Hijab Verdict: ಹೈಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕು: ಸಿಎಂ ಬಸವರಾಜ ಬೊಮ್ಮಾಯಿ
ಶಿಕ್ಷಣ ಬಹಳ ಮುಖ್ಯ ಯಾವುದೇ ಕಾರಣಕ್ಕೆ ವಿದ್ಯಾಭ್ಯಾಸ ಹಾಳು ಮಾಡಿಕೊಳ್ಳಬೇಡಿ. ಪರೀಕ್ಷೆಗಳನ್ನು ತೆಗೆದುಕೊಳ್ಳಿ. ಶಾಲಾ-ಕಾಲೇಜುಗಳಿಂದ ದೂರ ಉಳಿಯಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿದರು.
ಬೆಂಗಳೂರು: ಹಿಜಾಬ್ ವಿವಾದ ಕುರಿತ ಕರ್ನಾಟಕ ಹೈಕೋರ್ಟ್ ಆದೇಶವನ್ನು (Karnataka High Court Verdict on Hijab Row) ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಗೌರವಿಸಬೇಕು, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು. ಶಿಕ್ಷಣ ಬಹಳ ಮುಖ್ಯ ಯಾವುದೇ ಕಾರಣಕ್ಕೆ ವಿದ್ಯಾಭ್ಯಾಸ ಹಾಳು ಮಾಡಿಕೊಳ್ಳಬೇಡಿ. ಪರೀಕ್ಷೆಗಳನ್ನು ತೆಗೆದುಕೊಳ್ಳಿ. ಶಾಲಾ-ಕಾಲೇಜುಗಳಿಂದ ದೂರ ಉಳಿಯಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿದರು.
ಹಿಜಾಬ್ ಅತ್ಯಗತ್ಯ ಧಾರ್ಮಿಕ ಅಂಶ ಅಲ್ಲ ಎಂದು ಹೈಕೋರ್ಟ್ ಹೇಳಿದೆ. ತೀರ್ಪನ್ನು ಎಲ್ಲರೂ ಪಾಲಿಸಬೇಕು. ಸಮಾಜದಲ್ಲಿ ಶಾಂತಿ ಕಾಪಾಡಬೇಕು. ಎಲ್ಲ ಸಮುದಾಯದ ನಾಯಕರು, ಪಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವಿನಂತಿ ಮಾಡ್ತೇನೆ. ಶಾಂತಿ ಸುವ್ಯವಸ್ಥೆ ಕಾಪಾಡಿ. ತೀರ್ಪಿನ ಅನ್ವಯ ಶಿಕ್ಷಣ ಇಲಾಖೆ ಅಗತ್ಯ ಸೂಚನೆ ನೀಡಲಿದೆ. ಅದನ್ನು ಎಲ್ಲರೂ ಅನುಸರಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು
Published On - 10:54 am, Tue, 15 March 22