ಸಂಜೆ 4 ಗಂಟೆಗೆ 18 ಜಿಲ್ಲಾಡಳಿತಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಸಭೆ
ಬಿಬಿಎಂಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ತುಮಕೂರು, ಬೀದರ್, ಚಿತ್ರದುರ್ಗ, ಕೋಲಾರ, ವಿಜಯಪುರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ ಸೇರಿ ಒಟ್ಟು 18 ಜಿಲ್ಲಾಡಳಿತಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಬೆಂಗಳೂರು: ಹಲವೆಡೆ ಕೊವಿಡ್ ಲಸಿಕೆ (corona vaccination) ನೀಡಿಕೆ ಕಡಿಮೆಯಾಗಿರುವ ಹಿನ್ನೆಲೆ 18 ಜಿಲ್ಲಾಡಳಿತಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಇಂದು (ಜನವರಿ 18) ಸಂಜೆ 4 ಗಂಟೆಗೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಬಿಬಿಎಂಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂಜಿಲ್ಲಾಡಳಿತತರ,ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ತುಮಕೂರು, ಬೀದರ್, ಚಿತ್ರದುರ್ಗ, ಕೋಲಾರ, ವಿಜಯಪುರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ ಸೇರಿ ಒಟ್ಟು 18 ಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ನಲ್ಲಿ ಡಿಸಿ, ಜಿ.ಪಂ. ಸಿಇಒ, ಡಿಹೆಚ್ಒ (DHO) ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಜರಾಗಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಕೆಲವೇ ಕ್ಷಣಗಳಲ್ಲಿ 18 ಜಿಲ್ಲಾಡಳಿತಗಳ ಜತೆ ಸಿಎಂ ಸಭೆ ನಡೆಯಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿರುವ ಸಿಎಂ, ಲಸಿಕಾಕರಣ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. 2ನೇ ಡೋಸ್ ಪ್ರಗತಿ ಕಡಿಮೆ ಇರುವ ಜಿಲ್ಲಾಡಳಿತಗಳ ಜತೆ ಇಂದು ಸಭೆ ನಡೆಸಲಾಗುತ್ತಿದೆ.
ಧಾರವಾಡ ಜಿಲ್ಲಾಡಳಿತದ ಜತೆ ಕೇಂದ್ರ ಸಚಿವ ಜೋಶಿ ಸಭೆ
ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಧಾರವಾಡ ಜಿಲ್ಲಾಡಳಿತದ ಜತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಭೆ ನಡೆಸಿದ್ದಾರೆ. ಹುಬ್ಬಳ್ಳಿಯ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಮುನೇನಕೊಪ್ಪ, ಧಾರವಾಡ ಜಿಲ್ಲಾಧಿಕಾರಿ, ಡಿಹೆಚ್‌ಒ, ಕಿಮ್ಸ್ ಅಧೀಕ್ಷಕ, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇನ್ನು ಪೊಲೀಸ್ ಆಯುಕ್ತ ಲಾಭೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ, ಹು-ಧಾ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: ಹೆತ್ತಮ್ಮ ಕೊರೊನಾದಿಂದ ಮೃತಪಟ್ಟ ಸುದ್ದಿ ತಿಳಿಸಿದರೂ ಬಾರದ ಮಗಳು, ವಿಶ್ವ ಹಿಂದುಪರಿಷತ್ ಕಾರ್ಯಕರ್ತರಿಂದಲೇ ಶವ ಸಂಸ್ಕಾರ
Published On - 3:51 pm, Tue, 18 January 22