ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಕಿಯ ಕಂಪನಿ (IKEA Company) ಮಳಿಗೆ ತೆರೆಯಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಐಕೆಇಎ ಕಂಪನಿ ಮಳಿಗೆಯ ಉತ್ಪಾದನೆ ಉತ್ತೇಜಿಸಲು ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. IKEA ಕಂಪನಿ ಮುಖ್ಯಸ್ಥರ ಜತೆ ಚರ್ಚೆ ನಡೆಸಿದ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಮಳಿಗೆ ತೆರೆಯುವುದರಿಂದ ಉದ್ಯೋಗ, ಆರ್ಥಿಕ ಬೆಳವಣಿಗೆಯಾಗುತ್ತದೆ. ಜೂನ್ ತಿಂಗಳಲ್ಲಿ IKEA ಕಂಪನಿ ಮಳಿಗೆ ಉದ್ಘಾಟನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿಇಓ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಜೂನ್ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು, ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತು ಚರ್ಚಿಸಲಾಯಿತು.
I am pleased to announce that @IKEAIndia will be opening their flagship store in Nagasandra in June 2022. We are also in talks with the organisation to encourage local manufacturing, thus boosting employment and economic growth. #KarnatakaAtDavos #BuildForTheWorld @wef pic.twitter.com/SXQDlri96N
— Basavaraj S Bommai (@BSBommai) May 25, 2022
ಇದನ್ನೂ ಓದಿ: ಪಠ್ಯದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ?- ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನೆ
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ ಎನ್. ಅಶ್ವತ್ಥ್ ನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ ವಿ ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿದ ಸಿಎಂ ಬೊಮ್ಮಾಯಿ:
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಒಪ್ಪಂದ ರೆನ್ಯೂ ಪವರ್ ಕಂಪನಿ ಜತೆ 50,000 ಕೋಟಿ ರೂ ಹೂಡಿಕೆಗೆ ಸಿಎಂ ಬೊಮ್ಮಾಯಿ ಸಹಿ ಹಾಕಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯಿಂದ ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಕಂಪನಿ ಸ್ಥಾಪಿಸಲಿದೆ. ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಭಾರ್ತಿ ಎಂಟರ್ ಪ್ರೈಸಸ್ನಿಂದ ರಾಜ್ಯದಲ್ಲಿ ಮತ್ತೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತವನ್ನು ವ್ಯಕ್ತಪಡಿಸಿದೆ. ಸಿಎಂ ಬೊಮ್ಮಾಯಿ ಎಲ್ಲಾ ಅಗತ್ಯ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ