ಕರ್ನಾಟಕಕ್ಕೆ ಹೆಚ್ಚು ಕೊವಿಡ್ ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಮನವಿ

ನವದೆಹಲಿಯ ಚಾಣಕ್ಯಪುರಿಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಸಂದರ್ಶಕರ ಪುಸ್ತಕದಲ್ಲಿ ಅಭಿಪ್ರಾಯವನ್ನು ದಾಖಲಿಸಿದ್ದಾರೆ.

ಕರ್ನಾಟಕಕ್ಕೆ ಹೆಚ್ಚು ಕೊವಿಡ್ ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಮನವಿ
ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ
Follow us
| Updated By: sandhya thejappa

Updated on:Aug 26, 2021 | 2:30 PM

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭೇಟಿ ನೀಡಿ ರಾಜ್ಯಕ್ಕೆ ಸಂಬಂಧಿಸಿದ ಕೆಲ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯರನ್ನು ಭೇಟಿಯಾಗಿ, ಕರ್ನಾಟಕಕ್ಕೆ ಹೆಚ್ಚು ಕೊವಿಡ್ ಲಸಿಕೆಯನ್ನು ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು.

ನವದೆಹಲಿಯ ಚಾಣಕ್ಯಪುರಿಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಸಂದರ್ಶಕರ ಪುಸ್ತಕದಲ್ಲಿ ಅಭಿಪ್ರಾಯವನ್ನು ದಾಖಲಿಸಿದ್ದಾರೆ.

ರಾಜ್ಯದ ಯೋಜನೆಗಳ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದೇವೆ. ವಕೀಲರಾದ ಮೋಹನ್ ಕಾತರಕಿ, ಶಾಮ್ ದಿವಾನ್ ಜೊತೆ ಚರ್ಚೆ ನಡೆಸಿದ್ದೇವೆ. ಕೃಷ್ಣಾ ನದಿ ನೀರು ಹಂಚಿಕೆ ಬಗ್ಗೆ ತೆಲಂಗಾಣ ಅರ್ಜಿ ವಿಚಾರಣೆಗೆ ಬರಲಿದೆ. ಈ ವೇಳೆ ಕೃಷ್ಣ ನೀರಿನ ಬಳಕೆಗೆ ಅನುಮತಿಗಾಗಿ ಮನವಿ ಕೋರಲಿದ್ದೇವೆ. ಮೇಕೆದಾಟು ವಿರೋಧಿಸಿ ಮದುರೈ ಕೋರ್ಟ್​ನಲ್ಲಿ ಕೇಸ್ ಇದೆ. ಕೇಸ್​ನಲ್ಲಿ ಭಾಗಿದಾರರನ್ನಾಗಿ ಮಾಡಲು ಮನವಿ ಮಾಡಬೇಕಿದೆ ಎಂದು ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿದರು.

ಮೇಕೆದಾಟು ಯೋಜನೆಗೆ ಅನುಮತಿ ಕೊಡುವಂತೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದ ಬಸವರಾಜ ಬೊಮ್ಮಾಯಿ, ಮಹದಾಯಿ ಸೆಪ್ಟೆಂಬರ್ ಹೊತ್ತಿಗೆ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ. ತಮಿಳುನಾಡಿನ ಅಕ್ರಮ ಯೋಜನೆಗಳ ಬಗ್ಗೆ ಅರ್ಜಿ ಸಲ್ಲಿಸಲು ತಯಾರಿ ನಡೆಸಿದ್ದೇವೆ. ಇನ್ನೊಂದು ವಾರದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ತಮಿಳುನಾಡು: ಸರಕಾರಿ ಶಾಲೆಯ ಮಕ್ಕಳಿಗೆ ವೃತ್ತಿಪರ ಶಿಕ್ಷಣದಲ್ಲಿ 7.5% ಮೀಸಲಾತಿ ನೀಡುವ ಮಸೂದೆ ಮಂಡಿಸಿದ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ರಾಜಮೌಳಿ ತಂದೆ? ವಿಜಯೇಂದ್ರ ಪ್ರಸಾದ್​ಗೆ ಬಂತು ಆಫರ್

(CM Bommai appealed to central government to provide more Covid vaccine to Karnataka)

Published On - 2:28 pm, Thu, 26 August 21

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!