Bengaluru Rain: ಕೆರೆಗಳ ಸಮಸ್ಯೆಗೆ ಶಾಶ್ವತ ಪರಿಹಾರ; ಪರಿಸ್ಥಿತಿಗೆ ತಕ್ಕ ಹಾಗೆ ಮಾಸ್ಟರ್ ಪ್ಲ್ಯಾನ್ ರಚಿಸುತ್ತೇವೆ: ಸಿಎಂ ಬೊಮ್ಮಾಯಿ

TV9 Digital Desk

| Edited By: ganapathi bhat

Updated on: Nov 24, 2021 | 2:39 PM

Bengaluru News: ಕೆರೆಗಳ ಸಮಸ್ಯೆಗೆ ಶಾಶ್ವತ ಪರಿಹಾರದ ಕೆಲಸ ಮಾಡುತ್ತೇವೆ. ಇವತ್ತಿನ ಪರಿಸ್ಥಿತಿಗೆ ತಕ್ಕ ಹಾಗೆ ಮಾಸ್ಟರ್ ಪ್ಲ್ಯಾನ್ ರಚಿಸ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Bengaluru Rain: ಕೆರೆಗಳ ಸಮಸ್ಯೆಗೆ ಶಾಶ್ವತ ಪರಿಹಾರ; ಪರಿಸ್ಥಿತಿಗೆ ತಕ್ಕ ಹಾಗೆ ಮಾಸ್ಟರ್ ಪ್ಲ್ಯಾನ್ ರಚಿಸುತ್ತೇವೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)

ಬೆಂಗಳೂರು: ನಗರದಲ್ಲಿ ಭಾರಿ ಮಳೆಗೆ ಹಲವು ಕೆರೆಗಳು ತುಂಬಿ ಹರಿಯುತ್ತಿವೆ. ಹೀಗಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ರಾಜಕಾಲುವೆಗಳನ್ನು ದುರಸ್ತಿ ಮಾಡಬೇಕು. ಕೆರೆಗಳಲ್ಲಿ ನೀರು ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಬೆಂಗಳೂರಿನ ಹಲವೆಡೆ ಮಳೆಯಿಂದ ಸಮಸ್ಯೆ ಆಗುತ್ತಿರುವ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಜತೆ ಸಭೆ ಬಳಿಕ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಹೊರವಲಯದಲ್ಲಿ ಮಣ್ಣಿನ ಕಾಲುವೆಗಳಿವೆ. ಅಧಿಕಾರಿಗಳು ಎಲ್ಲ ವಲಯಗಳ ಸಮಸ್ಯೆ ತಿಳಿಸಿದ್ದಾರೆ. ನಾನು ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದೇನೆ. ಬೆಂಗಳೂರಿನಲ್ಲಿ 842 ರಾಜಕಾಲುವೆಗಳಿವೆ. 415 ಕಿಲೋಮೀಟರ್ ದುರಸ್ತಿಯಾಗಿದೆ. ಉಳಿದ ಕಾಮಗಾರಿ ಜನವರಿ ವೇಳೆಗೆ ಮುಗಿಸಲು ಕ್ರಮ ಕೈಗೊಳ್ಳುತ್ತೇವೆ. ಕೆರೆಗಳ ಸಮಸ್ಯೆಗೆ ಶಾಶ್ವತ ಪರಿಹಾರದ ಕೆಲಸ ಮಾಡುತ್ತೇವೆ. ಇವತ್ತಿನ ಪರಿಸ್ಥಿತಿಗೆ ತಕ್ಕ ಹಾಗೆ ಮಾಸ್ಟರ್ ಪ್ಲ್ಯಾನ್ ರಚಿಸ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ಮಳೆ ಹಾನಿ ಸಂಬಂಧ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಸಿಎಂ ಬೊಮ್ಮಾಯಿ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ. ನೀರುಗಾಲುವೆ ಕಾಮಗಾರಿ ಬಗ್ಗೆ ಅಪೂರ್ಣ ಮಾಹಿತಿ ನೀಡಿದ್ದರು. ಸಭೆಯಲ್ಲಿ ಮುಖ್ಯ ಇಂಜಿನಿಯರ್ ತಡಬಡಾಯಿಸಿದ ಹಿನ್ನೆಲೆ, ಅಧಿಕಾರಿ ವಿರುದ್ಧ ಸಿಎಂ ಬೊಮ್ಮಾಯಿ ಅಸಮಾಧಾನ ತೋರಿದ್ದಾರೆ ಎಂದು ಹೇಳಲಾಗಿದೆ. ಕನಿಷ್ಠ ಉತ್ತರವಾದರೂ ಸರಿಯಾಗಿ ಕೊಡಿ ಎಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ಸಭೆಗೆ ತಯಾರಿ ಮಾಡಿಕೊಳ್ಳದೆ ಬರುವುದು ಸರಿಯಲ್ಲ ಎಂದು ಸಿಎಂ ಬೊಮ್ಮಾಯಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ರೈತರ ಬದುಕಿಗೆ ಕೊಳ್ಳಿಯಿಟ್ಟ ಮಳೆರಾಯ; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಇದನ್ನೂ ಓದಿ: ರಾಜಕೀಯಕ್ಕಾಗಿ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆರೋಪ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada