ಬೀದರ್ ಅಪಘಾತ: ಮೃತ ಮಹಿಳೆಯರಿಗೆ ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ, ಹೆಚ್​ ಡಿ ಕುಮಾರಸ್ವಾಮಿ

ಬೀದರ್‌ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ಅಪಘಾತದಲ್ಲಿ 7 ಮಹಿಳೆಯರ ಸಾವು ಹಿನ್ನೆಲೆ ಮೃತ ಮಹಿಳೆಯರಿಗೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಬೀದರ್ ಅಪಘಾತ: ಮೃತ ಮಹಿಳೆಯರಿಗೆ ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ, ಹೆಚ್​ ಡಿ ಕುಮಾರಸ್ವಾಮಿ
ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 05, 2022 | 4:48 PM

ಬೆಂಗಳೂರು: ಬೀದರ್‌ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ಅಪಘಾತದಲ್ಲಿ 7 ಮಹಿಳೆಯರ ಸಾವು ಹಿನ್ನೆಲೆ ಮೃತ ಮಹಿಳೆಯರಿಗೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಬೀದರ್‌ ಜಿಲ್ಲೆ ಚಿಟಗುಪ್ಪಾ ತಾಲ್ಲೂಕಿನ ಬೆಮ್ಮಳಖೇಡ ಬಳಿ ನಡೆದ ಅಪಘಾತದಲ್ಲಿ 7 ಜನ ಮೃತರಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಈ ಕುರಿತು ಬೀದರ ಜಿಲ್ಲಾಡಳಿತದೊಂದಿಗೆ ಮಾತನಾಡಿ ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ‌. ಓಂ ಶಾಂತಿಃ ಎಂದು ಟ್ವಿಟರ್​ನಲ್ಲಿ ಸಂತಾಪ ಸೂಚಿಸಿದ್ದಾರೆ. ನಿನ್ನೆ ಬೆಮ್ಮಳಖೇಡ ಬಳಿ ಆಟೋಗೆ ಡಿಕ್ಕಿ ಹೊಡೆದಿದ್ದ ಟ್ರಕ್​​​ ಅಪಘಾತದಲ್ಲಿ ಒಟ್ಟು 7 ಮಹಿಳೆಯರು ಮೃತಪಟ್ಟಿದ್ದರು. ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಉಳಿದ 6 ಮಹಿಳೆಯರು ಬೀದರ್​ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಉಳಿದ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿಯಾಗಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಬೀದರ್ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಸೂಚನೆ ನೀಡಿದ್ದೇನೆ ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ರಾಜ್ಯ ಸರ್ಕಾರ ಮೃತರ ಕುಟುಂಬಗಳ ನೆರವಿಗೆ ಧಾವಿಸಬೇಕು: ಹೆಚ್​.ಡಿ ಕುಮಾರಸ್ವಾಮಿ

ಅದೇ ರೀತಿಯಾಗಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್​ ಮೂಲಕ ಮೃತರಿಗೆ ಸಂತಾಪ ಸೂಚಿಸಿದ್ದಾರೆ. 7 ಮಹಿಳೆಯರು ಮೃತಪಟ್ಟ ಸುದ್ದಿ ಕೇಳಿ ತೀವ್ರ ಆಘಾತವಾಯ್ತು. ಮೃತ 7 ಮಹಿಳೆಯರು ಉಡಬನಳ್ಳಿ ಗ್ರಾಮದ ಕೃಷಿ ಕಾರ್ಮಿಕರು. ರಾಜ್ಯ ಸರ್ಕಾರ ಮೃತರ ಕುಟುಂಬಗಳ ನೆರವಿಗೆ ಧಾವಿಸಬೇಕು. ಅಗತ್ಯ ಪರಿಹಾರ, ನೆರವು ನೀಡುವಂತೆ ಸರ್ಕಾರಕ್ಕೆ ಒತ್ತಾಯ. ಎಲ್ಲಾ ಗಾಯಾಳುಗಳಿಗೆ ಉಚಿತವಾಗಿ ಉತ್ತಮ ಚಿಕಿತ್ಸೆ ಒದಗಿಸಬೇಕು. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿ ದೇವರು ಆ ಕುಟುಂಬಗಳಿಗೆ ದಯಪಾಲಿಸಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

ಘಟನೆ ಹಿನ್ನೆಲೆ:

ಟ್ರಕ್ ಮತ್ತು ಆಟೋ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಮಹಿಳೆ ಸಾವನ್ನಪ್ಪುವ ಮೂಲಕ ಮೃತರ ಸಂಖ್ಯೆ 7 ಏರಿಕೆಯಾಗಿದೆ. ಶುಕ್ರವಾರ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಡೆದ ಈ ದುರ್ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಐವರು ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಇದೀಗ ಮತ್ತೋರ್ವ ಮಹಿಳೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ. ಮೃತಪಟ್ಟ 7 ಮಹಿಳೆಯರು 10 ಜನ‌ ಗಾಯಾಳುಗಳು ಉಡಮನಳ್ಳಿ ಗ್ರಾಮದವರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:44 pm, Sat, 5 November 22