ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

ನಿರ್ಮಾಣ ವಿವಿಧ ಹಂತದಲ್ಲಿರುವ 8 ಫ್ಲೈ ಓವರ್ ಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಬಿಎಂಪಿ (BBMP) ತನ್ನ ವಾರ್ಷಿಕ ಆದಾಯ ಮಿತಿಯೊಳಗೇ ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರು ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ
ಬಿ ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ
Edited By:

Updated on: Oct 15, 2026 | 10:12 PM

ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೆತ್ತಿಕೊಂಡ ಕಾರ್ಯಕ್ರಮಗಳನ್ನು ಮುಂದುವರೆಸಲಾಗುವುದು. ಬೆಂಗಳೂರು ನಗರದ ಅಭಿವೃದ್ಧಿಯ ಯೋಜನೆಗಳು ಇನ್ನಷ್ಟು ಚುರುಕಾಗಿ ಅನುಷ್ಠಾನಗೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ನೀಡಬಾರದು. ಬಿಬಿಎಂಪಿ (BBMP) ತನ್ನ ವಾರ್ಷಿಕ ಆದಾಯ ಮಿತಿಯೊಳಗೇ ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರು ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಿಎಂ ಸೂಚನೆ

ಬಿಡಬ್ಲ್ಯು.ಎಸ್.ಎಸ್.ಬಿ.ಯು ಬಿಬಿಎಂಪಿ ವ್ಯಾಪ್ತಿಗೆ 110 ಗ್ರಾಮಗಳಲ್ಲಿ ನಿರ್ವಹಿಸುತ್ತಿರುವ ಎಂಟು ಸಾವಿರ ಬೋರ್ ವೆಲ್ ಗಳಲ್ಲಿ ಸುಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳ ದುರಸ್ತಿ, ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ವರ್ಷಾಂತ್ಯದಲ್ಲಿ ಕನಿಷ್ಠ 3 ಲಕ್ಷ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಿಗೆ ಪರಿವರ್ತಿಸಬೇಕು. ಕಳೆದ ಬಾರಿ ಮಳೆಯಿಂದ ಕೊಚ್ಚಿ ಹೋದ/ ಹಾಳಾದ ಪ್ರಮುಖ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿ ಮಾಡಬೇಕು. ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು ಶೀಘ್ರವೇ ಪೂರ್ಣಗೊಳಿಸಬೇಕು. ಮುಖ್ಯಮಂತ್ರಿಗಳ ನವನಗರೋತ್ಥಾನ ಯೋಜನೆಗಳನ್ನು ಚುರುಕುಗೊಳಿಸಬೇಕು. ಅಕ್ಟೋಬರ್ ಒಳಗೆ ಮೂರನೇ ಹಂತದ ನಗರೋತ್ಥಾನ ಯೋಜನೆಗೆ ಕಾಮಗಾರಿಗಳನ್ನು ಗುರುತಿಸಿ, ಪ್ರಸ್ತಾವನೆ ಸಲ್ಲಿಸಬೇಕು. ನಿರ್ಮಾಣದ ವಿವಿಧ ಹಂತದಲ್ಲಿರುವ 8 ಫ್ಲೈ ಓವರ್ ಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಭೆಯ ನಂತರ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ಸಿಎಂ ಜೊತೆಗೆ ತೆರಳಿದ ಸಚಿವ ಆರ್. ಅಶೋಕ್, ಸೋಮಶೇಖರ್, ಭೈರತಿ ಬಸವರಾಜ್​, ಮುನಿರತ್ನ ಮತ್ತು ನಾರಾಯಣಗೌಡ ಸಹ ಇದ್ದರು.

(CM Basavaraj Bommai says will Continue the Plans of Yeddyurappa which Bengaluru Development)

Published On - 10:10 pm, Tue, 10 August 21

Guruganesh Bhat
Loading...
Unable to load recommendations.
Follow Us