AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 1 ಕೋಟಿ 25 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿದೆ : ಸಿಎಂ ಬೊಮ್ಮಾಯಿ

ಕಳೆದ ಮೂರು ದಿನದಿಂದ ಪ್ರಧಾನಿ ಮೋದಿಯವರ ಕರೆಯ ಮೇರೆಗೆ ಇಡೀ ಭಾರತದಲ್ಲಿ 40 ಕೋಟಿ, ಕರ್ನಾಟಕದಲ್ಲಿ 1 ಕೋಟಿ 25 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಕರ್ನಾಟಕದಲ್ಲಿ 1 ಕೋಟಿ 25 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿದೆ : ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: ವಿವೇಕ ಬಿರಾದಾರ|

Updated on:Aug 15, 2022 | 8:28 PM

Share

ಬೆಂಗಳೂರು: ಕಳೆದ ಮೂರು ದಿನದಿಂದ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಕರೆಯ ಮೇರೆಗೆ ಇಡೀ ಭಾರತದಲ್ಲಿ 40 ಕೋಟಿ, ಕರ್ನಾಟಕದಲ್ಲಿ (Karnataka) 1 ಕೋಟಿ 25 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಬೆಂಗಳೂರಿನಲ್ಲಿ (Bengaluru) ಹೇಳಿದ್ದಾರೆ. ಭಾರತದಲ್ಲಿ ಸ್ವಾತಂತ್ರ್ಯದ ಅನೇಕ ಘಟ್ಟಗಳನ್ನು ನಾವು ನೋಡಿದ್ದೇವೆ. ಹಿಂದೆಂದೂ ಕಾಣದ ಉತ್ಸಾಹ, ದೇಶಭಕ್ತಿ ಇಂದು ನಾವು ಕಾಣುತ್ತಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು.

ನಿನ್ನೆ ರಾತ್ರಿ ಎಲ್ಲಾ ಜನರು ಬೀದಿಗೆ ಬಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. 1947 ರಲ್ಲಿ ಸ್ವಾತಂತ್ರ್ಯ ಬಂದಾಗ ಇಡೀ ರಾತ್ರಿ ಜಾಗರಣೆ ಮಾಡಿದ ರೀತಿ‌ ನಿನ್ನೆ ಮಾಡಿದ್ದಾರೆ. ಜನರಲ್ಲಿ ಅಪಾರ ದೇಶಭಕ್ತಿ ನಾವಿಂದು ಕಾಣುತ್ತಿದ್ದೇವೆ. ಮುಂದಿನ 25 ವರ್ಷ ಅಮೃತಕಾಲಕ್ಕೆ ದೇಶವನ್ನು ಕೊಂಡುಯ್ಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.

ನಮ್ಮೆಲ್ಲರಿಗೂ ಇದು ಸೌಭಾಗ್ಯದ ಸಮಯ. ಇಂತಹ ಸಮಯದಲ್ಲಿ ರಾಜ್ಯವನ್ನು ಮುನ್ನಡೆಸುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ ಅಂತ ಭಾವಿಸಿದ್ದೇನೆ. ಇಂದು ಇಡೀ ಕರ್ನಾಟಕ ಒಗ್ಗೂಡಿದೆ. ರಾಜ್ಯದ ಪ್ರತಿಯೊಬ್ಬರು ಕೈಬೀಸಿ ನಾವು ನಿಮ್ಮ ಜೊತೆ ಇದ್ದೇವೆ ಅಂತ ಹೇಳುತ್ತಿದ್ದಾರೆ. ಇದರಿಂದ ನಮ್ಮ ದೇಶ ಸುರಕ್ಷಿತವಾಗಿದೆ ಎಂಬ ಸಂದೇಶ ಸಿಗುತ್ತಿದೆ. ಕರ್ನಾಟಕದ ಜನತೆಗೆ ಹೃದಯಪೂರ್ವಕ ವಂದನೆ ಹೇಳುತ್ತೇನೆ ಎಂದು ವಂದಿಸಿದರು.

ಯಾವ ಜನ್ಮದ ಪುಣ್ಯವೋ ಭಾರತ ಮಾತೆಯ ಸೇವೆ ಮಾಡುತ್ತಿದ್ದೇವೆ. ಇಂದು ಜಾತಿ ಮತ ಪಂಥ ಮೀರಿ ಇಡೀ ದೇಶ ಸಂಭ್ರಮಿಸಿದೆ. ಸಾರೆ ಜಹಾಸೆ ಅಚ್ಚಾ ಹಿಂದೂಸ್ತಾನ ಹಮರಾ ಇದು ಅಕ್ಷರಶಃ ನಿಜವಾಗಿದೆ. ಭಾರತದ ಭಾಗ್ಯವಿಧಾತ ಭವ್ಯವಾಗಿದೆ ಅಂತ ಹೇಳುತ್ತೇನೆ. ನಮ್ಮ ಧರ್ಮಗ್ರಂಥ ಸಂವಿಧಾನ ಅಂತ ಪ್ರಧಾನಿ ಮೋದಿಯವರು ಹೇಳಿದ್ದಾರೆ. ದೇಶದ ಋಣವನ್ನು ತೀರಿಸುವ ಕೆಲಸ ಮಾಡೋಣ. ಎಲ್ಲರಿಗೂ ಎಲ್ಲಾ ವರ್ಗದ ಜನರಿಗೂ ನನ್ನ ಅಭಿನಂದನೆ ಸಲ್ಲಿಸುತ್ತೇನೆ. ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದರು.

Published On - 8:28 pm, Mon, 15 August 22

Follow Us
TV9 Web
TV9 Web

TV9 Kannada

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ