Coronavirus: ಕರ್ನಾಟಕದಲ್ಲಿ 50:50 ನಿಯಮ ಜಾರಿ; ಕೊವಿಡ್ ನಿಯಂತ್ರಣ ಬಗ್ಗೆ ಬಸವರಾಜ ಬೊಮ್ಮಾಯಿ ಸಭೆ
ಸಾರ್ವಜನಿಕರ ಆರೋಗ್ಯದ ಜೊತೆಗೆ ಆರ್ಥಿಕತೆ ಸಾಗುವಂತೆ ನೋಡಿಕೊಳ್ಳುವ ಅಗತ್ಯತೆ ಇದೆ. ಇದು ನಮ್ಮ ಸರ್ಕಾರದ ಯೋಚನೆ ಆಗಿದೆ. ಕೊರೊನಾ ಸಾಂಕ್ರಾಮಿಕ ಸೋಂಕಿನ ತಡೆಗಟ್ಟುವಿಕೆಗೆ ಸಾರ್ವಜನಿಕರ ಸಹಕಾರ ಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಕಲಬುರಗಿ: ಕೊರೊನಾ ಪ್ರಕರಣಗಳ ಸಂಖ್ಯೆ ಕರ್ನಾಟಕದ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿಭಾಗಗಳಲ್ಲಿ ಕಠಿಣ ನಿಯಮ ಜಾರಿಗೊಳಿಸಲಾಗುವುದು. ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಕರ್ನಾಟಕದ ಗಡಿಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಗೂ ಮೊದಲು ಹೇಳಿಕೆ ನೀಡಿದ್ದಾರೆ. ಅಂತಹ ಚೆಕ್ಪೋಸ್ಟ್ಗಳಿಗೆ ಸ್ಥಳೀಯ ಪೊಲೀಸ್ ಠಾಣೆಗಳು ಜವಾಬ್ದಾರಿಗಳಾಗಿರುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಜೊತೆಗೆ ಆರ್ಥಿಕತೆ ಸಾಗುವಂತೆ ನೋಡಿಕೊಳ್ಳುವ ಅಗತ್ಯತೆ ಇದೆ. ಇದು ನಮ್ಮ ಸರ್ಕಾರದ ಯೋಚನೆ ಆಗಿದೆ. ಕೊರೊನಾ ಸಾಂಕ್ರಾಮಿಕ ಸೋಂಕಿನ ತಡೆಗಟ್ಟುವಿಕೆಗೆ ಸಾರ್ವಜನಿಕರ ಸಹಕಾರ ಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಉಳಿದಂತೆ ಇತರ ನಿಯಮಾವಳಿಗಳ ಬಗ್ಗೆ ಕೊವಿಡ್ ನಿಯಂತ್ರಣ ಕುರಿತ ಸಭೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕೊರೊನಾ ನೂತನ ಮಾರ್ಗಸೂಚಿಗೆ ಸಂಬಂಧಿಸಿ ಸರ್ಕಾರದ ತೀರ್ಮಾನಗಳೇನು?
- ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್ಲೈನ್ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಯುತ್ತದೆ.
- ಕರ್ನಾಟಕ ರಾಜ್ಯಾದ್ಯಂತ 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ.
- ವೀಕೆಂಡ್ ಕರ್ಫ್ಯೂ ವೇಳೆ ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
- ಸರ್ಕಾರಿ ಕಚೇರಿಗಳು, ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ (50:50 ನಿಯಮ) ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.
- ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ. ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.
- ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ ಆಗಿರಲಿದೆ.
- ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ. ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
- ಶಾಲಾ ಕಾಲೇಜು ರಜೆ ಬೆಂಗಳೂರಿಗೆ ಮಾತ್ರ ಅನ್ವಯ ಆಗುತ್ತದೆ. ಆದರೆ, ಉಳಿದ ನಿಯಮಗಳು ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ.
ಬೆಂಗಳೂರು: ಕೊವಿಡ್ ನಿಯಂತ್ರಣ ಕುರಿತು ಸಿಎಂ ಬೊಮ್ಮಾಯಿ ಸಭೆ ಕೊವಿಡ್ ನಿಯಂತ್ರಣ ಕುರಿತು ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೆಲವು ಷರತ್ತುಗಳ ಜಾರಿ ಬಗ್ಗೆ ಬಿಬಿಎಂಪಿ ಪ್ರಸ್ತಾವನೆ ಸಾಧ್ಯತೆ ಇದೆ ಎಂದು ತಿಳಿದುಬಂದಿತ್ತು. ಸಭೆ, ಸಮಾರಂಭ, ರ್ಯಾಲಿಗೆ ಜನರ ಸೀಮಿತಗೊಳಿಸಲು ಸಲಹೆ ನೀಡಬಹುದು. ರೆಸ್ಟೋರೆಂಟ್, ಪಬ್, ಬಾರ್, ಥಿಯೇಟರ್‌ಗೆ 50:50 ನಿಯಮ ಜಾರಿ ಆಗಬಹುದು. ಜನವರಿ 7ರ ಬಳಿಕವೂ ನೈಟ್ ಕರ್ಫ್ಯೂ ವಿಸ್ತರಣೆಗೆ ಮನವಿ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಬೆಂಗಳೂರಿನಲ್ಲಿ 2 ಡೋಸ್ ಲಸಿಕೆ ಕಡ್ಡಾಯಕ್ಕೆ ಸಲಹೆ ಸಾಧ್ಯತೆ ಇದೆ. ದೇವಸ್ಥಾನ, ಬಸ್, ಮೆಟ್ರೋ, ಆಟೋ, ಓಲಾ, ಉಬರ್, ಸೂಪರ್‌ಮಾರ್ಕೆಟ್ ಎಂಟ್ರಿಗೆ ಲಸಿಕೆ ಕಡ್ಡಾಯಗೊಳಿಸಲು ಸಲಹೆ ನೀಡಬಹುದು. ಬಿಬಿಎಂಪಿ ಈ ಬಗ್ಗೆ ಇಂದಿನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಪಾಸಿಟಿವಿಟಿ ದರ ಆಧರಿಸಿಯೇ ನಿಯಮ ಜಾರಿಗೆ ನಿರ್ಧಾರ ಕೈಗೊಳ್ಳಬಹುದು. ಬಹುತೇಕ 50:50 ರೂಲ್ಸ್ ಜಾರಿಗೆ ತೀರ್ಮಾನ ಸಾಧ್ಯತೆ ಇದೆ ಎನ್ನಲಾಗಿತ್ತು. ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ 50:50 ರೂಲ್ಸ್ ಜಾರಿ ಆಗಬಹುದು. ಪಾಸಿಟಿವಿಟಿ ದರ ಆಧರಿಸಿಯೇ ಬೆಂಗಳೂರಿಗೆ ಟಫ್ ರೂಲ್ಸ್ ಜಾರಿಗೊಳಿಸಲಾಗುವುದು. ಮೊದಲು ಬೆಂಗಳೂರಿನಲ್ಲೇ 50:50 ರೂಲ್ಸ್ ಕಡ್ಡಾಯ ಜಾರಿ ಆಗಬಹುದು. ಪಾಸಿಟಿವಿಟಿ ದರ ಶೇ.3ರಷ್ಟು ದಾಟಿದ್ರೆ ಲಾಕ್‌ಡೌನ್ ಖಚಿತ ಎಂದು ಹೇಳಲಾಗಿತ್ತು. ಈ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ.
ಕೆಐಎಬಿಯಲ್ಲಿ ಸಚಿವರಾದ ಕೆ. ಸುಧಾಕರ್, ಮುರುಗೇಶ್ ನಿರಾಣಿ ಜತೆ ಸಿಎಂ ಬೊಮ್ಮಾಯಿ ವಿಐಪಿ ಲಾಂಜ್‌ನಲ್ಲಿ ಚರ್ಚೆ ನಡೆಸಿದ್ದರು. ಕಲಬುರಗಿಯಿಂದ ಕೆಐಎಬಿಗೆ ಆಗಮಿಸಿದ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ಕೊವಿಡ್ ಸಂಬಂಧ ಸಿಎಂಗೆ ಸುಧಾಕರ್ ಮಾಹಿತಿ ನೀಡಲಿದ್ದಾರೆ. ಕೊವಿಡ್ ಅಂಕಿಅಂಶಗಳ ಪಟ್ಟಿಯೊಂದಿಗೆ ಸಚಿವ ಸುಧಾಕರ್ ಆಗಮಿಸಿದ್ದರು.
ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಿದೆ: ಆರ್ ಅಶೋಕ್ ಕೆಲಹೊತ್ತಲ್ಲೇ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ತಜ್ಞರು ಮಾಡಿದ ಸರ್ವೆ ವರದಿ ತರುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದ್ವಿಗುಣಗೊಳ್ತಿದೆ. ರಾಜ್ಯದಲ್ಲಿ ವೇಗವಾಗಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಹಾಗಾಗಿ ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಿದೆ. ರಾಜ್ಯದ ಜನರ ರಕ್ಷಣಗೆ ನಮ್ಮ ಸರ್ಕಾರ ಬದ್ಧವಿದೆ. ಕಠಿಣ ನಿರ್ಧಾರ ತೆಗೆದುಕೊಳ್ಳಲೇಕಾದ ಅನಿವಾರ್ಯತೆ ಇದೆ ಎಂದು ಸಿಎಂ ಸಭೆಗೂ ಮುನ್ನ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಸಚಿವ ಆರ್.ಅಶೋಕ್ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ದರು.
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ. ಜನರ ಪ್ರಾಣ, ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿ. ವ್ಯಾಪಾರ ವಹಿವಾಟು ಗಮನದಲ್ಲಿಟ್ಟುಕೊಂಡು ನಿರ್ಧಾರಕೈಗೊಳ್ತೇವೆ. ನಾವು ಕಠಿಣ ನಿರ್ಧಾರ ಕೈಗೊಳ್ಳದಿದ್ದರೆ ಜನರಿಗೆ ತೊಂದ್ರೆ ಆಗುತ್ತೆ. ನಾವು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು, ತೆಗೆದುಕೊಳ್ಳುತ್ತೇವೆ. ಸಾಧ್ಯವಾದರೆ ಇಂದೇ ಕಠಿಣ ನಿಯಮಗಳನ್ನು ಜಾರಿ ಮಾಡುತ್ತೇವೆ ಎಂದೂ ಅಶೋಕ್ ತಿಳಿಸಿದ್ದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ 2 ಸಾವಿರ ಗಡಿ ದಾಟಿದ ಕೊರೊನಾ ಕೇಸ್; 24 ಗಂಟೆಯಲ್ಲಿ ಕೊವಿಡ್ ಪ್ರಕರಣಗಳು ದ್ವಿಗುಣ
Published On - 6:15 pm, Tue, 4 January 22