AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ

ಹಿಜಾಬ್ ಬಗ್ಗೆ ಇಂದು ಸಂಜೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಈ ಬೆಳವಣಿಗೆಗಳ ಬಗ್ಗೆ ಗೃಹ ಸಚಿವರ ಜತೆಯೂ ಮಾತುಕತೆ ನಡೆಸುತ್ತೇನೆ. ಮೊದಲಿನಂತೆ ಸೌಹಾರ್ದತೆ, ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Feb 10, 2022 | 12:19 PM

Share

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ (Hijab), ಕೇಸರಿ ಶಾಲು ಸಂಘರ್ಷ ಭುಗಿಲೆದ್ದಿದೆ. ಸದ್ಯ ಇಡೀ ರಾಜ್ಯ ಕೋರ್ಟ್ ತೀರ್ಮಾನಕ್ಕಾಗಿ ಕಾಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ. ಯಾರೂ ಪ್ರಚೋದನೆ ನೀಡದೆ ಶಾಂತಿಯಿಂದ ವರ್ತಿಸೋಣ. ಪ್ರಕರಣ ಕೋರ್ಟ್​ನಲ್ಲಿರುವುದರಿಂದ ಎಲ್ಲರೂ ಕಾಯೋಣ. ಈ ವಿಷಯದಲ್ಲಿ ಈಗಾಗಲೇ ಹಲವರು ಹೇಳಿಕೆ ಕೊಟ್ಟಿದ್ದಾರೆ. ಇನ್ಮುಂದೆ ಯಾರೂ ಹೇಳಿಕೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಹಿಜಾಬ್ ಬಗ್ಗೆ ಇಂದು ಸಂಜೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಈ ಬೆಳವಣಿಗೆಗಳ ಬಗ್ಗೆ ಗೃಹ ಸಚಿವರ ಜತೆಯೂ ಮಾತುಕತೆ ನಡೆಸುತ್ತೇನೆ. ಮೊದಲಿನಂತೆ ಸೌಹಾರ್ದತೆ, ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ರಜೆ ಮುಂದುವರಿಕೆ ಬಗ್ಗೆ ಸಂಜೆ ನಿರ್ಧಾರ ಮಾಡುತ್ತೇವೆ. ಮಕ್ಕಳ ವಿಚಾರದಲ್ಲಿ ನಾವು ಸಂವೇದನಾಶೀಲರಾಗಿರಬೇಕು ಅಂತ ಅಭಿಪ್ರಾಯಪಟ್ಟರು.

ಇಂಥ ಘಟನೆ ಮೊದಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಬಳಿಕ ಲೋಕಲ್​ಗೆ ಬರುತ್ತೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಕರ್ತವ್ಯ ಆಗಿದೆ. ಹೊರಗಿನಿಂದ ಕೆಲವರು ಪ್ರಚೋದಿಸುವ ಕೆಲಸ ಆಗಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಲು ಸ್ವಯಂ ನಿಯಂತ್ರಣ ಅಗತ್ಯ. ಕಾನೂನು ಸುವ್ಯವಸ್ಥೆಯನ್ನ ಎಲ್ಲರೂ ಪಾಲನೆ ಮಾಡಬೇಕು ಅಂತ ಸಿಎಂ ಹೇಳಿದರು.

ಕೆಂಪೇಗೌಡರ ಪ್ರತಿಮೆ ಕಾಮಗಾರಿ ವಿಳಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆಯಾಗುತ್ತಿದೆ. ಅದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಅದಕ್ಕೆ ಯಾವುದೇ ಅನುದಾನದ ಕೊರತೆಯಾಗಲ್ಲ. ಯಡಿಯೂರಪ್ಪನವರು ಘೋಷಿಸಿದ ಕಾಲದ ಮಿತಿಯಲ್ಲೇ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ

ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿ ಮೇಲೆ ಹೋಗುತ್ತಾರೆ, ಅವರನ್ನು ತಡೆಯಿರಿ; ಕಲಬುರಗಿ ನಗರಸಭೆ ಸದಸ್ಯನ ಮಾತಿನ ವಿಡಿಯೋ ವೈರಲ್

Teddy Day 2022: ಪ್ರೀತಿಯ ಸಂಕೇತವಾಗಿ ನೀವು ನೀಡುವ ಟೆಡ್ಡಿ ಬೇರ್ ಬಣ್ಣ ಯಾವ ಸಂದೇಶ ರವಾನಿಸುತ್ತದೆ ಗೊತ್ತಾ?

Published On - 11:32 am, Thu, 10 February 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ