ರೆನ್ಯೂ ಪವರ್ ಕಂಪನಿ ಜತೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿದ ಸಿಎಂ ಬೊಮ್ಮಾಯಿ; 30 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷೆ

| Updated By: ಆಯೇಷಾ ಬಾನು

Updated on: May 24, 2022 | 5:25 PM

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಒಪ್ಪಂದ ರೆನ್ಯೂ ಪವರ್ ಕಂಪನಿ ಜತೆ 50,000 ಕೋಟಿ ರೂ ಹೂಡಿಕೆಗೆ ಸಿಎಂ ಬೊಮ್ಮಾಯಿ ಸಹಿ ಹಾಕಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯಿಂದ ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ರೆನ್ಯೂ ಪವರ್ ಕಂಪನಿ ಜತೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿದ ಸಿಎಂ ಬೊಮ್ಮಾಯಿ; 30 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ವಿಶ್ವ ಆರ್ಥಿಕ ಶೃಂಗಸಭೆ (ಡಬ್ಲ್ಯುಇಎಫ್) ಯಲ್ಲಿ ಪಾಲ್ಗೊಳ್ಳಲು ದಾವೋಸ್‌ನಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮುಖ ಉದ್ಯಮದ ಪ್ರಮುಖರೊಂದಿಗೆ ಸರಣಿ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ 2,000 ಕೋಟಿ ರೂಪಾಯಿ ಹೂಡಿಕೆಗೆ ಲುಲು ಇಂಟರ್‌ನ್ಯಾಶನಲ್ ಗ್ರೂಪ್‌ನೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದ ಸಿಎಂ, ಇಂದು ಹಲವು ಕಂಪನಿಗಳ ಜೊತೆಗಿನ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಒಪ್ಪಂದ ರೆನ್ಯೂ ಪವರ್ ಕಂಪನಿ ಜತೆ 50,000 ಕೋಟಿ ರೂ ಹೂಡಿಕೆಗೆ ಸಿಎಂ ಬೊಮ್ಮಾಯಿ ಸಹಿ ಹಾಕಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯಿಂದ ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಕಂಪನಿ ಸ್ಥಾಪಿಸಲಿದೆ. ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಭಾರ್ತಿ ಎಂಟರ್ ಪ್ರೈಸಸ್ನಿಂದ ರಾಜ್ಯದಲ್ಲಿ ಮತ್ತೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತವನ್ನು ವ್ಯಕ್ತಪಡಿಸಿದೆ. ಸಿಎಂ ಬೊಮ್ಮಾಯಿ ಎಲ್ಲಾ ಅಗತ್ಯ ಬೆಂಬಲ ನೀಡುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ‘ಮೊಬೈಲ್ ಸಂಖ್ಯೆ ಬದಲಿಸಿ ಈ ಮಹಾಮೋಸ ನಡೆದಿದೆ’; ಪತಿ ವಿರುದ್ಧ ಸುದ್ದಿಗೋಷ್ಠಿಯಲ್ಲಿ ನಟಿ ಚೈತ್ರಾ ಹಳ್ಳಿಕೇರಿ ಆರೋಪ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದಸ್ಸಾಲ್ಸ್ ಸಿಸ್ಟಮ್ಸ್ ಹಾಗೂ ನೆಸ್ಟ್ಲೇ ಜೊತೆ ಸಿಎಂ ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ದಸ್ಸಾಲ್ಸ್ ಸಿಸ್ಟಮ್ಸ್ ಹಾಗೂ ನೆಸ್ಟ್ಲೇ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳ ಬಗ್ಗೆ ಚರ್ಚಿಸಿದ್ದಾರೆ.

ದಸ್ಸಾಲ್ಸ್ ಸಿಸ್ಟಮ್ಸ್: ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ, ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ ,ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು. ನೆಸ್ಟ್ಲೆ ಸಂಸ್ಥೆ ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದ್ದಾರೆ.

Published On - 5:25 pm, Tue, 24 May 22