ದೆಹಲಿಯಲ್ಲಿ ಕರ್ನಾಟಕದ ಕಲ್ಲಿದ್ದಲು ಬೇಡಿಕೆ ಬಗ್ಗೆ ಚರ್ಚೆ: ಸಿಎಂ ಬಸವರಾಜ ಬೊಮ್ಮಾಯಿ

ಒಡಿಶಾದಲ್ಲಿ ಮಂದಾಕಿನಿ ಕಲ್ಲಿದ್ದಲು ಗಣಿಗಳನ್ನು ಕರ್ನಾಟಕ ಉಪಯೋಗಿಸಲು ಅನುಮತಿ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದೆಹಲಿಯಲ್ಲಿ ಕರ್ನಾಟಕದ ಕಲ್ಲಿದ್ದಲು ಬೇಡಿಕೆ ಬಗ್ಗೆ ಚರ್ಚೆ: ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 11, 2021 | 10:17 PM

ಬೆಂಗಳೂರು: ನನ್ನ ದೆಹಲಿ ಪ್ರವಾಸ ಬಹಳ ಯಶಸ್ವಿಯಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯಕ್ಕೆ ಬೇಕಾದ ಕಲ್ಲಿದ್ದಲು ಪ್ರಮಾಣ ಕುರಿತು ಚರ್ಚೆ ಮಾಡಲಾಗಿದೆ. ಒಡಿಶಾದಲ್ಲಿ ಮಂದಾಕಿನಿ ಕಲ್ಲಿದ್ದಲು ಗಣಿಗಳ ಉಪಯೋಗಕ್ಕೆ ಅನುಮತಿ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಿಂದಲೂ ಹೆಚ್ಚಿನ ಪ್ರಮಾಣದಲ್ಲಿ ಕಲ್ಲಿದ್ದಲು ಒದಗಿಸುವ ಬಗ್ಗೆ ತಿಳಿಸಿದ್ದಾರೆ. ಭವಿಷ್ಯದಲ್ಲಿ ಕಲ್ಲಿದ್ದಲು ಸಮಸ್ಯೆ ಇರುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಲ್ಲಿ ನಮಗೆ ₹ 2,100 ಕೋಟಿ ಕೊಡಬೇಕೆಂಬ ಬೇಡಿಕೆ ಇತ್ತು. ಈ ಹಣ ಕೊಡಲು ಕೇಂದ್ರ ಆಹಾರ ಸಚಿವ ಪೀಯೋಷ್ ಗೋಯೆಲ್ ಒಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. 100 ದಿನಗಳಲ್ಲಿನ ನಮ್ಮ ಕಾರ್ಯಕ್ರಮದ ಬಗ್ಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ಪ್ರವಾಸದಲ್ಲಿ ನನಗೆ ಬಹಳ ಸಂತೋಷವಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ, ಜನಪರ ಕೆಲಸ ಮಾಡುತ್ತೇನೆ. ದೆಹಲಿ ಪ್ರವಾಸ ನನಗೆ ಆ ಆತ್ಮವಿಶ್ವಾಸವನ್ನು ನೀಡಿದೆ ಎಂದು ಬೊಮ್ಮಾಯಿ ನುಡಿದರು.

ದೆಹಲಿಯಿಂದ ಬಂದ ಸಿಎಂ ಬಸವರಾಜ ಬೊಮ್ಮಾಯಿ ವಿಮಾನದಲ್ಲೇ ಮೊಬೈಲ್ ಮರೆತರು ದೆಹಲಿ ಪ್ರವಾಸ ಮುಗಿಸಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂದಿರುಗಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಮಾನದಲ್ಲಿಯೇ ಮೊಬೈಲ್ ಮರೆತಿದ್ದರು. ವಿಮಾನ ನಿಲ್ದಾಣದ ವಿಐಪಿ ಟರ್ಮಿನಲ್​ನಿಂದ ಹೊರಬಂದಾಗ ಮೊಬೈಲ್ ವಿಚಾರ ಸಿಎಂಗೆ ನೆನಪಾಯಿತು. ನಂತರ ಮೊಬೈಲ್ ತರಲು ಸಿಬ್ಬಂದಿಯನ್ನು ಕಳಿಸಿಕೊಟ್ಟರು. ಮುಖ್ಯಮಂತ್ರಿ ಆಪ್ತ ಸಿಬ್ಬಂದಿ ಹಿಂದಿರುಗುವವರೆಗೂ ಅವರ ಕಾರು ರಸ್ತೆಯಲ್ಲಿಯೇ ನಿಂತಿತ್ತು.

ಬೆಂಗಳೂರಿನಲ್ಲಿ ಲ್ಯಾಂಡ್ ಆದ ಚೆನ್ನೈ ವಿಮಾನ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ವೈಪರಿತ್ಯದ ಕಾರಣ ದುಬೈನಿಂದ ಚೆನ್ನೈಗೆ ತೆರಳಬೇಕಿದ್ದ ವಿಮಾನವು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿಯೇ ಲ್ಯಾಂಡ್ ಆಯಿತು. ದುಬೈನಿಂದ ಬಂದಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಐರಾವತ ಬಸ್ ಮೂಲಕ ಚೆನ್ನೈಗೆ ಕಳುಹಿಸಿಕೊಡಲಾಯಿತು.

ಇದನ್ನೂ ಓದಿ: ಕಲ್ಲಿದ್ದಲು, ಕೊರೊನಾ ಲಸಿಕೆ ಪೂರೈಸಲು ಮನವಿ; ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದ ಬಸವರಾಜ ಬೊಮ್ಮಾಯಿ ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ; ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ- ಸಿಎಂ ಬಸವರಾಜ ಬೊಮ್ಮಾಯಿ

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ