AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ ಪಂಚಾಯಿತ್​ ಸಿಇಒಗಳ ಜತೆ ಸಿಎಂ ಬೊಮ್ಮಾಯಿ ಸಭೆ; ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ

ಝಡ್​ಪಿ ಸಿಇಓಗಳಿಗೆ ಸಿಎಂ ಬೊಮ್ಮಾಯಿ ಬಿಸಿ ಮುಟ್ಟಿಸಿದ್ದು, ಅತ್ಯಂತ ಯೋಜನಾಬದ್ಧ ವೈಜ್ಞಾನಿಕ ದಾರಿಯಲ್ಲಿ ಸಾಗುತ್ತಿದ್ದೇವೆ. ಬೇರೆಯವರ ತರಹವೇ ನನ್ನ ಆಡಳಿತ ಅಂದುಕೊಳ್ಳಬೇಡಿ. ನನ್ನ ಸ್ಟೈಲೇ ಬೇರೆ, ಹೇಳೋರು ಕೇಳೋರೂ ಯಾರೂ ಇಲ್ಲ ಅಂದುಕೊಂಡಿದ್ದೀರಾ?

ಜಿಲ್ಲಾ ಪಂಚಾಯಿತ್​ ಸಿಇಒಗಳ ಜತೆ ಸಿಎಂ ಬೊಮ್ಮಾಯಿ ಸಭೆ; ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:May 09, 2022 | 12:36 PM

Share

ಬೆಂಗಳೂರು: ಅಧಿಕಾರ ವಿಕೇಂದ್ರೀಕರಣ ಸರಿಯಾಗಿ ಆಗುವಂತೆ ನೋಡಿಕೊಳ್ಳಿ. ಕೆಳ ಹಂತದ ಅಧಿಕಾರಿಗಳ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ. ಪಿಡಿಒಗಳನ್ನು ಹದ್ದುಬಸ್ತಿನಲ್ಲಿ ಇಡಲು ಸಿಎಂ (CM) ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತ್​ ಸಿಇಒಗಳ ಜತೆ ಸಮಲೋಚನೆ ಸಭೆಯಲ್ಲಿ ಸಿಇಒಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮೊದಲು ನೀವು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಸಿಇಒಗಳೇ ಗ್ರಾಮಗಳಿಗೆ ಹೋಗಲ್ಲ, ಪಿಡಿಒಗಳು ನಿಮಗೆ ಹೆದರಲ್ಲ. ಎಷ್ಟು ಜನ ಗ್ರಾ.ಪಂ.ಗಳಿಗೆ ಹೋಗಿ ಪರಿಶೀಲನೆ ಮಾಡಿದ್ದೀರಾ? ಎಷ್ಟು ಜನ ಫಲಾನುಭವಿಗಳ ಪಟ್ಟಿ ಆಯ್ಕೆ ಮಾಡಿದ್ದೀರಾ? ನಾಲ್ಕು ತಿಂಗಳ ಕೆಲಸವನ್ನು 12 ತಿಂಗಳು ಮಾಡುತ್ತೀರಿ. ಇವತ್ತಿನಿಂದ ಬದಲಾವಣೆ ಕಾರ್ಯ ಆರಂಭ ಆಗಬೇಕು. ಜನರಿಗೆ ವಿಶ್ವಾಸ ಬರುವಂತೆ ಕೆಲಸ ಮಾಡಿ. ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಝಡ್​ಪಿ ಸಿಇಓಗಳಿಗೆ ಸಿಎಂ ಬೊಮ್ಮಾಯಿ ಬಿಸಿ ಮುಟ್ಟಿಸಿದ್ದು, ಅತ್ಯಂತ ಯೋಜನಾಬದ್ಧ ವೈಜ್ಞಾನಿಕ ದಾರಿಯಲ್ಲಿ ಸಾಗುತ್ತಿದ್ದೇವೆ. ಬೇರೆಯವರ ತರಹವೇ ನನ್ನ ಆಡಳಿತ ಅಂದುಕೊಳ್ಳಬೇಡಿ. ನನ್ನ ಸ್ಟೈಲೇ ಬೇರೆ, ಹೇಳೋರು ಕೇಳೋರೂ ಯಾರೂ ಇಲ್ಲ ಅಂದುಕೊಂಡಿದ್ದೀರಾ? ಐ ಆ್ಯಮ್ ಸೀರಿಯಸ್. ಶಾಲೆಗಳಲ್ಲಿ ಮಕ್ಕಳಿಗೆ ವ್ಯಾಕ್ಸಿನ್ ಹಾಕಿ ಅಂದಿದ್ದೇವೆ. ಎಷ್ಟು ಜನ ಇದನ್ನು ಗಂಭೀರವಾಗಿ ಪರಿಗಣಿಸಿದ್ದೀರಾ? ಒಂದು ಜಿಲ್ಲೆಯಲ್ಲಿ 3 ಲಕ್ಷ ಮಕ್ಕಳಿದ್ದಾರೆ. ನಾಳೆ ಮಕ್ಕಳಿಗೆ ಏನಾದರೂ ಅದರೆ ಯಾರು ಜವಾಬ್ದಾರಿ? ಸೋಷಿಯಲ್ ಮತ್ತು ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವುದು ನಿಮ್ಮ ಜವಾಬ್ದಾರಿ. ಮಕ್ಕಳ ಅಪೌಷ್ಟಿಕತೆ ವಿಚಾರವಾಗಿ ಹೈದ್ರಾಬಾದ್ ಕರ್ನಾಟಕ ಭಾಗದ ಸಿಇಓಗಳಿಗೆ ತರಾಟೆ ತೆಗೆದುಕೊಂಡರು. ಶಿಶು ತಾಯಿ ಮರಣ ಪ್ರಮಾಣ, ಅಪೌಷ್ಟಿಕತೆ ಬಗ್ಗೆ ಯಾಕೆ ಪರಿಹಾರ ಸಿಗ್ತಿಲ್ಲ? 30 ವರ್ಷಗಳಿಂದ ನಿರಂತರ ಯೋಜನೆ ಜಾರಿಯಲ್ಲಿದ್ರೂ ಯಾಕೆ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರಶ್ನಿಸಿದರು.

ಬಡವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಯಾವಾಗಲು ಸಿದ್ಧ. ಬಡವರ ಕಷ್ಟಕ್ಕೆ ಸಹಕರಿಸುವುದೇ ನಮ್ಮ ಮೊದಲ ಆದ್ಯತೆ. ಜನಸಾಮಾನ್ಯರಿಗೂ ಕೂಡ ಆಡಳಿತದಲ್ಲಿ ಬದಲಾವಣೆಯಾಗುವುದು ತಿಳಿಯಬೇಕು. ನಾವು ಒಂದು ತಂಡವಾಗಿ ಕೆಲಸ ಮಾಡಿದರೇ ಮಾತ್ರ ನಮ್ಮ ಕಲ್ಪನೆಯ ನವ ಕರ್ನಾಟಕ ನಿರ್ಮಾಣವಾಲು ಸಾಧ್ಯವೆಂದು ಬಸವರಾಜ ಬೊಮ್ಮಾಯಿ ಹೇಳಿದರು. ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್​ ಅಶೋಕ್, ಸಿ.ಸಿ ಪಾಟೀಲ್, ಕೆ.ಸಿ.ನಾರಾಯಣಗೌಡ, ಕೆ.ಗೋಪಾಲಯ್ಯ, ಬಿ.ಸಿ.ನಾಗೇಶ್, ಬಿ.ಸಿ ಪಾಟೀಲ್, ಸುನೀಲ್ ಕುಮಾರ್ , ಪ್ರಭು ಚೌಹಾಣ್, ಉಮೇಶ್ ಕತ್ತಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:24 pm, Mon, 9 May 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?