ಕೊವಿಡ್ ಬಳಿಕ ಕುಟುಂಬಗಳ ಸಾಮೂಹಿಕ ಆತ್ಮಹತ್ಯೆ ವಿಚಾರ: ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದ ಸಿಎಂ ಬೊಮ್ಮಾಯಿ

TV9 Digital Desk

| Edited By: ganapathi bhat

Updated on: Oct 02, 2021 | 2:48 PM

Basavaraj Bommai: ಆತ್ಮಹತ್ಯೆಗಳನ್ನು ತಡೆಯುವುದಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲಾ ಶಾಲಾ ಕಾಲೇಜು, ಸಾಮಾಜಿಕ ವ್ಯವಸ್ಥೆಯಲ್ಲಿ ಆತ್ಮಹತ್ಯೆ ತಡೆಯುವ ಕ್ರಮ ಕೈಗೊಳ್ಳುತ್ತೇವೆ. ಪರಿವಾರ ಅನ್ಯೋನ್ಯವಾಗಿರಬೇಕು, ಆತ್ಮಹತ್ಯೆ ಪರಿಹಾರವಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಕೊವಿಡ್ ಬಳಿಕ ಕುಟುಂಬಗಳ ಸಾಮೂಹಿಕ ಆತ್ಮಹತ್ಯೆ ವಿಚಾರ: ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us

ಬೆಂಗಳೂರು: ಸಮಸ್ಯೆ ತಾತ್ಕಾಲಿಕ, ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಮಾನಸಿಕ ಒತ್ತಡ ಹಾಗೂ ಬೇರೆ ಕಾರಣಗಳಿಂದ ಆತ್ಮಹತ್ಯೆ ಘಟನೆಗಳು ನಡೆಯುತ್ತಿವೆ. ಇದನ್ನು ತಪ್ಪಿಸುವ ಕೆಲಸ ಸಮಾಜದ ಜತೆಗೂಡಿ ಮಾಡಬೇಕು. ಆರ್ಥಿಕ, ಸಾಮಾಜಿಕ, ಮಾನಸಿಕ ಕ್ಷೋಭೆಯಿಂದ ಕಷ್ಟವಾಗುತ್ತೆ. ಇದನ್ನೆಲ್ಲಾ ಆತ್ಮಸ್ಥೈರ್ಯದಿಂದ ನಾವು ಎದುರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊವಿಡ್​ ಬಳಿಕ ಕುಟುಂಬಗಳ ಸಾಮೂಹಿಕ ಆತ್ಮಹತ್ಯೆ ಘಟನೆಗಳು ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಆತ್ಮಹತ್ಯೆಗಳನ್ನು ತಡೆಯುವುದಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲಾ ಶಾಲಾ ಕಾಲೇಜು, ಸಾಮಾಜಿಕ ವ್ಯವಸ್ಥೆಯಲ್ಲಿ ಆತ್ಮಹತ್ಯೆ ತಡೆಯುವ ಕ್ರಮ ಕೈಗೊಳ್ಳುತ್ತೇವೆ. ಪರಿವಾರ ಅನ್ಯೋನ್ಯವಾಗಿರಬೇಕು, ಆತ್ಮಹತ್ಯೆ ಪರಿಹಾರವಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಕಾನ್ಸ್​ಟಿಟ್ಯೂಷನ್ ಕ್ಲಬ್ ಆರಂಭಕ್ಕೆ ಎಲ್ಲರ ಸಮ್ಮತಿ ಕಾನ್ಸ್‌ಟಿಟ್ಯೂಷನ್ ಕ್ಲಬ್ ಆರಂಭಕ್ಕೆ ಸಮ್ಮತಿ ನೀಡಿದ್ದಾರೆ. ಪ್ರತಿಪಕ್ಷಗಳು ಸೇರಿದಂತೆ ಎಲ್ಲರೂ ಸಮ್ಮತಿ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕ್ಲಬ್ ಆರಂಭದ ಬಗ್ಗೆ ವಿಪಕ್ಷಗಳಾದಿಯಾಗಿ ಎಲ್ಲರೂ ಸಮ್ಮತಿ ನೀಡಿದ್ದಾರೆ. ಕ್ಲಬ್ ಇದೇ ಮೊದಲ ಬಾರಿಗೆ ಚರ್ಚೆ ಆಗಿಲ್ಲ. ಕಳೆದ 10 ವರ್ಷಗಳಿಂದ ಈ ವಿಚಾರ ಚರ್ಚೆಯಲ್ಲಿದೆ. ಈಗ ಎಲ್ಲಾ ಒಪ್ಪಿಗೆ ಪಡೆದು ತೀರ್ಮಾನ ಮಾಡಿದ್ದೇವೆ. ಈಗ ತೀರ್ಮಾನ‌ ಮಾಡಿದರೆ ಈಗಲೇ ಕ್ಲಬ್ ನಿರ್ಮಿಸುವುದಿಲ್ಲ. ಎಲ್ಲವನ್ನೂ ಪರಿಶೀಲಿಸಿಯೇ ಹೆಜ್ಜೆ ಇಡುತ್ತೇವೆ ಎಂದು ಸಿಎಂ ಬೊಮ್ಮಾಯು ಮಾಹಿತಿ ನೀಡಿದ್ದಾರೆ.

ಉಪಚುನಾವಣೆ ಸಿದ್ಧತೆ ಬಗ್ಗೆ ಬೊಮ್ಮಾಯಿ ಮಾತು ಹಾನಗಲ್, ಸಿಂಧಗಿ ಬೈಎಲೆಕ್ಷನ್‌ಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಾಳೆ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಸುತ್ತೇವೆ. ಕೇಂದ್ರಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು ಕಳಿಸುತ್ತೇವೆ. ನಾಳಿನ ಸಭೆಯಲ್ಲಿ ಉಪಚುನಾವಣೆಗೆ ಉಸ್ತುವಾರಿಗಳ ನೇಮಕ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಉಪಚುನಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ‘ಶರಣಶ್ರೀ’, ಬಸವರಾಜ ಬೊಮ್ಮಾಯಿ ‘ಬಸವಭೂಷಣ’ ಪ್ರಶಸ್ತಿಗೆ ಆಯ್ಕೆ; ಡಾ.ಶಿವಮೂರ್ತಿ ಮುರುಘಾ ಶರಣರು ಮಾಹಿತಿ

ಇದನ್ನೂ ಓದಿ: ತಮಗೆ ಖಾದಿ ಬಟ್ಟೆ, ಪತ್ನಿಗೆ ಸೀರೆ ಖರೀದಿಸಿದ ಸಿಎಂ; ಈ ವೇಳೆ ಜೊತೆಯಲ್ಲಿದ್ದ ನಾಯಕರಿಗೆ ಬೊಮ್ಮಾಯಿ ಹೇಳಿದ್ದೇನು?

ತಾಜಾ ಸುದ್ದಿ

Related Stories

Click on your DTH Provider to Add TV9 Kannada