AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ಹಾಕುವಂತಿಲ್ಲ: ರಾಜ್ಯ ಸರ್ಕಾರದಿಂದ ಆದೇಶ

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ.

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ಹಾಕುವಂತಿಲ್ಲ: ರಾಜ್ಯ ಸರ್ಕಾರದಿಂದ ಆದೇಶ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 10, 2021 | 1:48 PM

Share

ಬೆಂಗಳೂರು: ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಸರ್ಕಾರಿ ಆದೇಶವನ್ನು ಜಾರಿ ಮಾಡಿದ್ದಾರೆ.

ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜೊತೆಗೆ ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲು ತಿಳಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ  ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಬೊಮ್ಮಾಯಿ ತಿಳಿಸಿದರು.

ರಾಜ್ಯ ಸರ್ಕಾರದಿಂದ ಆದೇಶ

ಇದನ್ನೂ ಓದಿ

ಪರೀಕ್ಷೆ ಬರೆಯಲ್ಲಾ ಎಂದು ಕೂತಿದ್ದ ವಿದ್ಯಾರ್ಥಿನಿಯ ಮನವೊಲಿಸಿ ಪರೀಕ್ಷೆಗೆ ಕರೆ ತಂದಿದ್ದ ಬಿಇಓ, ಫಲಿತಾಂಶದ ಬಳಿಕ ಮನೆಯಲ್ಲಿ ಸಂಭ್ರಮ

‘ತಂದೆಗೆ ನೀಡಿದ್ದ ಸರ್ಕಾರಿ ಬಂಗಲೆ ಖಾಲಿ ಮಾಡಿ’; ಸಂಸದ ಚಿರಾಗ್ ಪಾಸ್ವಾನ್​ಗೆ ನೋಟಿಸ್ ಜಾರಿ

(CM Basavaraj Bommai Says No flowers to be offered to honour Lawmakers)

Published On - 1:17 pm, Tue, 10 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್