ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ; ಟ್ವಿಟರ್​ ಮೂಲಕ ಸಂತಾಪ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 27, 2022 | 11:22 AM

ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಮೃತದೇಹವನ್ನು ಇಂದು ಬೆಳಿಗ್ಗೆ 9 ಗಂಟೆಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ; ಟ್ವಿಟರ್​ ಮೂಲಕ ಸಂತಾಪ
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು
Follow us on

ಬೆಂಗಳೂರು: ದಕ್ಷಿಣ ಕನ್ನಡ ಬಿಜೆಪಿ (BJP) ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ನನ್ನು ನಿನ್ನೆ (ಜುಲೈ 26) ಆತನ ಕೋಳಿ ಅಂಗಡಿಗೆ ನುಗ್ಗಿ ಹಂತಕರು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಹೇಯಕೃತ್ಯ ಎಸಗಿದವರನ್ನ ಬಂಧಿಸಿ ಕಾನೂನಿನಡಿ ಹಂತಕರಿಗೆ ಶಿಕ್ಷೆ ಕೊಡಿಸುವುದಾಗಿ ಟ್ವಿಟರ್ ಮೂಲಕ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುವೆ. ಪ್ರವೀಣ್ ನೆಟ್ಟಾರು ಆತ್ಮಕ್ಕೆ ಶಾಂತಿ ಸಿಗಲೆಂದು ಟ್ವೀಟ್ ಮೂಲಕ ತಿಳಿಸಿದರು.

ಇದನ್ನೂ ಓದಿ: ದಕ್ಷಿಣ ಕನ್ನಡ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಬರ್ಬರ ಕೊಲೆ

ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ

ಇನ್ನೂ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಮೃತದೇಹವನ್ನು ಇಂದು ಬೆಳಿಗ್ಗೆ 9 ಗಂಟೆಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಪುತ್ತೂರಿನಿಂದ ಬೆಳ್ಳಾರೆಗೆ ಪ್ರವೀಣ್ ಮೃತದೇಹವನ್ನು ಮೆರವಣಿಗೆ ಮೂಲಕ ತೆರಳಲು ನಿರ್ಧಾರ ಮಾಡಲಾಗಿದ್ದು, ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಚರ್ಚ್​ನಲ್ಲಿ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ; ಆರೋಪಿಗಾಗಿ ಶೋಧ

ಘಟನೆ ಹಿನ್ನೆಲೆ:

ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದು, ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು  ಹತ್ಯೆಗೈದು ಪರಾರಿಯಾಗಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದಾರೆ. ನಾಕಾಬಂದಿ ಹಾಕಿ ಕೊಲೆ ಆರೋಪಿಗಳಿಗಾಗಿ ತಲಾಶ್‌ ನಡೆಸುತ್ತಿದ್ದಾರೆ.

Published On - 7:12 am, Wed, 27 July 22