AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರದಿಂದ 3 ದಿನ ಸಿಎಂ ಪ್ರವಾಸ; ಕುಟುಂಬ ಸಮೇತರಾಗಿ ಕಾಶಿ, ಅಯೋಧ್ಯೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬೊಮ್ಮಾಯಿ

ಮಂಗಳವಾರ ಸಾರನಾಥಕ್ಕೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ಸಾರನಾಥದಲ್ಲಿರುವ ಬೌದ್ಧ ಧರ್ಮದ ಪವಿತ್ರ ಸ್ಥಳಕ್ಕೆ ತೆರಳಲಿದ್ದು, ಬಳಿಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.

ಸೋಮವಾರದಿಂದ 3 ದಿನ ಸಿಎಂ ಪ್ರವಾಸ; ಕುಟುಂಬ ಸಮೇತರಾಗಿ ಕಾಶಿ, ಅಯೋಧ್ಯೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: preethi shettigar

Updated on:Dec 11, 2021 | 11:09 AM

ಬೆಂಗಳೂರು: ಸೋಮವಾರದಿಂದ ಅಂದರೆ ಡಿಸೆಂಬರ್ 13 ರಿಂದ 3 ದಿನಗಳ ಕಾಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕುಟುಂಬ ಸಮೇತರಾಗಿ ಉತ್ತರ ಪ್ರದೇಶಕ್ಕೆ ಪ್ರವಾಸಕ್ಕೆ ತೆರಳಲಿದ್ದಾರೆ. ಸೋಮವಾರ ಅಧಿವೇಶನದಲ್ಲಿ ಭಾಗವಹಿಸಿ ಬಳಿಕ, ಕಾಶಿ, ಅಯೋಧ್ಯೆಗೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ವಿಶೇಷ ವಿಮಾನದ ಮೂಲಕ ವಾರಾಣಸಿಗೆ ತೆರಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ನಡೆಯಲಿರುವ ಗಂಗಾ ಆರತಿಯಲ್ಲಿ ಭಾಗಿಯಾಗಲಿದ್ದಾರೆ.

ಮಂಗಳವಾರ ಸಾರನಾಥಕ್ಕೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ಸಾರನಾಥದಲ್ಲಿರುವ ಬೌದ್ಧ ಧರ್ಮದ ಪವಿತ್ರ ಸ್ಥಳಕ್ಕೆ ತೆರಳಲಿದ್ದು, ಬಳಿಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಬುಧವಾರ ಅಯೋಧ್ಯೆಗೆ ತೆರಳಿ ರಾಮಜನ್ಮಭೂಮಿಗೆ ಭೇಟಿ ನೀಡಲಿದ್ದಾರೆ. ಕೇಂದ್ರದ ಬಿಜೆಪಿ ಪಕ್ಷದ ಸಿಎಂ ಮತ್ತು ಡಿಸಿಎಂಗಳಿಗಾಗಿ ಈ ಯಾತ್ರೆ ಆಯೋಜನೆ ಮಾಡಿದ್ದಾರೆ.

ಒಂದು ದಿನ ಮಾತ್ರ ಪ್ರವಾಸ ಮಾಡುತ್ತೇನೆ: ಬಸವರಾಜ ಬೊಮ್ಮಾಯಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮೇಳನವಿರುವ ಹಿನ್ನೆಲೆ ಒಂದು ದಿನ ಮಾತ್ರ ಉತ್ತರ ಪ್ರದೇಶ ಪ್ರವಾಸ ಮಾಡುತ್ತೇನೆ. ಸಮ್ಮೇಳನದಲ್ಲಿ ಭಾಗಿಯಾಗುವುದಕ್ಕೆ ಹೋಗುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಬಳಿಕ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ನೆಪದಲ್ಲಿ ವಸೂಲಿ ಬಗ್ಗೆ ಡಿ.ಕೆ. ಶಿವಕುಮಾರ್​ ಅವರ ಆರೋಪದ ವಿಚಾರವಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಬೆಳಗಾವಿ ಅಧಿವೇಶನಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೊವಿಡ್ ಟೆಸ್ಟ್‌ಗೆ 500 ರೂಪಾಯಿ ಶುಲ್ಕ ವಿಧಿಸಲಾಗುತ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಕಡಿಮೆ ಶುಲ್ಕವಿದೆ ಎಂದು ಹೇಳಿದ್ದಾರೆ.

ಕೊವಿಡ್​ ಟೆಸ್ಟ್ ಆಗಲು‌ ವಿಶೇಷವಾದ ಯಂತ್ರೋಪಕರಣಗಳಿವೆ. ನಮ್ಮ ರಾಜ್ಯದಲ್ಲಿ ಟೆಸ್ಟ್ ದರ ಕಡಿಮೆಯಿದೆ. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಲ್ಲಿ ದರ ಹೆಚ್ಚಾಗಿದೆ. ಆದ್ದರಿಂದ ಇದೊಂದು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಚಾರ ಎಂದು ಟೆಸ್ಟ್​ಗೆ 3500 ಪಡೆಯುವ ವಿಚಾರವನ್ನು  ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ.

ಮತಾಂತರ ನಿಷೇಧ ಮಸೂದೆ ಮಂಡನೆಗೆ ಕಾಂಗ್ರೆಸ್ ವಿರೋಧ ವಿಚಾರವಾಗಿ ಮಾತನಾಡಿದ್ದು, ಕಾಂಗ್ರೆಸ್ ಒಂದು ವಿರೋಧ ಪಕ್ಷ. ಹಾಗಾಗಿ ಎಲ್ಲಕ್ಕೂ ವಿರೋಧ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ ಗೆಹ್ಲೋಟ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿಯಲ್ಲಿ ದಟ್ಟ ಮಂಜು: ವಿಮಾನಕ್ಕೆ ಲ್ಯಾಂಡಿಂಗ್‌ ಸಮಸ್ಯೆ, ಸಿಎಂ ಬೊಮ್ಮಾಯಿ ಹೇಳಿದ್ದೇನು?

Published On - 10:48 am, Sat, 11 December 21

ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ