Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ ಯಾತ್ರೆ ತೆರಳುವ ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ; ರಾಜ್ಯ ಸರ್ಕಾರದಿಂದ ಸಿಗುವ ಸವಲತ್ತುಗಳ ವಿವರ ಇಲ್ಲಿದೆ

ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಅನುಕೂಲವಾಗುವಂತೆ ಪ್ಯಾಕೇಜುಗಳನ್ನು ರೂಪಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಭಾರತ್‌ ಗೌರವ್‌ ರೈಲು ಯೋಜನೆಯ ಅಡಿಯಲ್ಲಿ ರಾಜ್ಯ ಮುಜರಾಯಿ ಇಲಾಖೆಯ ವತಿಯಿಂದ ರೈಲನ್ನು ಬಾಡಿಗೆಗೆ ಪಡೆದು ಕಾಶಿಗೆ ಓಡಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ಕಾಶಿ ಯಾತ್ರೆ ತೆರಳುವ ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ; ರಾಜ್ಯ ಸರ್ಕಾರದಿಂದ ಸಿಗುವ ಸವಲತ್ತುಗಳ ವಿವರ ಇಲ್ಲಿದೆ
ಕಾಶಿ ಯಾತ್ರೆ ರೈಲು
Follow us
TV9 Web
| Updated By: ಆಯೇಷಾ ಬಾನು

Updated on: Jul 14, 2022 | 3:17 PM

ಬೆಂಗಳೂರು: ಶ್ರಾವಣ ಮಾಸದ(Shravana Masa) ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ ಭಾರತ್‌ ಗೌರವ್‌(Bharat Gaurav Train) ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ(Shashikala Jolle) ಈ ಹಿಂದೆ ತಿಳಿಸಿದ್ದರು. ಸದ್ಯ ಈಗ ಕಾಶಿ ಯಾತ್ರೆ(Kashi Yatra) ತೆರಳುವ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ ನೀಡಲು ಸರ್ಕಾರ ಮುಂದಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವವರಿಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುವುದು. 5 ಸಾವಿರ ರೂ. ನೇರ ನಗದು ವರ್ಗಾವಣೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಜರಾಯಿ ಇಲಾಖೆ ಸಚಿವ ಶಶಿಕಲಾ ಜೊಲ್ಲೆ, ಆಯುಕ್ತೆ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಇತ್ತೀಚೆಗೆ ಕಾಶಿಯನ್ನು ಮೋದಿಯವರು ನವೀಕರಣ ಮಾಡಿದ್ದಾರೆ. ಹಿಂದೆ ಕಾಶಿಗೆ ಹೋದರೆ ಯಾಕಾದ್ರೂ ಇಲ್ಲಿಗೆ ಬಂದ್ವಿ ಅನಿಸುತ್ತಿತ್ತು. ಆದರೆ ಈಗ ನೂರಕ್ಕೆ ನೂರು ಬದಲಾವಣೆ ಆಗಿದೆ. 23 ಘಾಟ್ ಗಳನ್ನು ಸ್ವಚ್ಚಗೊಳಿಸಿ ಬದಲಾವಣೆ ಮಾಡಲಾಗಿದೆ. ದೇವಸ್ಥಾನದ ಆವರಣ ಸ್ವಚ್ಚ ಗೊಳಿಸಿ ಭಕ್ತಿ ಮೂಡುವಂತೆ ಮಾಡಿದ್ದಾರೆ. ಕಾಲಕಾಲದಿಂದ ಕಾಶಿಗೆ ಹೋಗುವವರ ಸಂಖ್ಯೆ ಜಾಸ್ತಿಯಾಗಿದೆ. ಕಾಶಿಯಾತ್ರಿಕರಿಗೆ ಸಹಾಯ ಮಾಡಬೇಕು ಅಂತ ಜೊಲ್ಲೆಯವರು ಕಾರ್ಯಕ್ರಮ ರೂಪಿಸಲು ಮುಂದಾದರು. ನೇರ ಹಣ ವರ್ಗಾವಣೆ ಮಾಡುವ ಡಿಬಿಟಿ ಸಿಸ್ಟಮ್ ಜಾರಿಯಾಗಿದೆ. ಒಳ್ಳೆ ಕೆಲಸ ಮಾಡಿದ್ದಾರೆ, ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತದೆ ಅನುಕೂಲ ಆಗುತ್ತದೆ. ಎಂಡ್ ಟು ಎಂಡ್ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಇದೊಂದು ಮಹತ್ವದ ಯೋಜನೆ, ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆ ಮಾಡುತ್ತಿದ್ದೇವೆ. ಆಧ್ಯಾತ್ಮಿಕ ಸಂಸ್ಕೃತಿಗೆ ತನ್ನದೇ ಒಂದು ಛಾಪು ಮೂಡಿಸಿರುವ ದೇಶ ಭಾರತ. ಪ್ರಧಾನಿಗಳ ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಸಿಎಂ ನವಕರ್ನಾಟಕ ನಿರ್ಮಾಣ ಮಾಡ್ತಿದ್ದಾರೆ. ರಾಜ್ಯದ ಜನರ ಭಾವನಾತ್ಮಕ ಸಂಬಂಧ ಉಳಿಸಿ ಬೆಳೆಸುವ ಕೆಲಸ ಸಿಎಂ ಮಾಡ್ತಿದ್ದಾರೆ. ಕಾಶಿಗೆ ಹೋದರೆ ಮುಕ್ತಿ ಸಿಗತ್ತೆ ಗಂಗಾ ಸ್ನಾನದಿಂದ ಪಾಪ ಪರಿಹಾರ ಆಗುತ್ತದೆ ಎಂಬ ನಂಬಿಕೆ ಜನ ಇಟ್ಟುಕೊಂಡಿದ್ದಾರೆ. ಕಾಶಿಗೆ ಪ್ರತಿವರ್ಷ 30 ಸಾವಿರ ಭಕ್ತಾಧಿಗಳಿಗೆ ವಿಶ್ವನಾಥನ ದರ್ಶನ ಮಾಡಿಸಬೇಕು ಅಂತ ನಿರ್ಧಾರ ಮಾಡಿದ್ದೇವೆ. ಬಜೆಟ್ ನಲ್ಲಿ 15 ಕೋಟಿ ಹಣ ಇದಕ್ಕಾಗಿ ಮೀಸಲಿಟ್ಟಿದ್ದೇವೆ. ಜನರಿಗೆ ತೊಂದರೆ ಆಗದಂತೆ ಕಾಶಿ ಯಾತ್ರಿಕರಿಗೆ ರೈಲಿನ ವ್ಯವಸ್ಥೆ ಕೂಡ ಮಾಡುತ್ತಿದ್ದೇವೆ. ಭಾರತ್ ಗೌರವ್ ಯೋಜನೆ ಅಡಿಯಲ್ಲಿ ದೇಶದಲ್ಲಿ ಮೊದಲ ಬಾರಿಗೆ ರೈಲು ಓಡಿಸುತ್ತಿದ್ದೇವೆ. ಶ್ರಾವಣ ಮಾಸದಲ್ಲಿ 14 ಬೋಗಿಗಳ ರೈಲು ಕಾಶಿಗೆ ಹೊರಡಲಿದೆ ಎಂದರು.

ಕಾಶಿಗೆ ಹೋಗುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ಭಾರೀ ಸವಲತ್ತು ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಅನುಕೂಲವಾಗುವಂತೆ ಪ್ಯಾಕೇಜುಗಳನ್ನು ರೂಪಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಭಾರತ್‌ ಗೌರವ್‌ ರೈಲು ಯೋಜನೆಯ ಅಡಿಯಲ್ಲಿ ರಾಜ್ಯ ಮುಜರಾಯಿ ಇಲಾಖೆಯ ವತಿಯಿಂದ ರೈಲನ್ನು ಬಾಡಿಗೆಗೆ ಪಡೆದು ಕಾಶಿಗೆ ಓಡಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ರೈಲನ್ನು ಮಾರ್ಪಾಡಿಸುವ ಹಾಗೂ ಇನ್ನಿತರೆ ಅಗ್ಯ ಕ್ರಮಗಳ ಬಗ್ಗೆ ವಿಸ್ತ್ರುತವಾಗಿ ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ರಿಯಾಯಿತಿ ದರದಲ್ಲಿ 7 ದಿನಗಳ ಪ್ರವಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದಕ್ಕಾಗಿ ಈಗಾಗಲೇ 1 ಕೋಟಿ ರೂಪಾಯಿಗಳ ಭೌತಿಕ ಬ್ಯಾಂಕ್‌ ಗ್ಯಾರಂಟಿಯನ್ನು ನೀಡಿ ರೈಲನ್ನು ಬಾಡಿಗೆಗೆ ತಗೆದುಕೊಳ್ಳಲಾಗಿದೆ.

ರೈಲಿನ ವಿನ್ಯಾಸದ ಬಗ್ಗೆ: ಬೆಂಗಳೂರು-ವಾರಾಣಸಿ-ಅಯೋಧ್ಯೆ-ಪ್ರಯಾಗರಾಜ್‌-ಬೆಂಗಳೂರು ಮಾರ್ಗದಲ್ಲಿ ರೈಲು 7 ದಿನಗಳಲಿ 4161 ಕಿಲೋಮೀಟರ್‌ಗಳಷ್ಟು ದಾರಿ ಕ್ರಮಿಸಲಿದೆ.

14 ಬೋಗಿಗಳನ್ನು ಈ ರೈಲು ಒಳಗೊಂಡಿರಲಿದ್ದು, 11 ಬೋಗಿಗಳನ್ನು ಪ್ರಯಾಣಿಕರ ಪ್ರವಾಸಕ್ಕೆ ಅಣಿ ಮಾಡಲಾಗುತ್ತಿದೆ. 3 ಟಯರ್‌ ಎಸಿಯ ವ್ಯವಸ್ಥೆ ಇರಲಿದೆ. ಒಂದು ಬೋಗಿಯನ್ನು ದೇವಸ್ಥಾನವಾಗಿ ಪರಿವರ್ತಿಸಿ ಯಾತ್ರಾರ್ಥಿಗಳ ಭಜನೆಗೆ ಅವಕಾಶ ನೀಡಲಾಗುವುದು. ಅಲ್ಲದೇ, ನಮ್ಮ ರಾಜ್ಯದ ಪ್ರಮುಖ ದೇವಸ್ಥಾನಗಳ ಬ್ರಾಂಡಿಂಗ್‌ ಮಾಡುವ ಉದ್ದೇಶದಿಂದ 11 ಬೋಗಿಗಳ ಮೇಲೆ ರಾಜ್ಯದ ಪ್ರಮುಖ 11 ದೇವಸ್ಥಾನಗಳ ಮಾಹಿತಿಯನ್ನು ಅಳವಡಿಸಲಾಗುವುದು.

ಆಹಾರ, ನೀರು, ವಸತಿ, ಸ್ಥಳೀಯ ಸಾರಿಗೆ ಮತ್ತು ಇತರೆ ಮೂಲಭೂತ ಸೌಕರ್ಯಗಳಿಗೆ ರೈಲ್ವೇಯ ಅಧೀನ ಸಂಸ್ಥೆಯ ಜೊತೆ ಐಆರ್‌ಸಿಟಿಸಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು. 7 ದಿನಗಳ ಪ್ರವಾಸಕ್ಕೆ ಅಂದಾಜು 15 ಸಾವಿರ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ 5 ಸಾವಿರ ರೂಗಳನ್ನು ಸಹಾಯಧನವನ್ನಾಗಿ ನೀಡಲಾಗುವುದು.