ಬೆಂಗಳೂರು: ಅಮೃತ ನಗರೋತ್ಥಾನ ಸಭೆ; 9 ನಗರ ಸ್ಥಳೀಯ ಸಂಸ್ಥೆಗಳ 110.50 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಆ 24) ಗೃಹ ಕಚೇರಿ ಕೃಷ್ಣಾದಲ್ಲಿ ಅಮೃತ ನಗರೋತ್ಥಾನ ಸಭೆ ನಡೆಸಿದರು.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಇಂದು (ಆ 24) ಗೃಹ ಕಚೇರಿ ಕೃಷ್ಣಾದಲ್ಲಿ ಅಮೃತ ನಗರೋತ್ಥಾನ ಸಭೆ ನಡೆಸಿದರು. ಬೆಂಗಳೂರು ನಗರ ಜಿಲ್ಲೆಯ ಅಮೃತ ನಗರೋತ್ಥಾನ ಹಂತ 4 ರ 9 ನಗರ ಸ್ಥಳೀಯ ಸಂಸ್ಥೆಗಳ 110.50 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದರು.
ಬೆಂಗಳೂರು ನಗರ ಜಿಲ್ಲೆಯ ಅಮೃತ ನಗರೋತ್ಥಾನ ಹಂತ 4 ರ 9 ನಗರ ಸ್ಥಳೀಯ ಸಂಸ್ಥೆಗಳ 110.50 ಕೋಟಿ ರೂ. ಕ್ರಿಯಾ ಯೋಜನೆಗೆ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಮುಖ್ಯಮಂತ್ರಿ @BSBommai ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
1/2 pic.twitter.com/wc227YsEim
— CM of Karnataka (@CMofKarnataka) August 24, 2022
ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ, ದಾಸರಹಳ್ಳಿ ಶಾಸಕ ಮಂಜುನಾಥ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Published On - 9:14 pm, Wed, 24 August 22