AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿ ವಿಚಾರ ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಈಗಾಗಲೇ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು.

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿ ವಿಚಾರ ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿImage Credit source: bengaluru.citizenmatters.in
ಗಂಗಾಧರ​ ಬ. ಸಾಬೋಜಿ
|

Updated on:Feb 23, 2023 | 7:31 PM

Share

ಬೆಂಗಳೂರು: ಈಗಾಗಲೇ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ (7th Pay Commission) ಜಾರಿ ವಿಚಾರವಾಗಿ ಮಾತನಾಡಿ, ವೇತನ ಆಯೋಗದ ವರದಿ ಬಂದ ಬಳಿಕ ಕ್ರಮ ಕೈಗೊಳ್ತೇವೆ. ಮಾರ್ಚ್ ಒಳಗೆ ಮಧ್ಯಂತರ ವರದಿ ಕೊಡಲು ಸೂಚಿಸುತ್ತೇನೆ. ವರದಿ ಬಂದ ಬಳಿಕ ಮಾರ್ಚ್ ಒಳಗೆ ಸೂಕ್ತ ಕ್ರಮಗೊಳ್ಳಲಾಗುತ್ತದೆ. ಮಧ್ಯಂತರ ವರದಿಯ ಶಿಫಾರಸು ಜಾರಿಗೆ ಸರ್ಕಾರ ಬದ್ಧವಾಗಿದೆ. ಈ ಕುರಿತು ನೌಕರರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಎಂದರು.

ರಾಜ್ಯ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ ನೌಕರರ ಸಂಘ

ಇನ್ನು ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆ ನಡೆದಿದ್ದು, 7ನೇ ವೇತನ ಆಯೋಗದಲ್ಲಿ ಹಳೇ ಪಿಂಚಣಿ ನೀತಿ​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಫೆಬ್ರವರಿ 22ರಿಂದ 7 ದಿನಗಳ ಗಡುವು ನೀಡಲಾಗಿದೆ. ಒಂದು ವೇಳೆ ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1ರಿಂದಲೇ ಕರ್ತವ್ಯಕ್ಕೆ ಗೈರಾಗಲು ನೌಕರರು ಸಭೆಯಲ್ಲಿ ನಿರ್ಧಾರಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರು ಸರ್ಕಾರದ ಭಾಗ, 7ನೇ ವೇತನಾ ಆಯೋಗದ ಶಿಫಾರಸ್ಸುಗಳನ್ನು ಅವರೊಂದಿಗೆ ಚರ್ಚಿಸುತ್ತೇವೆ: ಬಸವರಾಜ ಬೊಮ್ಮಾಯಿ

ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ​ ವಂದಿತಾ ಶರ್ಮಾ ಅವರಿಗೆ ತಿಳಿವಳಿಕೆ ಮತ್ತು ಮನವಿ ಪತ್ರ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಇದೇ ವೇಳೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಮಾತನಾಡಿ, ಮಾರ್ಚ್​​ 1ರಿಂದ ಬೆಂಗಳೂರಿನಲ್ಲಿ ಕಸ ಎತ್ತದಿರಲು ತೀರ್ಮಾನಿಸಲಾಗಿದೆ. ಅಲ್ಲದೆ, ಹಳೇ ಪಿಂಚಣಿ ನೀತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಎಂದರು.

ಬಜೆಟ್​ನಲ್ಲಿ ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ 

ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್​ನಲ್ಲಿ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದ ರಾಜ್ಯ ಸರ್ಕಾರಿ ನೌಕರರಿಗೆ ತೀವ್ರ ನಿರಾಸೆಯಾಗಿದೆ. ಬಜೆಟ್ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಬಜೆಟ್‌ ಮಂಡನೆಯ ವೇಳೆ ಎಲ್ಲವನ್ನೂ ಹೇಳಲು ಆಗುವುದಿಲ್ಲ.

ಹೀಗಾಗಿ, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಬಜೆಟ್‌ನಲ್ಲಿ ಹೇಳಿಲ್ಲ. ಆದರೆ, ಈಗಾಗಲೇ 7ನೇ ವೇತನ ಆಯೋಗ ರಚನೆ ಮಾಡಲಾಗಿದ್ದು, ಇದೇ ವರ್ಷದಿಂದ ಅನುಷ್ಠಾನಕ್ಕೆ ಬರುತ್ತದೆ ಎಂದಿದ್ದರು. 7ನೇ ವೇತನ ಆಯೋಗದ ವರದಿ ಶೀಘ್ರವೇ ಬರಲಿದೆ. ವರದಿ ಜಾರಿಗಾಗಿ ಬಜೆಟ್​ನಲ್ಲಿ 6 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:31 pm, Thu, 23 February 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು