ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ; ಪ್ರವಾಹಕ್ಕೆ ಸೂರು ಕಳೆದುಕೊಂಡ ವೃದ್ಧೆಗೆ ನಾಲ್ಕೇ ತಿಂಗಳಲ್ಲಿ ಮನೆ

ಹ್ಯಾಬಿಟ್ಯಾಟ್ ಸೆಂಟರ್ ಮೂಲಕ ನಿರ್ಮಿಸಲಾದ ಸುಸಜ್ಜಿತ ಮನೆಯನ್ನು ಸವಣೂರ ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ವೃದ್ಧೆ ಕಮಲವ್ವನಿಗೆ ಹಸ್ತಾಂತರಿಸಿದ್ದಾರೆ.

ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ; ಪ್ರವಾಹಕ್ಕೆ ಸೂರು ಕಳೆದುಕೊಂಡ ವೃದ್ಧೆಗೆ ನಾಲ್ಕೇ ತಿಂಗಳಲ್ಲಿ ಮನೆ
ಸ್ವಂತ ಮನೆಯಲ್ಲಿ ಕಮಲವ್ವನ ಸಂಕ್ರಾಂತಿ ಸಂಭ್ರಮ
Follow us
TV9 Web
| Updated By: preethi shettigar

Updated on:Jan 16, 2022 | 6:08 PM

ಬೆಂಗಳೂರು: ಪ್ರವಾಹಕ್ಕೆ (Flood) ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ತಮ್ಮ ಮನೆಯಲ್ಲಿ ಸಂಭ್ರಮಿಸಲಾಗದ ಸಂಕಟ ಎದುರಾಗಿತ್ತು. ಈ ಕುರಿತು ಖಾಸಗಿ ವಾಹಿನಿ ಪಬ್ಲಿಕ್ ಟಿವಿ ಸಂದರ್ಶನ ಕಾರ್ಯಕ್ರಮ ನಡೆಸಿದ್ದರು. ಈ ವೇಳೆ ಜನರ ಸಂಕಷ್ಟ ಆಲಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಥಳದಲ್ಲೇ ಪರಿಹಾರ ಸೂಚಿಸಿದ್ದರು. ಕಮಲವ್ವನೂ ಈ ಸಮಯದಲ್ಲಿ ತಮ್ಮ ಸಂಕಷ್ಟ ತೋಡಿಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ಪ್ರವಾಹಕ್ಕೆ ಸೂರು ಕಳೆದುಕೊಂಡ ವೃದ್ಧೆಗೆ ನಾಲ್ಕೇ ತಿಂಗಳಲ್ಲಿ ಮನೆ (Home) ನಿರ್ಮಿಸಿಕೊಟ್ಟಿದ್ದಾರೆ.

ಇಬ್ಬರೂ ಗಂಡುಮಕ್ಕಳು ಸತ್ತು ಹೋಗಿದ್ದಾರೆ. ಮನೆ ಕಟ್ಟಸಿಕೊಡಿ ಎಂದು ಗದ್ಗದಿತರಾಗಿ ನುಡಿದ ಕಮಲವ್ವನಿಗೆ ಸಾಂತ್ವನ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಮಲವ್ವ ಸ್ವಂತ ಸೂರಿನಡಿ ಸಂಕ್ರಾಂತಿ ಆಚರಿಸುವಂತೆ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಶಿಗ್ಗಾಂವಿಯ ಮಂಚಿನಕೊಪ್ಪ ಗ್ರಾಮದಲ್ಲಿ ಕಮಲವ್ವ ತಿಮ್ಮನಗೌಡ್ರ ತಮಗೆ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ನಾಲ್ಕೇ ತಿಂಗಳಿನಲ್ಲಿ ಮನೆ ನಿರ್ಮಿಸಿದ್ದಾರೆ. ಆ ಮೂಲಕ ಸಂಕ್ರಾಂತಿಯಂದು ಕಮಲವ್ವನಿಗೆ ಮನೆಯನ್ನು ಹಸ್ತಾಂತರಿಸಿದ್ದಾರೆ.

home

ಪ್ರವಾಹಕ್ಕೆ ಸೂರು ಕಳೆದುಕೊಂಡ ವೃದ್ಧೆಗೆ ನಾಲ್ಕೇ ತಿಂಗಳಲ್ಲಿ ಮನೆ

ಹ್ಯಾಬಿಟ್ಯಾಟ್ ಸೆಂಟರ್ ಮೂಲಕ ನಿರ್ಮಿಸಲಾದ ಸುಸಜ್ಜಿತ ಮನೆಯನ್ನು ಸವಣೂರ ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ವೃದ್ಧೆ ಕಮಲವ್ವನಿಗೆ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ: ಇಲಾಖೆಗಳ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡಲು ಮಾನದಂಡ ನಿಗದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಯಡಿಯೂರಪ್ಪ ಸಿಎಂ ಆಗಿದ್ದಾಗ ಪ್ರವಾಹ ಬಂದಿತ್ತು; ಈವರೆಗೆ ಸಂಪೂರ್ಣ ಪರಿಹಾರ ಕೊಟ್ಟಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

Published On - 6:04 pm, Sun, 16 January 22