ರಂಗೇರಿದ ವಿಧಾನ ಪರಿಷತ್ ಚುನಾವಣೆ ಪ್ರಚಾರ: ಇಂದಿನಿಂದ 3 ದಿನ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ

ಇಂದು ಬೆಳಗ್ಗೆ 11ಕ್ಕೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ2:30ಕ್ಕೆ HAL ವಿಮಾನ ನಿಲ್ದಾಣದಿಂದ ಹೊರಟು 3:45ಕ್ಕೆ ಬೀದರ್‌ಗೆ ತಲುಪಲಿದ್ದಾರೆ.

ರಂಗೇರಿದ ವಿಧಾನ ಪರಿಷತ್ ಚುನಾವಣೆ ಪ್ರಚಾರ: ಇಂದಿನಿಂದ 3 ದಿನ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಆಯೇಷಾ ಬಾನು

Updated on: Dec 05, 2021 | 9:10 AM

ಬೆಂಗಳೂರು: ಡಿಸೆಂಬರ್ 10 ರಂದಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರ ರಂಗೇರಿದೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಂದಿನಿಂದ 3 ದಿನ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದು ಬೆಳಗ್ಗೆ 11ಕ್ಕೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ2:30ಕ್ಕೆ HAL ವಿಮಾನ ನಿಲ್ದಾಣದಿಂದ ಹೊರಟು 3:45ಕ್ಕೆ ಬೀದರ್‌ಗೆ ತಲುಪಲಿದ್ದಾರೆ. ಬೀದರ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆ ನಡೆಸಿ ಇಂದು ರಾತ್ರಿ ಬೀದರ್‌ನಲ್ಲೇ ಸಿಎಂ ಬೊಮ್ಮಾಯಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ (ಡಿಸೆಂಬರ್ 05) ಬೀದರ್‌ನಿಂದ ಹುಬ್ಬಳ್ಳಿಗೆ ತೆರಳಲಿದ್ದಾರೆ. ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 65 ನೇ ಪುಣ್ಯ ಸ್ಮರಣೆ ಹಿನ್ನೆಲೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಹುಬ್ಬಳ್ಳಿಯಿಂದ ಗದಗಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಕಾಗಿನೆಲೆಯಲ್ಲಿ ಸಿಎಂ ಬೊಮ್ಮಾಯಿ ಮತಯಾಚನೆ ನಡೆಸಿ ಪ್ರಚಾರದ ಬಳಿಕ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಇನ್ನು ಮತ್ತೊಂದೆಡೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಮಂಡ್ಯಗೆ ತೆರಳಿ ಪರಿಷತ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯದ ಕಾಳಿಕಾಂಬ ಸಮುದಾಯ ಭವನದಲ್ಲಿ ನಡೆಯಲಿರೊ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೈಸೂರಿನಲ್ಲಿ ಮಾಜಿ ಸಿಎಂಗಳ ಪ್ರಚಾರ ಇಂದು ಮೈಸೂರಿನಲ್ಲಿ ಮಾಜಿ ಸಿಎಂಗಳ ಮತಬೇಟೆ ನಡೆಯಲಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸಿಎನ್ ಮಂಜೇಗೌಡ ಪರ ಕುಮಾರಸ್ವಾಮಿ ಮತಯಾಚನೆ ನಡೆಸಿದ್ರೆ ಕೌಟಿಲ್ಯ ರಘು ಪರ ಬಿ.ಎಸ್ ಯಡಿಯೂರಪ್ಪ ಮತಯಾಚನೆ ನಡೆಸಲಿದ್ದಾರೆ. ಬಳಿಕ ಚಾಮರಾಜನಗರ ಮೈಸೂರು ನಗರದಲ್ಲಿ ಮತಯಾಚನಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಧಾರವಾಡ ವಿಧಾನ ಪರಿಷತ್ ಚುನಾವಣೆ; ಸಿಎಂ ಬೊಮ್ಮಾಯಿಗೆ ರಾಜಕೀಯ ನೆಲೆ ಕಲ್ಪಿಸಿದ ಕ್ಷೇತ್ರ ಈ ಬಾರಿ ಯಾರ ಕೈ ಹಿಡಿಯುತ್ತೆ?

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ