ಕುತೂಹಲ ಕೆರಳಿಸಿದ ನಾಳೆಯ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಜೂನ್ 22) ರಂದು ಮಧ್ಯಾಹ್ನ 1:30 ಕ್ಕೆ ದೆಹಲಿಗೆ ತೆರಳಲಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು (CM Basavaraj Bommai) ನಾಳೆ (ಜೂನ್ 22) ರಂದು ಮಧ್ಯಾಹ್ನ 1:30 ಕ್ಕೆ ದೆಹಲಿಗೆ (Delhi) ತೆರಳಲಿದ್ದಾರೆ. ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಲಿದ್ದಾರೆ. ಜೂನ್ 24ಕ್ಕೆ ಸಿಎಂ ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಸಿಎಂ ಬೊಮ್ಮಾಯಿ ದೆಹಲಿ ಭೇಟಿ ಭಾರೀ ಕುತೂಹಲ ಮೂಡಿಸಿದೆ.
ಸದ್ಯ ಬೊಮ್ಮಾಯಿ ಸಂಪುಟದಲ್ಲಿ ಐದು ಸ್ಥಾನಗಳು ಖಾಲಿಯಿವೆ. ಹೀಗಾಗಿ ಕೆಲ ಶಾಸಕರು ತಾವು ಮಂತ್ರಿ ಆಗಬೇಕು ಎಂದು ಬಹಿರಂಗವಾಗಿಯೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸಿಎಂ ಅವರ ದುಂಬಾಲು ಬಿದ್ದಿದ್ದರು. ಈ ಸಂಬಂಧ ಶಾಸಕರ ಆಸೆ ಈಡೇರಿಸುವ ಉದ್ದೇಶದಿಂದ ಸಿಎಂ ಬೊಮ್ಮಾಯಿ ಹೈಕಮಾಂಡ್ ನಾಯಕರ ಜೊತೆ ಸಂಪುಟ ಸರ್ಜರಿ ಬಗ್ಗೆ ಪ್ರಸ್ತಾಪಿಸುವ ನಿರೀಕ್ಷೆ ಇದೆ.
ಮೊದಲು ನಾಲ್ಕು ಸೀಟುಗಳು ಕಾಲಿ ಇದ್ದವು. ಕೆ. ಎಸ್ ಈಶ್ವರಪ್ಪ ಅವರ ರಾಜೀನಾಮೆಯಿಂದ ತೆರವಾದ ಒಂದು ಸ್ಥಾನ ಸೇರಿದಂತೆ ಒಟ್ಟು ಐದು ಮಂತ್ರಿಗಿರಿಗಳು ಬೊಮ್ಮಾಯಿ ಸಂಪುಟದಲ್ಲಿ ಖಾಲಿಯಿವೆ. ಈ ಖಾಲಿ ಹುದ್ದೆಗಳನ್ನು ತುಂಬಬೇಕೆಂದು ಕಳೆದೊಂದು ವರ್ಷದಿಂದ ಬಿಜೆಪಿ ಶಾಸಕರು ಸಿಎಂ ಸಿಕ್ಕಾಗಲೆಲ್ಲಾ ಕೇಳುತ್ತಿದ್ದಾರೆ. ಹೀಗಾಗಿ ನಾಳೆಯ ಸಿಎಂ ದೆಹಲಿ ಪ್ರವಾಸ ಕುತುಹಲ ಮೂಡಿಸಿದೆ. ಒಂದ ವೇಳೆ ಹೈಕಮಾಂಡ ಒಪ್ಪಿಗೆ ಸೂಚಿಸಿದರೆ, ಸಚಿವ ಸ್ಥಾನ ಆಕಾಂಕ್ಷಿಗಳು ಹಿಗ್ಗುತ್ತಾರೆ.
2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ: ಉಮೇಶ್ ಕತ್ತಿ
ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಇಬ್ಭಾಗವಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಬೆಳಗಾವಿಯಲ್ಲಿ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. 2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಉದಯಿಸಲಿವೆ. ಆಗ ಕರ್ನಾಟಕವೂ ಎರಡು ರಾಜ್ಯಗಳಾಗಳಿವೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರಿಲ್ಲೀಗ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಧಾರವಾಡದಲ್ಲಿ ಹೈಕೋರ್ಟ್, ಬೆಳಗಾವಿಯಲ್ಲಿ ಸುವರ್ಣಸೌಧ ಇದೆ. ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಮೂಲಸೌಕರ್ಯ ನಮ್ಮಲ್ಲಿವೆ ಎಂದು ಹೇಳಿದ್ದಾರೆ.
ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:09 pm, Wed, 22 June 22