ತಮಗೆ ಖಾದಿ ಬಟ್ಟೆ, ಪತ್ನಿಗೆ ಸೀರೆ ಖರೀದಿಸಿದ ಸಿಎಂ; ಈ ವೇಳೆ ಜೊತೆಯಲ್ಲಿದ್ದ ನಾಯಕರಿಗೆ ಬೊಮ್ಮಾಯಿ ಹೇಳಿದ್ದೇನು?

CM Basavaraj Bommai: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆಯ ಅಂಗವಾಗಿ ಖಾದಿ ಬಟ್ಟೆ ಖರೀದಿಸಿದ್ದಾರೆ. ಇದೇ ವೇಳೆ, ಸಚಿವ ಗೋವಿಂದ ಕಾರಜೋಳ ಹಾಗೂ ಬಿ.ವೈ.ವಿಜಯೇಂದ್ರ ಅವರಿಗೂ ಬಟ್ಟೆ ಖರೀದಿಸುವಂತೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

ತಮಗೆ ಖಾದಿ ಬಟ್ಟೆ, ಪತ್ನಿಗೆ ಸೀರೆ ಖರೀದಿಸಿದ ಸಿಎಂ; ಈ ವೇಳೆ ಜೊತೆಯಲ್ಲಿದ್ದ ನಾಯಕರಿಗೆ ಬೊಮ್ಮಾಯಿ ಹೇಳಿದ್ದೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Oct 02, 2021 | 12:08 PM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆಯ ಪ್ರಯುಕ್ತ ಖಾದಿ ಬಟ್ಟೆ ಖರೀದಿಸಿದ್ದಾರೆ. ನಗರದ ಗಾಂಧಿ ಭವನದ ಪಕ್ಕದಲ್ಲಿರುವ ಖಾದಿ ಎಂಪೋರಿಯಂನಲ್ಲಿ ತಲಾ ಮೂರು ಮೀಟರ್ ಅಳತೆಯ 10 ಜುಬ್ಬಾ ಪೀಸ್​ಗಳನ್ನು ಸಿಎಂ ಬೊಮ್ಮಾಯಿ ಖರೀದಿಸಿದ್ದಾರೆ. ಇದೇ ವೇಳೆ ಪತ್ನಿಯವರಿಗೆ ಸೀರೆಯನ್ನೂ ಬೊಮ್ಮಾಯಿ ಖರೀದಿಸಿದ್ದಾರೆ. 

ಸೀರೆ ಖರೀದಿ ವೇಳೆ ಆಗಮಿಸಿದ ಬಿ.ವೈ.ವಿಜಯೇಂದ್ರ ಹಾಗೂ ಗೋವಿಂದ ಕಾರಜೋಳರಿಗೂ ಸೀರೆ ಕೊಳ್ಳಲು ಹೇಳಿದ ಸಿಎಂ: ಸಿಎಂ ಸೀರೆ ಖರೀದಿ ವೇಳೆ ಆಗಮಿಸಿದ ಬಿ.ವೈ. ವಿಜಯೇಂದ್ರ ಅವರಿಗೆ ಸಿಎಂ ‘‘ಬಾರಪ್ಪಾ, ಮನೆಯವರಿಗೆ ಸೀರೆ ಖರೀದಿ ಮಾಡು’’ ಎಂದಿದ್ದಾರೆ. ಬೊಮ್ಮಾಯಿಯವರ ಮಾತನ್ನು ಕೇಳಿದ ವಿಜಯೇಂದ್ರ, ‘‘ನಮಗೊಂದು‌ ಸೀರೆ ಕೊಡಿ’’ ಎಂದು ಹೇಳಿ ಸುಮಾರು ₹ 4,300 ಮೊತ್ತದ ಸೀರೆ ಕೊಂಡಿದ್ದಾರೆ.

ಸಚಿವರಾದ ಗೋವಿಂದ ಕಾರಜೋಳರಿಗೂ ಸೀರೆ ತೆಗೆದುಕೊಳ್ಳಿ ಎಂದು ಸಿಎಂ ನುಡಿದಿದ್ದಾರೆ. ‘‘ಸಾರ್, ನನಗೆ ಅದೆಲ್ಲಾ ಗೊತ್ತಾಗಲ್ಲ’’ ಎಂದು ಕಾರಜೋಳರು ಹೇಳಿದಾಗ, ‘‘ಈಗಲಾದ್ರೂ ಕಲಿತುಕೊಳ್ಳಿ’’ ಎಂದು ಬೊಮ್ಮಾಯಿ ತಮಾಷೆ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮಾತಿಗೆ ಕಟ್ಟು ಬಿದ್ದ ಸಚಿವರು, ‘‘ಇರಲಿ, ನನಗೊಂದು ಸೀರೆ ಕೊಡಿ’’ ಎಂದು ಹೇಳಿ, ಸೀರೆ ಖರೀದಿಸಿದ್ದಾರೆ. ಇದೇ ವೇಳೆ ಎಂಟಿಬಿ ನಾಗರಾಜ್ ಕೂಡ ಬಟ್ಟೆ ಖರೀದಿಸಿದ್ದಾರೆ. ಸಿಎಂ ಬೊಮ್ಮಾಯಿಯವರು ಒಟ್ಟು ₹ 16,000 ಮೊತ್ತದಷ್ಟು ಬಟ್ಟೆ ಖರೀದಿಸಿದ್ದಾರೆ.

CM Bommai Purchasing cloths

ಬಟ್ಟೆ ಖರೀದಿಸುತ್ತಿರುವ ಸಿಎಂ ಬೊಮ್ಮಾಯಿ

ದಸರಾ ಉದ್ಘಾಟಕರಿಗೆ ಇಂದು ಸಿಎಂ ಬೊಮ್ಮಾಯಿ ಸೇರಿದಂತೆ ನಿಯೋಗದಿಂದ ಅಧಿಕೃತ ಆಹ್ವಾನ: ಮೈಸೂರು:ವಿಶ್ವ ವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟಕರಾಗಿರುವ ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ ಅವರನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಆಹ್ವಾನಿಸಲಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಸ್‌.ಎಂ.ಕೃಷ್ಣಾ ನಿವಾಸಕ್ಕೆ ತೆರಳಿ, ಸಿಎಂ ನೇತೃತ್ವದ ನಿಯೋಗವು ಅವರನ್ನು ಆಹ್ವಾನಿಸಲಿದೆ. ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಮೈಸೂರು ಮೇಯರ್ ಹಾಗೂ ಜನಪ್ರತಿನಿಧಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:

Video: 1000 ಕೆಜಿ ತೂಕದ ಖಾದಿ ತ್ರಿವರ್ಣಧ್ವಜ ಲೇಹ್​​ನಲ್ಲಿ ಅನಾವರಣ; ವಿಶ್ವದಲ್ಲೇ ಅತ್ಯಂತ ದೊಡ್ಡ ರಾಷ್ಟ್ರಧ್ವಜವಿದು

ಅನಧಿಕೃತ ರೆಸಾರ್ಟ್ ತೆರವು ಮಾಡದಿದ್ದರೆ ನೀವೇ ಹೊಣೆ; 4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್

ಕರ್ನಾಟಕದ 31ನೇ ಜಿಲ್ಲೆಯಾಗಿ ಉದಯಿಸಲಿದೆ ವಿಜಯನಗರ; ಹಂಪಿ ಪರಿಕಲ್ಪನೆಯಲ್ಲಿ ವೇದಿಕೆ ಸಿದ್ಧ

Published On - 11:35 am, Sat, 2 October 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ