AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ IKEA ಕಂಪನಿ ಮಳಿಗೆ ತೆರೆಯಲಿದೆ; ಟ್ವೀಟ್ ಮೂಲಕ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ

ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ ಸಿಇಓ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಬೆಂಗಳೂರಿನಲ್ಲಿ IKEA ಕಂಪನಿ ಮಳಿಗೆ ತೆರೆಯಲಿದೆ; ಟ್ವೀಟ್ ಮೂಲಕ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ
ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ ಸಿಇಓ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದರು.
TV9 Web
| Updated By: sandhya thejappa|

Updated on: May 26, 2022 | 9:22 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಕಿಯ ಕಂಪನಿ (IKEA Company) ಮಳಿಗೆ ತೆರೆಯಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಐಕೆಇಎ ಕಂಪನಿ ಮಳಿಗೆಯ ಉತ್ಪಾದನೆ ಉತ್ತೇಜಿಸಲು ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. IKEA ಕಂಪನಿ ಮುಖ್ಯಸ್ಥರ ಜತೆ ಚರ್ಚೆ ನಡೆಸಿದ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಮಳಿಗೆ ತೆರೆಯುವುದರಿಂದ ಉದ್ಯೋಗ, ಆರ್ಥಿಕ ಬೆಳವಣಿಗೆಯಾಗುತ್ತದೆ. ಜೂನ್ ತಿಂಗಳಲ್ಲಿ IKEA ಕಂಪನಿ ಮಳಿಗೆ ಉದ್ಘಾಟನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿಇಓ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಜೂನ್​ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು, ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತು ಚರ್ಚಿಸಲಾಯಿತು.

ಇದನ್ನೂ ಓದಿ
Image
ಆರ್ಥಿಕ ಬಿಕ್ಕಟ್ಟಿನತ್ತ ಪಾಕಿಸ್ತಾನ: ಲಾಹೋರ್​ನಲ್ಲಿ ಪೆಟ್ರೋಲ್ ಸಿಗ್ತಿಲ್ಲ, ಎಟಿಎಂಗಳಲ್ಲಿ ನಗದು ಖಾಲಿ ಎಂದ ಕ್ರಿಕೆಟರ್ ಮೊಹಮದ್ ಹಫೀಜ್
Image
Madhuri Dixit: ಟ್ರೆಂಡಿಂಗ್​ ಹಾಡಿಗೆ ಹೆಜ್ಜೆ ಹಾಕಿದ ಮಾಧುರಿ; ವೈರಲ್ ಆಯ್ತು ವಿಡಿಯೋ​
Image
HCL Recruitment 2022: 10ನೇ ತರಗತಿ ಪಾಸಾದವರಿಗೆ ಉದ್ಯೋಗ: ವೇತನ 37 ಸಾವಿರ ರೂ.
Image
ಇಂಗ್ಲಿಷ್‌ ಓದಲು ಕಷ್ಟವಾಗುತ್ತಿದೆ ಎಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ: ಪ್ರಾಣಾಪಾಯದಿಂದ ಪಾರು

ಇದನ್ನೂ ಓದಿ: ಪಠ್ಯದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ?- ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನೆ

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ ಎನ್. ಅಶ್ವತ್ಥ್ ನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ ವಿ ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿದ ಸಿಎಂ ಬೊಮ್ಮಾಯಿ: ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಒಪ್ಪಂದ ರೆನ್ಯೂ ಪವರ್ ಕಂಪನಿ ಜತೆ 50,000 ಕೋಟಿ ರೂ ಹೂಡಿಕೆಗೆ ಸಿಎಂ ಬೊಮ್ಮಾಯಿ ಸಹಿ ಹಾಕಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯಿಂದ ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಕಂಪನಿ ಸ್ಥಾಪಿಸಲಿದೆ. ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಭಾರ್ತಿ ಎಂಟರ್ ಪ್ರೈಸಸ್ನಿಂದ ರಾಜ್ಯದಲ್ಲಿ ಮತ್ತೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತವನ್ನು ವ್ಯಕ್ತಪಡಿಸಿದೆ. ಸಿಎಂ ಬೊಮ್ಮಾಯಿ ಎಲ್ಲಾ ಅಗತ್ಯ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​