AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

ನಿರ್ಮಾಣ ವಿವಿಧ ಹಂತದಲ್ಲಿರುವ 8 ಫ್ಲೈ ಓವರ್ ಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ
ಬಿ ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 10, 2021 | 10:28 PM

Share

ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೆತ್ತಿಕೊಂಡ ಕಾರ್ಯಕ್ರಮಗಳನ್ನು ಮುಂದುವರೆಸಲಾಗುವುದು. ಬೆಂಗಳೂರು ನಗರದ ಅಭಿವೃದ್ಧಿಯ ಯೋಜನೆಗಳು ಇನ್ನಷ್ಟು ಚುರುಕಾಗಿ ಅನುಷ್ಠಾನಗೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ನೀಡಬಾರದು. ಬಿಬಿಎಂಪಿ (BBMP) ತನ್ನ ವಾರ್ಷಿಕ ಆದಾಯ ಮಿತಿಯೊಳಗೇ ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರು ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಿಎಂ ಸೂಚನೆ ಬಿಡಬ್ಲ್ಯು.ಎಸ್.ಎಸ್.ಬಿ.ಯು ಬಿಬಿಎಂಪಿ ವ್ಯಾಪ್ತಿಗೆ 110 ಗ್ರಾಮಗಳಲ್ಲಿ ನಿರ್ವಹಿಸುತ್ತಿರುವ ಎಂಟು ಸಾವಿರ ಬೋರ್ ವೆಲ್ ಗಳಲ್ಲಿ ಸುಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳ ದುರಸ್ತಿ, ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ವರ್ಷಾಂತ್ಯದಲ್ಲಿ ಕನಿಷ್ಠ 3 ಲಕ್ಷ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಿಗೆ ಪರಿವರ್ತಿಸಬೇಕು. ಕಳೆದ ಬಾರಿ ಮಳೆಯಿಂದ ಕೊಚ್ಚಿ ಹೋದ/ ಹಾಳಾದ ಪ್ರಮುಖ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿ ಮಾಡಬೇಕು. ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು ಶೀಘ್ರವೇ ಪೂರ್ಣಗೊಳಿಸಬೇಕು. ಮುಖ್ಯಮಂತ್ರಿಗಳ ನವನಗರೋತ್ಥಾನ ಯೋಜನೆಗಳನ್ನು ಚುರುಕುಗೊಳಿಸಬೇಕು. ಅಕ್ಟೋಬರ್ ಒಳಗೆ ಮೂರನೇ ಹಂತದ ನಗರೋತ್ಥಾನ ಯೋಜನೆಗೆ ಕಾಮಗಾರಿಗಳನ್ನು ಗುರುತಿಸಿ, ಪ್ರಸ್ತಾವನೆ ಸಲ್ಲಿಸಬೇಕು. ನಿರ್ಮಾಣದ ವಿವಿಧ ಹಂತದಲ್ಲಿರುವ 8 ಫ್ಲೈ ಓವರ್ ಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಭೆಯ ನಂತರ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ಸಿಎಂ ಜೊತೆಗೆ ತೆರಳಿದ ಸಚಿವ ಆರ್. ಅಶೋಕ್, ಸೋಮಶೇಖರ್, ಭೈರತಿ ಬಸವರಾಜ್​, ಮುನಿರತ್ನ ಮತ್ತು ನಾರಾಯಣಗೌಡ ಸಹ ಇದ್ದರು.

ಇದನ್ನೂ ಓದಿ:

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ 

ಬೆಂಗಳೂರು: ಜೆಪಿ ನಗರದಲ್ಲಿ ಆನೆ ದಂತ, ವನ್ಯ ಜೀವಿಗಳ ಚರ್ಮ, ಮೂಳೆ ಸಂಗ್ರಹಿಸಿದ್ದ ಆರೋಪಿ ಬಂಧನ

(CM Basavaraj Bommai says will Continue the Plans of Yeddyurappa which Bengaluru Development)

Published On - 10:10 pm, Tue, 10 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು