ಬೆಂಗಳೂರು: ಸಚಿವ ಸಂಪುಟ ಬದಲಾವಣೆ ಚರ್ಚೆ ಬೆನ್ನಲ್ಲೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನಾಳೆ (ಏಪ್ರಿಲ್ 29) ದೆಹಲಿಗೆ ತೆರಳುತ್ತಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, ನಾಳೆ ಸಂಜೆ ದೆಹಲಿಗೆ (Delhi) ಹೋಗುತ್ತಿದ್ದೇನೆ. ಹೈಕಮಾಂಡ್ (Hicommand) ನಾಯಕರ ಭೇಟಿ ಉದ್ದೇಶದಿಂದ ತೆರಳುತ್ತಿಲ್ಲ. ಎಲ್ಲಾ ರಾಜ್ಯಗಳ ಸಿಜೆಗಳು, ಸಿಎಂಗಳ ಸಭೆಯಲ್ಲಿ ಭಾಗಿಯಾಗುವೆ. ಏಪ್ರಿಲ್ 30ರಂದು ನಡೆಯುವ ಸಭೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದೇನೆ ಎಂದು ಹೇಳಿದರು.
ನಂತರ ಮಾತನಾಡಿದ ಬೊಮ್ಮಾಯಿ, 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಿಐಡಿ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ. ಕಾಂಗ್ರೆಸ್ ಪಕ್ಷದವರು ಏನೇ ಮಾಡಿದರೂ ಮಾತನಾಡುತ್ತಾರೆ. ಅಮೃತ್ ಪೌಲ್ ವರ್ಗಾವಣೆ ಅದೊಂದು ರೊಟೀನ್ ಪ್ರೋಸೆಸ್. ಬೇರೆ ಬೇರೆ ಎಡಿಜಿಪಿಗಳ ವರ್ಗಾವಣೆ ಕೂಡ ಇತ್ತು. ಅಮೃತ್ ಪೌಲ್ ವರ್ಗಾವಣೆ ಅದೊಂದು ಸಹಜವಾದ ಪ್ರಕ್ರಿಯೆ ಎಂದು ತಿಳಿಸಿದರು.
ಬೆಳಗಾವಿಗೆ ಆಗಮಿಸಲಿರುವ ಬೊಮ್ಮಾಯಿ:
ಸಿಎಂ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿಗ್ಗಾವಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಆಗಮಿಸುತ್ತಾರೆ. ಮಧ್ಯಾಹ್ನ 3.30ಕ್ಕೆ ಜಗನ್ನಾಥರಾವ್ ಜೋಶಿ ಜನ್ಮಶತಾಬ್ದಿ ಸ್ಮಾರಕ ಭವನ ಭೂಮಿಪೂಜೆಯಲ್ಲಿ ಭಾಗಿಯಾಗುತ್ತಾರೆ. ಜನಕಲ್ಯಾಣ ಟ್ರಸ್ಟ್ ವತಿಯಿಂದ ಬೆಳಗಾವಿಯ ಶಾಸ್ತ್ರೀನಗರದ ಸಂಘ ಸದನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಸಂಜೆ 5.40ಕ್ಕೆ ಸಾಂಬ್ರಾ ಏರ್ಪೋರ್ಟ್ನಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಇನ್ನು ಬೊಮ್ಮಾಯಿ ಇಂದು ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮುನವಳ್ಳಿ ಬಳಿ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸುತ್ತಾರೆ. ಮಧ್ಯಾಹ್ನ 12 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಅರೆಬೈಲ್ ಶಿವರಾಂ ಹೆಬ್ಬಾರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.30ಕ್ಕೆ ರಸ್ತೆ ಮಾರ್ಗವಾಗಿ ಸಿಎಂ ಹುಬ್ಬಳ್ಳಿಗೆ ಪ್ರಯಾಣ ಮಾಡುತ್ತಾರೆ.
ಇದನ್ನೂ ಓದಿ
ತಾಯಿಯ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ನಟಿ ತಾರಾ ಅನುರಾಧ; ಇಲ್ಲಿದೆ ವಿಡಿಯೋ
Published On - 10:32 am, Thu, 28 April 22