸಾವಿರ ಜನರಿಂದ ಗಾಯನ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಯಡಿಯೂರಪ್ಪ, ಸಚಿವ ಸುನಿಲ್ ಕುಮಾರ್, ಅಶೋಕ್, ಡಿವಿಎಸ್​, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿಧ್ಯಾಚೇತನ, ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡು ಸೇರಿದಂತೆ ಒಟ್ಟು ಆರು ಹಾಡುಗಳನ್ನ ಹಾಡಿ ಗಾಯಕರು ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಇಂದು ಕೋಟಿ ಕಂಠ ಗಾಯನ: 1.15 ಕೋಟಿ ಜನರಿಂದ ನೋಂದಣಿ, ಜನಮನ ಸೆಳೆದ ವಿನೂತನ ಅಭಿಯಾನ

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಎಲ್ಲರೂ ಕನ್ನಡ ಗೀತೆ ಹಾಡುವ ಮೂಲಕ ಒಗ್ಗಟ್ಟನ್ನು ತೋರಿಸಿದ್ದಾರೆ. ನಾವೆಲ್ಲ ಕನ್ನಡಕ್ಕಾಗಿ ಒಗ್ಗಟ್ಟಾಗಿದ್ದೇವೆ ಎಂಬುದನ್ನು ತೋರಿಸಿದ್ದಾರೆ. ನ.1ರಂದು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡ್ತೇವೆ. ನ.1ರಂದು ಪುನೀತ್​ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತೆ. ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದರು.

ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿದ್ದೇವೆ. ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನ ಪುನೀತ್ ರಾಜ್‌ಕುಮಾರ್. ಕಾರ್ಯಕ್ರಮಕ್ಕೆ ರಜನಿಕಾಂತ್, ಜ್ಯೂನಿಯರ್ ಎನ್‌ಟಿ ಆರ್‌ ಅವ್ರಿಗೆ ಆಹ್ವಾನ ನೀಡಲಾಗಿದೆ. ಅವರು ಕೂಡ ಭಾಗಿಯಾಗ್ತಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್‌ಕುಮಾರ್ ಕುಟುಂಬದವರು ಭಾಗಿಯಾಗ್ತಾರೆ ಎಂದರು.

Published On - 12:47 pm, Fri, 28 October 22