ನಮಗೆ ಹಿರಿಯರು, ಆದ್ರೆ ಹೋರಾಟ ಇನ್ನೂ ಯುವಕರಂತೆ: ವಾಟಾಳ್ ನಾಗರಾಜ್​ರನ್ನು ಹೊಗಳಿದ ಸಿಎಂ ಬೊಮ್ಮಾಯಿ

ಕನ್ನಡ ರಾಜ್ಯೋತ್ಸವ ಸಮಿತಿಯಿಂದ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಈ ವೇಳೆ, ನಿಜಲಿಂಗಪ್ಪರಿಗೆ ಭಾರತ ರತ್ನ ಕೊಡಿಸುವಂತೆ ವಾಟಾಳ್​ರಿಂದ ಸಿಎಂಗೆ ಮನವಿ ಸಲ್ಲಿಸಲಾಗಿದೆ. ಮನವಿಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ನಮಗೆ ಹಿರಿಯರು, ಆದ್ರೆ ಹೋರಾಟ ಇನ್ನೂ ಯುವಕರಂತೆ: ವಾಟಾಳ್ ನಾಗರಾಜ್​ರನ್ನು ಹೊಗಳಿದ ಸಿಎಂ ಬೊಮ್ಮಾಯಿ
ವಾಟಾಳ್ ನಾಗರಾಜ್​ರನ್ನು ಹೊಗಳಿದ ಸಿಎಂ ಬೊಮ್ಮಾಯಿ
Follow us
TV9 Web
| Updated By: ganapathi bhat

Updated on:Nov 01, 2021 | 4:00 PM

ಬೆಂಗಳೂರು: ನಿಜಲಿಂಗಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ವಾಟಾಳ್ ನಾಗರಾಜ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಅದರ ನೇತೃತ್ವವನ್ನ ತಾವು ವಹಿಸಿಕೊಳ್ಳಬೇಕು ಎಂದು ವೇದಿಕೆಯಲ್ಲಿ ಸಿಎಂ ಬೊಮ್ಮಾಯಿಗೆ ವಾಟಳ್ ನಾಗರಾಜ್ ಮನವಿ ಮಾಡಿದ್ದಾರೆ. ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳನ್ನ ಭೇಟಿ ಮಾಡಿ ನಿಜಲಿಂಗಪ್ಪನವರಿಗೆ ಭಾರತಗ ರತ್ನ ಕೊಡಿಸುವ ಕೆಲಸ ಮಾಡಬೇಕು. ನಿಜಲಿಂಗಪ್ಪನವರ ಹೆಸರಿನಲ್ಲಿ ರಾಜ್ಯದ ಯಾವುದಾದ್ರು ಜಿಲ್ಲೆಯಲ್ಲಿ 1 ಸಾವಿರ ಎಕರೆ ಜಾಗದಲ್ಲಿ ಸ್ಮಾರಕ ಆಗಬೇಕು ಎಂದು ಕೇಳಿಕೊಂಡಿದ್ದಾರೆ.

ಕನ್ನಡ ರಾಜ್ಯೋತ್ಸವ ಸಮಿತಿಯಿಂದ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಈ ವೇಳೆ, ನಿಜಲಿಂಗಪ್ಪರಿಗೆ ಭಾರತ ರತ್ನ ಕೊಡಿಸುವಂತೆ ವಾಟಾಳ್​ರಿಂದ ಸಿಎಂಗೆ ಮನವಿ ಸಲ್ಲಿಸಲಾಗಿದೆ. ಮನವಿಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ, ರಾಷ್ಟ್ರಪತಿ ಭೇಟಿಯಾಗಿ ಈ ಕೆಲಸ ಮಾಡಬೇಕು. ಇದರ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ. ಕೇಂದ್ರ ಗೃಹ ಸಚಿವರ ಜೊತೆಯೂ ಚರ್ಚೆ ಮಾಡುತ್ತೇವೆ ಎಂದು ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಕನ್ನಡ ರಾಜ್ಯೋತ್ಸವ ಸಮಿತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ವಾಟಾಳ್ ನಾಗರಾಜ್​ರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೊಗಳಿದ್ದಾರೆ. ಕರ್ನಾಟಕ ಏಕೀಕರಣ ಹತ್ತಿರದಿಂದ ನೋಡಿದ್ದು ವಾಟಾಳ್. ಬೆಂಗಳೂರಲ್ಲಿ ಕನ್ನಡದ ಧ್ವನಿ ಎತ್ತಿದ್ದು ವಾಟಾಳ್‌ ನಾಗರಾಜ್. ಸರ್ಕಾರಕ್ಕಿಂತ ಮೊದಲೇ ವಾಟಾಳ್ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬಂದಿದ್ದಾರೆ. ಅವರು ನಮಗೆ ಹಿರಿಯರು, ಆದ್ರೆ ಅವರ ಹೋರಾಟ ಇನ್ನೂ ಯುವಕರಂತೆ ಇದೆ ಎಂದು ವಾಟಾಳ್ ಹೋರಾಟದ ಬಗ್ಗೆ ಸಿಎಂ ಬೊಮ್ಮಾಯಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಟ ಪುನೀತ್ ಅಂತ್ಯಕ್ರಿಯೆ ಅಚ್ಚುಕಟ್ಟಾಗಿ ನಡೆದಿದೆ. ಬೊಮ್ಮಾಯಿ ಸರ್ಕಾರ ಅಂತ್ಯಕ್ರಿಯೆ ಅಚ್ಚುಕಟ್ಟಾಗಿ ನಡೆಸಿದೆ ಎಂದು ಸಿಎಂ ಬೊಮ್ಮಾಯಿ ಅವರನ್ನು ವಾಟಾಳ್ ನಾಗರಾಜ್ ಹಾಡಿಹೊಗಳಿದ್ದಾರೆ. ಕನ್ನಡ ರಾಜ್ಯೋತ್ಸವ ಸಮತಿಯಿಂದ ಆಯೋಜಿಸಿದ್ದ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ವಾಟಾಳ್ ನಾಗರಾಜ್, ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಉಪಸ್ಥಿತರಿದ್ದರು.

ಇದನ್ನೂ ಓದಿ: ಸ್ಪಷ್ಟ ದಿಕ್ಸೂಚಿ, ನಿರ್ದಿಷ್ಟ ಗುರಿ, ಸಮಸ್ಯೆ ಬಗೆಹರಿಸುವ ಬದ್ಧತೆ ಇದೆ: ಜನಸೇವಕ ಕಾರ್ಯಕ್ರಮದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ

ಇದನ್ನೂ ಓದಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಜನ ಸ್ಪಂದನ ವೆಬ್ ಪೋರ್ಟಲ್ ಉದ್ಘಾಟನೆ

Published On - 4:00 pm, Mon, 1 November 21