ಮತದಾರರ ಮಾಹಿತಿ ಕಳ್ಳತನ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಲಿ: ಸಿದ್ದರಾಮಯ್ಯ

Siddaramaiah PressMeet: ಬಸವರಾಜ ಬೊಮ್ಮಾಯಿ ಈ ಅಕ್ರಮದ ಹಿಂದಿದ್ದಾರೆ. ನೇರವಾಗಿ ಬೊಮ್ಮಾಯಿಯವರೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ತಕ್ಷಣ ಅವರು ರಾಜೀನಾಮೆ ನೀಡಬೇಕು. ಬೊಮ್ಮಾಯಿಯನ್ನು ಅರೆಸ್ಟ್ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮತದಾರರ ಮಾಹಿತಿ ಕಳ್ಳತನ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಲಿ: ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ಆಯೇಷಾ ಬಾನು

Updated on:Nov 17, 2022 | 10:39 AM

ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ(Randeep Surjewala) ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakmar) ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.

20-08-2022ರಲ್ಲಿ ಚಿಲುಮೆ ಸಂಸ್ಥೆ ಗೆ BBMP ಕಮಿಷನರ್ ಆದೇಶ ನೀಡಿತ್ತು. ಇದೊಂದು ಸಿಎಂ ಮತ್ತು ಬಿಬಿಎಂಪಿ ಎಲೆಕ್ಷನ್ ಕಮಿಷನರ್ ಎಲ್ಲಾ ಸೇರಿ ಮಾಡಿದ ಸಂಚು ಅನಿಸುತ್ತದೆ. ಜಾಹೀರಾತು ನೀಡದೆ ಖಾಸಗಿ ಕಂಪನಿಗೆ ಮತದಾರರ ಪಟ್ಟಿ ಸಂಸ್ಕರಣೆ ಮಾಡಿ ಡಿಲಿಷನ್ ಅಡಿಷನ್ ಮಾಡ್ತಾರೆ. ಚಿಲುಮೆ ಸಂಸ್ಥೆಯವರಿಗೆ ಅನುಭವವೂ ಇಲ್ಲ. ಬಿಎಲ್ಓ- ಬೂತ್ ಲೆವೆಲ್ ಆಫೀಸರ್ ಅಂತ ಅವರಿಗೆ ಐಡಿ ಕಾರ್ಡ್ ನೀಡಿದ್ದಾರೆ. ಪೀಪಲ್ಸ್ ರೆಪ್ರೆಸೆಂಟೇಷನ್ ಆ್ಯಕ್ಟ್ ಪ್ರಕಾರ ಸರ್ಕಾರಿ ನೌಕರರು ಅಲ್ಲದಿರುವವರು ಯಾರೂ ಬಿಲ್ ಓ ಆಗುವುದಕ್ಕೆ ಸಾಧ್ಯವಿಲ್ಲ. ಈ ಕೃಷ್ಣಪ್ಪ ರವಿಕುಮಾರ್ ಅಕ್ರಮವಾಗಿ ಐಡಿ ಕಾರ್ಡ್ ಕೊಟ್ಟು ನೇಮಕ ಮಾಡಿಕೊಂಡಿದ್ದಾನೆ. ಸೋಗು ಹಾಕಿಕೊಂಡು ಮಾಡಿದ ವಂಚನೆ ಅಕ್ರಮ ದುರ್ಬಳಕೆ ಇದು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಸವರಾಜ ಬೊಮ್ಮಾಯಿ ಈ ಅಕ್ರಮದ ಹಿಂದಿದ್ದಾರೆ. ನೇರವಾಗಿ ಬೊಮ್ಮಾಯಿಯವರೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಭ್ರಷ್ಟಾಚಾರ ಕೇವಲ ಗುತ್ತಿಗೆದಾರರ ವಿಷಯದಲ್ಲಿ ಮಾತ್ರ ನಡೆಯುತ್ತಿಲ್ಲ. ಚುನಾವಣೆಯನ್ನು ವಾಮ ಮಾರ್ಗದಲ್ಲಿ ಗೆಲ್ಲಬೇಕು ಅಂತ ಬೊಮ್ಮಾಯಿ ಏನೆಲ್ಲ ಆಟ ಆಡೋದಕ್ಕೆ ಶುರು ಮಾಡಿದ್ದಾರೆ ನೋಡಿ. ಓಟರ್ ಐಡಿ ತಿದ್ದುಪಡಿ‌ ಮಾಡಿರುವುದು ಅಕ್ಷಮ್ಯ ಅಪರಾಧ. ಬೊಮ್ಮಾಯಿ ಸಿಎಂ ಆಗಿ ಹೇಗೆ ಮುಂದುವರಿತಾರೆ? ತಕ್ಷಣ ಅವರು ರಾಜೀನಾಮೆ ನೀಡಬೇಕು. ಬೊಮ್ಮಾಯಿಯನ್ನು ಅರೆಸ್ಟ್ ಮಾಡಬೇಕು. ಎಫ್ಐಆರ್ ದಾಖಲಾಗದಿದ್ದರೆ ಮುಂದಿನ ಕ್ರಮ ನಾವು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆರೋಪ ಮಾಡಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ.

Published On - 10:39 am, Thu, 17 November 22