AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda: ಹಿರಿಯ ನಾಯಕ ದೇವೇಗೌಡರ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

CM Basavaraj Bommai: ರಾಜ್ಯದ ಹಿರಿಯ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಯೋಗಕ್ಷೇಮ ವಿಚಾರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳು ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಇದೀಗತಾನೆ ಭೇಟಿ ನೀಡಿದ್ದಾರೆ.

HD Deve Gowda: ಹಿರಿಯ ನಾಯಕ ದೇವೇಗೌಡರ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹಿರಿಯ ನಾಯಕ ದೇವೇಗೌಡರ ಯೋಗಕ್ಷೇಮ ವಿಚಾರಿಸಲು ಮುಖ್ಯಮಂತ್ರಿ ಬೊಮ್ಮಾಯಿ ಆಗಮನ
TV9 Web
| Edited By: |

Updated on:Sep 21, 2022 | 3:20 PM

Share

ಬೆಂಗಳೂರು: ರಾಜ್ಯದ ಹಿರಿಯ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಯೋಗಕ್ಷೇಮ ವಿಚಾರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳು ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಇದೀಗತಾನೆ ಭೇಟಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಜೊತೆಗೆ ಸಚಿವರಾದ ಆರ್. ಅಶೋಕ್, ಸೋಮಣ್ಣ, ಕೆ. ಗೋಪಾಲಯ್ಯ, ಭೈರತಿ ಬಸವರಾಜ, ಮುನಿರತ್ನ, ಮಾಧುಸ್ವಾಮಿ ಹಾಗೂ ಆನಂದ್ ಸಿಂಗ್ ಸೇರಿ ಹಲವು ಸಚಿವರು ಆಗಮಿಸಿದ್ದಾರೆ. ಪ್ರಸ್ತುತ ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದು, ಅಧಿವೇಶನದ ಮಧ್ಯೆ ಹಿರಿಯರಾದ ದೇವೇಗೌಡರ ಯೋಗಕ್ಷೇಮ ವಿಚಾರಿಸಲು ಸಚಿವರೆಲ್ಲ ಬಂದಿದ್ದಾರೆ.

ದೇವೇಗೌಡರ ಆರೋಗ್ಯ ವಿಚಾರಿಸುತ್ತಿರುವ ಸಿಎಂ ಬೊಮ್ಮಾಯಿ:

ಆದರೆ ಸದನ ನಡೆಯುತ್ತಿರುವ ಕಾರಣ ಎಲ್ಲರೂ ತೆರಳುವುದು ಬೇಡ ಎಂಬ ಸಿಎಂ ಸೂಚನೆ ಹಿನ್ನೆಲೆಯಲ್ಲಿ ಕೆಲ ಸಚಿವರು ಸದನಕ್ಕೆ ವಾಪಾಸಾದರು. ಇದೆ ವೇಳೆ, ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಎರಡನೇ ಮಹಡಿಯಲ್ಲಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸುತ್ತಿದ್ದಾರೆ. ದೇವೇಗೌಡರ ಪಕ್ಕದಲ್ಲಿಯೇ ಕುಳಿತು, ಗೌಡರ ಕೈ ಹಿಡಿದು ಅವರ ಆರೋಗ್ಯದ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ ಪಡೆದರು.

ಕಾಲು ನೋವು ಇದೆ… ಮಂಡಿ ನೋವು ಕೂಡ ಇದೆ:

ದೇವೆಗೌಡರನ್ನು ಸಿಎಂ ಭೇಟಿ ಮಾಡಿದ ವೇಳೆ ಹಿರಿಯ ಗೌಡರು ಊಟ ಮಾಡ್ಕೊಂಡು ಹೋಗಿ ಎಂದು ಸಿಎಂ ಬೊಮ್ಮಾಯಿ ಅವರಿಗೆ ಸೂಚಿಸಿದರು. ನಮ್ಮದೆಲ್ಲಾ ಊಟ ಆಗಿದೆ ಎಂದನ್ನು ಸಿಎಂ ಬೊಮ್ಮಾಯಿ ತಮ್ಮದು ಊಟ ಎಲ್ಲಾ ಏನ್ ಮಾಡ್ತೀರಾ..? ನಾರ್ಮಲ್ ಮುದ್ದೆ ಎಲ್ಲಾ ಮಾಡ್ತೀರಾ? ಎಂದು ಗೌಡರನ್ನು ಪ್ರಶ್ನಿಸಿದರು. ಅದಕ್ಕೆ ಉತ್ತರವಾಗಿ ಗೌಡರು ತಲೆ ಅಲ್ಲಾಡಿಸಿದರು.

ಇನ್ನು ಕಾಲು ನೋವು ಇದೆಯಲ್ಲ? ಎಂಬ ಸಿಎಂ ಬೊಮ್ಮಾಯಿ ಪ್ರಶ್ನೆಗೆ ದೇವೆಗೌಡರು ಹಾ.. ಕಾಲು ನೋವು ಇದೆ. ಹಾಗೆಯೇ ಮಂಡಿ ನೋವು ಕೂಡ ಇದೆ‌ ಎಂದರು.

ದೇವೇಗೌಡರ ನಿವಾಸದಿಂದ ಹೊರಬಂದ ಸಿಎಂ, ಸಚಿವರು

ದೇವೇಗೌಡರ ಆರೋಗ್ಯ ವಿಚಾರಿಸಲು ಆಗಮಿಸಿದ್ದ ಸಿಎಂ ಬೊಮ್ಮಾಯಿ ಮತ್ತು ಸಚಿವರ ದಂಡು ಹೆಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಬಳಿಕ, ಅವರ ಮನೆಯಿಂದ ವಾಪಸಾಗಿದ್ದಾರೆ. ಅದಕ್ಕೂ ಮುನ್ನ ಸಿಎಂ ಮತ್ತು ಸಚಿವರು ದೇವೇಗೌಡರ ನಿವಾಸದಲ್ಲಿ ಊಟ ಮಾಡಿದರು. ಸಿಎಂ ಹಾಗೂ ಜೊತೆಗಿದ್ದ ಸಚಿವರ ಪೈಕಿ ಕೆಲವರು ಮುದ್ದೆ ಕೆಲವರು ಪೂರಿ ಭೋಜನ ಸವಿದರು.

ನಿನ್ನೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಮತ್ತು ಮೊನ್ನೆ ಸೋಮವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳು ದೇವೇಗೌಡರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದಾರೆ.

Published On - 2:12 pm, Wed, 21 September 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್