AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್​: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ​​​​

ಬೆಂಗಳೂರು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ. ಇಂದಿನಿಂದ 2 ದಿನ ಕರ್ನಾಟಕ  ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್​: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ​​​​
ಬೆಂಗಳೂರು ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ
TV9 Web
| Edited By: |

Updated on:May 19, 2022 | 10:52 AM

Share

ಬೆಂಗಳೂರು: ಬೆಂಗಳೂರಿನ ಮಳೆ (Karnataka Rains) ಹಾನಿ ಪ್ರದೇಶಗಳಿಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್ ಮಾಡಲಿದ್ದಾರೆ.​​​​​ ಮಳೆ ಹಾನಿ ಸಂಬಂಧ ಸ್ಥಳೀಯರಿಂದ ಸಿಎಂ ಮಾಹಿತಿ ಪಡೆಯಲಿದ್ದಾರೆ. ಬೆಳಗ್ಗೆ 9.30ಕ್ಕೆ ಗೃಹ ಕಚೇರಿ ಕೃಷ್ಣಯಿಂದ ತೆರಳಲಿದ್ದು, ಬೆಳಗ್ಗೆ 9.50ರಿಂದ 10ರವರೆಗೆ ಜೆ.ಸಿ.ನಗರದಲ್ಲಿ ಸಿಎಂ ಪರಿಶೀಲನೆ ಮಾಡಲಿದ್ದಾರೆ. 10.15ರಿಂದ 10.30ಕ್ಕೆ ಕಮಲಾನಗರಕ್ಕೆ ಭೇಟಿ ನೀಡಲಿದ್ದು, 11.05ರಿಂದ 11.20ಕ್ಕೆ ನಾಗವಾರ ಮೆಟ್ರೋ ನಿಲ್ದಾಣ, 11.45ರಿಂದ ಮಧ್ಯಾಹ್ನ 12ಕ್ಕೆ ಹೆಚ್​ಬಿಆರ್​ ಲೇಔಟ್​, 12.10ರಿಂದ 12.20ಕ್ಕೆ ಹೆಬ್ಬಾಳದ ಎಸ್​ಟಿಪಿ ಮತ್ತು  12.30ಕ್ಕೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್ ಅಂತ್ಯವಾಗಲಿದೆ.

ಬಿಎಂಟಿಸಿ ವೋಲ್ವೋ ಬಸ್​ನಲ್ಲಿ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್​ ಹಾಕಿದ್ದು,​​​​ ಮಳೆಯಿಂದ ಹಾನಿಯಾದ ಬೆಂಗಳೂರು ಪೂರ್ವ, ಪಶ್ಚಿಮ ವಲಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸಿಎಂಗೆ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ.ಮೋಹನ್, ಶಾಸಕರಾದ ಭೈರತಿ ಸುರೇಶ್, ಎಸ್.ಆರ್.ವಿಶ್ವನಾಥ್​ ಸಾಥ್​, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​, ಬೆಂಗಳೂರು ಪೊಲೀಸ್ ಕಮಿಷನರ್​ ಪ್ರತಾಪ್ ರೆಡ್ಡಿ ಉಪಸ್ಥಿತರಿದ್ದರು.

ಬೆಂಗಳೂರಿನಲ್ಲಿ ನಿಲ್ಲದ ಮಳೆಯ ಅಬ್ಬರ:

ಇದನ್ನೂ ಓದಿ
Image
Karnataka Rain: ಬೆಂಗಳೂರಿನಲ್ಲಿ ನಿಲ್ಲದ ಮಳೆಯ ಅಬ್ಬರ; ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ
Image
ಬೆಂಗಳೂರು ಹೊರಮಾವು ಪ್ರದೇಶದಲ್ಲಿ 300-400 ಮನೆಗಳು ಜಲಾವೃತ! 24 ಗಂಟೆಗೆ 114 ಮಿಮೀ ಮಳೆ ದಾಖಲು
Image
Video: ಕೆಸರಿನಲ್ಲಿ ಸಿಲುಕಿದ ಮರ್ಸಿಡಿಸ್, ನೀರು ತುಂಬಿದ ರಸ್ತೆ, ಬೆಂಗಳೂರಿನ ಯಾವ ಎರಿಯಾದಲ್ಲಿ ಎಷ್ಟು ಮಳೆ?
Image
ನೀರು ನುಗ್ಗಿರುವ ಮನೆಗಳಿಗೆ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಸತತವಾಗಿ ಮಳೆಯಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೇ 17 ರಂದು ಮಳೆ ಆರ್ಭಟ ಜೋರಾಗಿತ್ತು. ಭಾರೀ ಮಳೆಗೆ ನಗರದ ಜನ ಜೀವನ ಅಸ್ತವ್ಯಸ್ಥವಾಗಿದೆ. ಹಲವು ಕಡೆ ಮನೆಗಳಿಗೆ ನೀರು ನುಗ್ಗಿ ತೊಂದರೆಯಾಗಿದೆ. ಹೀಗಾಗಿ ನೀರು ನುಗ್ಗಿರುವ ಮನೆಗಳಿಗೆ 25 ಸಾವಿರ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಣೆ ಮಾಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ, ನೀರು ನುಗ್ಗಿ ಸಮಸ್ಯೆಯಾದವರಿಗೆ ಊಟದ ವ್ಯವಸ್ಥೆ ಮಾಡುತ್ತೇವೆ. ಮನೆ ಕ್ಲೀನ್ ಮಾಡಿಸಿ ಕೊಡುವ ವ್ಯವಸ್ಥೆ ಮಾಡುತ್ತೇವೆ. ಕಾಲುವೆ ಪಕ್ಕದಲ್ಲಿ ಮನೆ ಕಟ್ಟಿಕೊಂಡಿದ್ದರಿಂದ ಈ ಅವಾಂತರ ಸೃಷ್ಟಿಯಾಗಿದೆ ಎಂದರು ತಿಳಿಸಿದರು

ಬೆಂಗಳೂರು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ. ಇಂದಿನಿಂದ 2 ದಿನ ಕರ್ನಾಟಕ  ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಮೇ 20ರಿಂದ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಲಿದ್ದು, ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Nathuram Godse: ನಾಥೂರಾಮ್ ವಿನಾಯಕ ಗೋಡ್ಸೆ ಜನ್ಮದಿನ: ನಿಮಗೆ ತಿಳಿಯದ ಕೆಲವು ಸಂಗತಿಗಳು

ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ತಿಳಿಸಿದೆ. ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಕರ್ನಾಟಕದ ಹವಾಮಾನ ಇಲಾಖೆಯ ಮುಖ್ಯಸ್ಥೆ ಗೀತಾ ಅಗ್ನಿಹೋತ್ರಿ, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಮತ್ತು ನಂತರ 3ನೇ ದಿನದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುತ್ತದೆ. 4 ಮತ್ತು 5ನೇ ದಿನದಂದು ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದಿದ್ದಾರೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯ ನಿರೀಕ್ಷೆಯಿದೆ. ಶುಕ್ರವಾರ ಸಾಕಷ್ಟು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ ಮತ್ತು ಭಾನುವಾರ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಹೊರತಾಗಿ ದೇಶದ ವಿವಿಧ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಪ್ರದೇಶದಲ್ಲಿ ಮುಂದಿನ 3 ದಿನಗಳಲ್ಲಿ ಅಸ್ಸಾಂ, ಮೇಘಾಲಯ ಮತ್ತು ಸಿಕ್ಕಿಂನಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:28 am, Thu, 19 May 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್