ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿಗಳ ಮೇಲೆ ಎಸಿಬಿ ದಾಳಿ; ಸಿಎಂ ಬೊಮಾಯಿ ಹೇಳಿದ್ದೇನು?

ದಾಳಿ ಹಿಂದೆ ಬಿಜೆಪಿ ಕೈವಾಡ ಇದೆ ಅನ್ನೋದು ಹೊಸ ಡೈಲಾಗ್ ಅಲ್ಲ. ಕರ್ತವ್ಯ ಮಾಡೋಕೆ ಹೋದಾಗ ಅಡಚಣೆ ಮಾಡೋದು ರಾಜಕೀಯ ಬಣ್ಣ ಕೊಡುವುದು ಸರ್ವೆ ಸಾಮಾನ್ಯ.

ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿಗಳ ಮೇಲೆ ಎಸಿಬಿ ದಾಳಿ; ಸಿಎಂ ಬೊಮಾಯಿ ಹೇಳಿದ್ದೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9kannada Web Team

| Edited By: sandhya thejappa

Jul 05, 2022 | 11:28 AM


ಬೆಂಗಳೂರು: ಇಂದು (ಜುಲೈ 5) ಎಸಿಬಿ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ಎಲ್ಲಾ ಪೆಂಡಿಂಗ್ ಕೇಸ್ ಇತ್ತು. ಆಧಾರ ಸಮೇತ ಕೆಲಸ ಮಾಡುತ್ತಿದ್ದಾರೆ. ವರದಿ ಆಧಾರದ ಮೇಲೆ ಕೇಸ್ ದಾಖಲಾಗುತ್ತಿದೆ. ಇದು ನಿರಂತರವಾದ ಪ್ರಕ್ರಿಯೆ. ದಾಳಿ ಹಿಂದೆ ಬಿಜೆಪಿ ಕೈವಾಡ ಇದೆ ಅನ್ನೋದು ಹೊಸ ಡೈಲಾಗ್ ಅಲ್ಲ. ಕರ್ತವ್ಯ ಮಾಡೋಕೆ ಹೋದಾಗ ಅಡಚಣೆ ಮಾಡೋದು ರಾಜಕೀಯ ಬಣ್ಣ ಕೊಡುವುದು ಸರ್ವೆ ಸಾಮಾನ್ಯ. ಇದು ಕಾಂಗ್ರೆಸ್ ಸ್ಲೋಗನ್. ಅವರು ಕೇಸ್ ಬಗ್ಗೆ ಮಾತನಾಡಲ್ಲ ಎಂದರು.

ಕರ್ತವ್ಯ ಮಾಡು ಪೊಲೀಸರಿಗೆ ಯಾವುದೇ ಅಡಚಣೆ ಮಾಡುವುದಿಲ್ಲ. ಎಲ್ಲೆಲ್ಲಿ ಅಕ್ರಮಗಳು ಕಂಡು ಬರುತ್ತೆದೆಯೋ ಅಲ್ಲಿ ದಾಳಿ ಮಾಡುತ್ತಿದ್ದಾರೆ. ಸಿಐಡಿ, ಎಸಿಬಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮಾತನಾಡಿದ ಸಿಎಂ, ಪೌರ ಕಾರ್ಮಿಕರನ್ನ ಖಾಯಂ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದೇವೆ. ಅವರ ವೇತನ ತಾರತಮ್ಯ ಕುರಿತೂ ಕ್ರಮ ಕೈಗೊಳ್ಳುತ್ತೇವೆ. ಇದು ಬೇರೆ ರಾಜ್ಯಗಳಲ್ಲಿ ಮಾಡಿಲ್ಲ. ಕರ್ನಾಟಕದಲ್ಲಿ ಖಾಯಮಾತಿ ಮಾಡುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.


ಇದನ್ನೂ ಓದಿ: Police Recruitment Scam: ಸಿಎಂ ಬೊಮ್ಮಾಯಿ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ಇಂದೇ ಕ್ರಮಕೈಗೊಳ್ತೇವೆ- ಬೊಮ್ಮಾಯಿ:
ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ನಿನ್ನೆ ರಾತ್ರಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತಾಡಿದ್ದೇನೆ. ಮಳೆಯಿಂದ ಹಾನಿಯಾದವರಿಗೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ. ಕೊಡಗು ಜಿಲ್ಲಾಧಿಕಾರಿ ಜೊತೆ ಮಾತಾಡಿ ಪರಿಹಾರಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಸಿಎಂ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಂದ ವಿಡಿಯೋ ಕಾಲ್ ಮಾಡುತ್ತಿರುವ ಬಗ್ಗೆ ಮಾತನಾಡಿದರು. ಪ್ರಕರಣವನ್ನು ನಾವು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಒಂದು ಟೀಂ ಅಪರಾಧಿಗಳ ಜತೆ ಶಾಮೀಲಾಗಿದೆ ಅನಿಸುತ್ತದೆ. ಇವತ್ತೇ ವಿಡಿಯೋ ಕಾಲ್ ಪ್ರಕರಣ ಸಂಬಂಧ ಕ್ರಮಕೈಗೊಳ್ತೇವೆ ಎಂದು ಹೇಳಿದರು.

ಇದನ್ನೂ ಓದಿ

ಇದನ್ನೂ ಓದಿ: Virat Kohli: ವಿಕೆಟ್ ಬಿದ್ದಾಗ ಯಾರ ಜೊತೆಗೂ ಸೇರದೆ ಒಬ್ಬರೇ ಸೆಲೆಬ್ರೇಷನ್ ಮಾಡಿದ ವಿರಾಟ್ ಕೊಹ್ಲಿ: ವಿಡಿಯೋ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada