ಬೆಂಗಳೂರು: ಸಂಚಾರ ದಟ್ಟಣೆ ನಿವಾರಣೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ; ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ ಸಿಎಂ

ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದು, ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಬೆಂಗಳೂರಿನ ಹೆಬ್ಬಾಳ, ಮಹದೇವಪುರ ಹೊರವರ್ತುಲ ರಸ್ತೆ, ಸಿಲ್ಕ್​​ ಬೋರ್ಡ್​ ಜಂಕ್ಷನ್​, ಸೇಂಟ್​ಜಾನ್ಸ್ ಆಸ್ಪತ್ರೆ, ಭಟ್ಟರಹಳ್ಳಿ ಜಂಕ್ಷನ್​, ವೈಟ್​​ಫೀಲ್ಡ್​​​ ರಸ್ತೆ ಸೇರಿದಂತೆ  10 ಪ್ರಮುಖ ಪ್ರದೇಶಗಳಲ್ಲಿ ಟ್ರಾಫಿಕ್ ನಿವಾರಿಸಲು ಸೂಚನೆ ನೀಡಿದ್ದಾರೆ.

ಬೆಂಗಳೂರು: ಸಂಚಾರ ದಟ್ಟಣೆ ನಿವಾರಣೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ; ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9kannada Web Team

| Edited By: Vivek Biradar

Jun 25, 2022 | 7:09 PM

ಬೆಂಗಳೂರು: ನಗರದ ಸಂಚಾರ ದಟ್ಟಣೆ (Traffic Jam) ನಿವಾರಣೆಗೆ ಗೃಹ ಕಚೇರಿ ಕೃಷ್ಣಾದಲ್ಲಿ (Krishna)  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai)  ಸಭೆ ಕರೆದಿದ್ದು, ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಬೆಂಗಳೂರಿನ ಹೆಬ್ಬಾಳ, ಮಹದೇವಪುರ ಹೊರವರ್ತುಲ ರಸ್ತೆ, ಸಿಲ್ಕ್​​ ಬೋರ್ಡ್​ ಜಂಕ್ಷನ್​, ಸೇಂಟ್​ಜಾನ್ಸ್ ಆಸ್ಪತ್ರೆ, ಭಟ್ಟರಹಳ್ಳಿ ಜಂಕ್ಷನ್​, ವೈಟ್​​ಫೀಲ್ಡ್​​​ ರಸ್ತೆ ಸೇರಿದಂತೆ  10 ಪ್ರಮುಖ ಪ್ರದೇಶಗಳಲ್ಲಿ ಟ್ರಾಫಿಕ್ ನಿವಾರಿಸಲು ಸೂಚನೆ ನೀಡಿದ್ದಾರೆ. ಟ್ರಾಫಿಕ್​ ಸಿಗ್ನಲ್​ಗಳನ್ನು ಸಿಂಕ್ರೊನೈಸ್‌​ ಮಾಡಬೇಕು ಮತ್ತು ಇದರ ಮೇಲುಸ್ತುವಾರಿಯನ್ನು ಖುದ್ದು ಡಿಸಿಪಿಗಳೇ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರು, ಪೊಲೀಸ್ ಆಯುಕ್ತರು, ಬಿಎಂಆರ್‍ಸಿಎಲ್, ಬಿಡಬ್ಲ್ಯುಎಸ್ಎಸ್ ಬಿ ಅಧಿಕಾರಿಗಳು ಒಟ್ಟಾಗಿ ಪರಿಹಾರ ಕ್ರಮಗಳನ್ನು ರೂಪಿಸಿ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿನ ಗುಂಡಿ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಕ್ರಮ ವಹಿಸಬೇಕು. ಮಳೆಯಾದಾಗ ನೀರುನುಗ್ಗಿ ಸಂಚಾರ ದಟ್ಟಣೆಯಾಗುತ್ತಿರುವ 50 ಸ್ಥಳಗಳನ್ನು ತಕ್ಷಣ ದುರಸ್ತಿ ಮಾಡಬೇಕು. ಸಿಬಿಡಿ, ಹೈಡೆನ್ಸಿಟಿ ಕಾರಿಡಾರ್ ನಲ್ಲಿ 48 ಕೋಟಿ ರೂ. ವೆಚ್ಚದಲ್ಲಿ ಸಿಗ್ನಲ್ ಗಳ ಸಿಂಕ್ರೊನೈಸೇಷನ್ ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸಲು ಸಿಎಂ ಸೂಚನೆ ನೀಡಿದ್ದಾರೆ.

ಇದನ್ನು ಓದಿ: Bangalore Power Cut: ಜೂನ್​ 27 ರಿಂದ ಜೂನ್ 29ರವರಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ

ಬಿಡಬ್ಲ್ಯುಎಸ್ ಎಸ್ ಬಿ, BMRCL ನವರು ಕಾಮಗಾರಿಗಾಗಿ ಅಗೆದ ರಸ್ತೆ ಹಾಗೆಯೇ ಇವೆ. ಈ ಕಾಮಗಾರಿ ಪೂರ್ಣಗೊಂಡ ತಕ್ಷಣವೇ ಆ ರಸ್ತೆಗಳ ದುರಸ್ತಿ ಮಾಡಬೇಕು. ಸಂಚಾರ ಪೊಲೀಸರ ಸಂಖ್ಯಾಬಲ ಹೆಚ್ಚಿಸಿ. ವಾಹನ ದಟ್ಟಣೆ ನಿಯಂತ್ರಣ ಕ್ಕೆ ಆದ್ಯತೆ ನೀಡಿ. ರಾಷ್ಟ್ರೀಯ ಹೆದ್ದಾರಿಯಿಂದ ನಗರ ಪ್ರವೇಶಿಸುವ ಪ್ರಮುಖ ರಸ್ತೆಗಳಲ್ಲಿ ಸುಗಮ ಸಂಚಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ನಿರ್ಭಯಾ ಯೋಜನೆಯಲ್ಲಿ ಅಳವಡಿಸುವ ಕ್ಯಾಮರಾಗಳಲ್ಲಿ ಟ್ರಾಫಿಕ್ ಸಿಗ್ನಲ್‍ ಗಳಲ್ಲಿ ಆದ್ಯತೆ ಮೇರೆಗೆ ಕ್ಯಾಮರಾ ಅಳವಡಿಸಬೇಕು. ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಮತ್ತು ಹೈಡೆನ್ಸಿಟಿ ರಸ್ತೆಗಳ ಒತ್ತುವರಿ, ಅಡೆತಡೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು ಎಂದು ಡಿಜಿಪಿ ಪ್ರವೀಣ್ ಸೂದ್ ಗೆ ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ನೇಮಕಾತಿ: ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

ನಗರ ಪ್ರದೇಶದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಕುರಿತು ಕೈಗೊಂಡ ಕ್ರಮಗಳ ಕುರಿತು ತಮಗೆ ವರದಿ ಸಲ್ಲಿಸಬೇಕು. ಬಳಿಕ ಖುದ್ದು ವಲಯವಾರು ಸಭೆ ನಡೆಸುವುದಾಗಿ ಸಿಎಂ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada