ದಕ್ಷಿಣ ಭಾರತ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

| Updated By: ವಿವೇಕ ಬಿರಾದಾರ

Updated on: Oct 07, 2022 | 8:39 PM

ಕೆಆರ್​ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಬಿಡುಗಡೆ ಮಾಡಿದರು.

ದಕ್ಷಿಣ ಭಾರತ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ಕುಂಭಮೇಳ ಲಾಂಛನ
Follow us on

ಮಂಡ್ಯ: ಕೆಆರ್​ ಪೇಟೆಯ (KR Pete) ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ (Dakshin Bharat kumbh mela) ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಬಿಡುಗಡೆ ಮಾಡಿದರು. ಅಕ್ಟೋಬರ್ 13,14,15,16 ನಾಲ್ಕು ದಿನಗಳಕಾಲ ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ-ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳ ನಡೆಯಲಿದೆ.

ಕುಂಭಮೇಳದಲ್ಲಿ ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಹೀಗಾಗಿ ಮಹಾಕುಂಭಮೇಳದ ವಿಶೇಷ ಲೋಗೋ ಸಿದ್ದಪಡಿಸಲಾಗಿದೆ. ಲೋಗೋ  ಬಿಡುಗಡೆ ವೇಳೆ ವಿಧಾನಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್, ಶಾಸಕ ನಾಗೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Published On - 8:39 pm, Fri, 7 October 22