ರಂಗನಾಥಸ್ವಾಮಿ ದೇವಾಲಯಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ
ಬಂಡೆಗಳಲ್ಲೇ ನಿರ್ಮಾಣವಾಗಿರುವ ವಿಶೇಷ ದೇವಸ್ಥಾನ ಇದಾಗಿದ್ದು, ದೇವಾಲಯ ನವೀಕರಣದ ಹಿನ್ನೆಲೆ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದಾರೆ.
ಬೆಂಗಳೂರು: ರಂಗನಾಥಸ್ವಾಮಿ ದೇವಾಲಯಕ್ಕೆ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿರುವ ರಂಗನಾಥಸ್ವಾಮಿ ದೇಗುಲ 1,200 ವರ್ಷಗಳ ಇತಿಹಾಸವಿರುವ ಪುರಾತನ ದೇವಾಲಯ. ಬಂಡೆಗಳಲ್ಲೇ ನಿರ್ಮಾಣವಾಗಿರುವ ವಿಶೇಷ ದೇವಸ್ಥಾನ ಇದಾಗಿದ್ದು, ದೇವಾಲಯ ನವೀಕರಣದ ಹಿನ್ನೆಲೆ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದಾರೆ.
ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದ ರಂಗನಾಥಸ್ವಾಮಿ ದೇಗುಲವನ್ನು ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದೆ. ದೇಗುಲದ ಗರ್ಭಗುಡಿಯ ದ್ವಾರ ಬೆಳ್ಳಿ ಬಾಗಿಲಿಗೆ 1.25 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಗರುಡ ಕಂಬಕ್ಕೆ ಸುಮಾರು 45 ಲಕ್ಷ ರೂ. ಖರ್ಚು ಮಾಡಲಾಗಿದೆ. ದಾನಿಗಳ ಸಹಾಯದಿಂದ ದೇಗುಲದ ನವೀಕರಣ ಕಾರ್ಯ ನಡೆದಿದೆ.
ಇದನ್ನೂ ಓದಿ:
ಸೋಮವಾರದಿಂದ 3 ದಿನ ಸಿಎಂ ಪ್ರವಾಸ; ಕುಟುಂಬ ಸಮೇತರಾಗಿ ಕಾಶಿ, ಅಯೋಧ್ಯೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬೊಮ್ಮಾಯಿ
CDS Bipin Rawat death: ಬಿಪಿನ್ ರಾವತ್ ಸಾವನ್ನ ಸಂಭ್ರಮಿ ಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ