ಸಿಎಂ ಬೊಮ್ಮಾಯಿ ಇಂದು ಕೂಡ ಸಿಟಿ ರೌಂಡ್ಸ್: ಸುಮಾರು ಒಂದು ಗಂಟೆ ಕಾಲ ಪರಿಶೀಲನೆ
ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೂಡ ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ಹಾಕಲಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ, ಪೈ ಬಡಾವಣೆಗಳಲ್ಲಿ ವೀಕ್ಷಣೆ ಮಾಡಲಿದ್ದಾರೆ.
ಬೆಂಗಳೂರು: ಕಳೆದೆರೆಡು ದಿನಗಳಿಂದ ಮಳೆಹಾನಿ (Karnataka Rains) ಪ್ರದೇಶಗಳಿಗೆ ಭೇಟಿಕೊಟ್ಟು ಪರೀಶೀಲನೆ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೂಡ ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ಹಾಕಲಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ, ಪೈ ಬಡಾವಣೆಗಳಲ್ಲಿ ವೀಕ್ಷಣೆ ಮಾಡಲಿದ್ದಾರೆ. ಬೆಳಗ್ಗೆ 8 ಗಂಟೆಯಿಂದ 9 ಗಂಟೆಯವರೆಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಳೆ ಹಾನಿ ಸಂಬಂಧ ಸ್ಥಳೀಯರಿಂದ ಸಿಎಂ ಮಾಹಿತಿ ಪಡೆಯಲಿದ್ದಾರೆ. ನಿನ್ನೆ ಕೂಡ ಸಿಎಂ ಬೊಮ್ಮಾಯಿ ನಗರ ಪ್ರದಕ್ಷಿಣೆ ಮಾಡಿದ್ದು, ಜೆ.ಸಿ.ನಗರ, ಕಮಲಾ ನಗರ, ನಾಗವಾರ ಮೆಟ್ರೋ ನಿಲ್ದಾಣ, ಹೆಚ್ಬಿಆರ್ ಲೇಔಟ್, ಹೆಬ್ಬಾಳದ ಎಸ್ಟಿಪಿ ಹೀಗೆ ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳಿಂದ ಮಾಹಿತಿ ಪಡೆದುಕೊಂಡರು.
ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರಿದ ಮಳೆ: ಧಾರವಾಡ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ, ಉತ್ತರ ಕನ್ನಡದಲ್ಲಿ ಭೂ ಕುಸಿತದ ಆತಂಕ
ಕರ್ನಾಟಕದಲ್ಲಿ ಮುಂದುವರೆದ ಮಳೆ: ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆ
ಕರ್ನಾಟಕದಲ್ಲಿ ಮಳೆ ಮುಂದುವರಿದಿದ್ದು, ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Weather Update) ಹೇಳಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದೆ. ರಾಜ್ಯದ ಒಟ್ಟು 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಇದೆ. ಬೆಂಗಳೂರು ನಗರದಲ್ಲಿ ಇಂದೂ ಸಹ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಾವಣಗೆರೆ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.