AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Jam: ಗುಂಡಿ ಮುಚ್ಚಿ, ಸಿಗ್ನಲ್ ಸರಿಪಡಿಸಿ; ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಪರಿಹಾರಕ್ಕೆ ಸಿಎಂ ತಾಕೀತು

ಹೆಬ್ಬಾಳ ಫ್ಲೈಓವರ್ ಮತ್ತು ಸಿಲ್ಕ್​ ರೋಡ್ ಜಂಕ್ಷನ್ ಸೇರಿ 10 ಸ್ಥಳಗಳಲ್ಲಿ ವಾಹನಸಂದಣಿ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ

Traffic Jam: ಗುಂಡಿ ಮುಚ್ಚಿ, ಸಿಗ್ನಲ್ ಸರಿಪಡಿಸಿ; ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಪರಿಹಾರಕ್ಕೆ ಸಿಎಂ ತಾಕೀತು
ಬೆಂಗಳೂರು ಟ್ರಾಫಿಕ್ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 26, 2022 | 8:30 AM

Share

ಬೆಂಗಳೂರು: ನಗರದ ವಿವಿಧೆಡೆ ಟ್ರಾಫಿಕ್ ಜಾಮ್​ನಿಂದ (Traffic Jam) ವಾಹನ ಸವಾರರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಪ್ರತಿಕ್ರಿಯಿಸಿದ್ದಾರೆ. ನಗರದ ಕುಖ್ಯಾತ ಟ್ರಾಫಿಕ್ ಜಾಮ್​ ಸ್ಥಳಗಳೆನಿಸಿದ ಹೆಬ್ಬಾಳ ಫ್ಲೈಓವರ್ ಮತ್ತು ಸಿಲ್ಕ್​ ರೋಡ್ ಜಂಕ್ಷನ್ ಸೇರಿ 10 ಸ್ಥಳಗಳಲ್ಲಿ ವಾಹನಸಂದಣಿ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ನಿರ್ವಹಣೆ ಕುರಿತ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು ಜನರ ಸಂಕಷ್ಟಗಳ ಬಗ್ಗೆ ತಮಗಿರುವ ಮಾಹಿತಿ ಹಂಚಿಕೊಂಡರು. ಸಭೆಯಲ್ಲಿ ಬಿಬಿಎಂಪಿ, ಬಿಡಬ್ಲ್ಯುಎಸ್​ಎಸ್​ಬಿ, ನಗರಾಭಿವೃದ್ಧಿ ಇಲಲಾಖೆ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕರ್ನಾಟಕ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಚ್​.ಎಸ್.ಪ್ರತಾಪ್ ರೆಡ್ಡಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಹದೇವಪುರ ಔಟರ್ ರಿಂಗ್ ರೋಡ್, ವೈಟ್​ಫೀಲ್ಡ್ ರೋಡ್, ಸೇಂಟ್ ಜಾನ್ಸ್ ಆಸ್ಪತ್ರೆ ವೃತ್ತ ಮತ್ತು ಭಟ್ಟರಹಳ್ಳಿಗಳಲ್ಲಿ ಪದೇಪದೇ ಟ್ರಾಫಿಕ್ ಜಾಮ್ ಆಗುತ್ತಿರುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಟ್ರಾಫಿಕ್ ಸಮಸ್ಯೆ ಪರಿಹರಿಸುವ ಕ್ರಮಗಳ ಬಗ್ಗೆ ಆಯಾ ವ್ಯಾಪ್ತಿಯ ಡಿಸಿಪಿಗಳು ಉಸ್ತುವಾರಿ ನೋಡಿಕೊಳ್ಳಬೇಕು. ಬಿಬಿಎಂಪಿ, ಬಿಡ್ಲ್ಯುಎಸ್​ಎಸ್​ಬಿ, ಬಿಎಂಆರ್​ಸಿಎಲ್ ಮತ್ತು ಬೆಸ್ಕಾಂ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ನಗರಾಭಿವೃದ್ಧಿ ಇಲಾಖೆ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ನಗರದ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ನಗರ ವ್ಯಾಪ್ತಿಯ ರಸ್ತೆಗಳಲ್ಲಿರುವ ಗುಂಡಿಗಳನ್ನು ಶೀಘ್ರ ಮುಚ್ಚಬೇಕು. ಗುಂಡಿ ಮುಚ್ಚುವ ಕಾಮಗಾರಿಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುವ ರಸ್ತೆಗಳಿಗೆ ಆದ್ಯತೆ ಸಿಗಬೇಕು. ಕಳೆದ ಬಾರಿ ಭಾರೀ ಮಳೆಯಾದಾಗ ಹಾಳಾಗಿದ್ದ 50 ಸ್ಥಳಗಳ ರಿಪೇರಿ ಕಾಮಗಾರಿಗಳನ್ನು ಶೀಘ್ರ ನಿರ್ವಹಿಸಬೇಕು ಎಂದು ಹೇಳಿದರು. ಹೆಚ್ಚು ಟ್ರಾಫಿಕ್ ಇರುವ ರಸ್ತೆಗಳಲ್ಲಿ ಸಿಗ್ನಲ್ ವ್ಯವಸ್ಥೆ ಸುಧಾರಣೆಗೆ ಜಾರಿಗೊಳಿಸಲು ಉದ್ದೇಶಿಸಿರುವ ₹ 48 ಕೋಟಿ ಮೊತ್ತದ ಕಾಮಗಾರಿಯನ್ನು ಆರಂಭಿಸುವಂತೆ ಮತ್ತು ಟ್ರಾಫಿಕ್ ಸಾಂದ್ರತೆ ಹೆಚ್ಚಾಗಿರುವ ಸ್ಥಳಗಳನ್ನು ಗುರುತಿಸಿ, ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್ ರೂಪಿಸಬೇಕು ಎಂದು ಸೂಚಿಸಿದರು.

ಮುಂದಿನ ದಿನಗಳಲ್ಲಿ ವಲಯವಾರು ಟ್ರಾಫಿಕ್ ನಿರ್ವಹಣೆ ಸಭೆಗಳನ್ನು ನಡೆಸಲಾಗುವುದು. ರಸ್ತೆಗಳ ಅತಿಕ್ರಮಣ ತೆರವುಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಟ್ರಾಫಿಕ್ ಜಂಕ್ಷನ್​ಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವಂತೆ ಮತ್ತು ನಿರ್ಭಯಾ ಯೋಜನೆಯಲ್ಲಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸಿಎಂ ಸೂಚಿಸಿದರು.

ಸಭೆಯ ಕುರಿತು ವರದಿಗಾರರಿಗೆ ಮಾಹಿತಿ ನೀಡಿದ ಬೊಮ್ಮಾಯಿ, ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಇರುವ ಎಲ್ಲ ಅಡೆತಡೆಗಳನ್ನು ನಿವಾರಿಸಬೇಕೆಂದು ಸಲಹೆ ಮಾಡಿದರು. ಬಿಎಂಆರ್​ಸಿಎಲ್ ಸುರಿದಿರುವ ನಿರ್ಮಾಣ ತ್ಯಾಜ್ಯಗಳನ್ನು ತೆರವುಗೊಳಿಸಬೇಕು. ಪೈಪ್​ಲೈನ್ ಅಳವಡಿಕೆಗೆಂದು ಬಿಡ್ಲ್ಯುಎಸ್​ಎಸ್​ಬಿ ರಸ್ತೆ ಅಗೆದಿರುವ ಸ್ಥಳಗಳನ್ನು ಸರಿಪಡಿಸಲು ಸೂಚಿಸಲಾಗಿದೆ ಎಂದರು.

Published On - 8:28 am, Sun, 26 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ