20 ವರ್ಷ ಆದ್ರೂ ಗುಂಡಿ ಬೀಳದಂತೆ ರಸ್ತೆ ಅಭಿವೃದ್ಧಿ ಆಗಿದೆ; ಬೆಂಗಳೂರು ಸಿಟಿ ರೌಂಡ್ಸ್ ವೇಳೆ ಬಿಎಸ್ ಯಡಿಯೂರಪ್ಪ ಹೇಳಿಕೆ

ಹಣಕಾಸಿನ ಕೊರತೆ ಆಗದಂತೆ ನೋಡಿಕೊಂಡು ಬೆಂಗಳೂರನ್ನು ಅಭಿವೃದ್ಧಿ ಪಡಿಸಲಾಗುತ್ತೆ. ಕೆರೆ ಕಟ್ಟೆ ನಿರ್ಮಾಣ ಪಾರ್ಕ್ ನಿರ್ಮಾಣ ಹೀಗೆ ಹೆಚ್ಚು ಕೆಲಸ ಮಾಡಿ ಬೆಂಗಳೂರು ಅಭಿವೃದ್ಧಿ ಮಾಡಲಾಗುತ್ತದೆ ಎಂದು ನಗರ ಪ್ರದಕ್ಷಿಣೆ ಬಳಿಕ ಅವರು ಹೇಳಿಕೆ ನೀಡಿದ್ದಾರೆ.

20 ವರ್ಷ ಆದ್ರೂ ಗುಂಡಿ ಬೀಳದಂತೆ ರಸ್ತೆ ಅಭಿವೃದ್ಧಿ ಆಗಿದೆ; ಬೆಂಗಳೂರು ಸಿಟಿ ರೌಂಡ್ಸ್ ವೇಳೆ ಬಿಎಸ್ ಯಡಿಯೂರಪ್ಪ ಹೇಳಿಕೆ
ಬಿ ಎಸ್ ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Jul 23, 2021 | 2:55 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರನ್ನು ಸಿಲಿಕಾನ್ ಸಿಟಿ ಮಾಡುವುದಕ್ಕೆ ಕ್ರಮ ಕೈಗೊಳ್ಳಲಾಗಿದೆ. ದೇಶ, ವಿದೇಶದಿಂದ ಜನರು ಬರಬೇಕೆಂದು ಅಭಿವೃದ್ಧಿ ಕಾರ್ಯ ಮಾಡಲಾಗಿದೆ. 20 ವರ್ಷ ಆದ್ರೂ ಗುಂಡಿ ಬೀಳದಂತೆ ರಸ್ತೆ ಅಭಿವೃದ್ಧಿ ಆಗಿದೆ. ಕೆರೆ, ರಾಜಕಾಲುವೆ ಅಭಿವೃದ್ಧಿ ದಿಶೆಯಲ್ಲಿ ಯೋಜನೆ ಹಾಕಿಕೊಳ್ಳಲಾಗಿದೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಬೆಂಗಳೂರು ರೌಂಡ್ಸ್‌ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ನಮ್ಮ ಸಚಿವರಾದ ಡಾ. ಅಶ್ವತ್ಥ ನಾರಯಣ್, ಅಶೋಕ್, ಗೋಪಾಲಯ್ಯ ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲರೂ ಜೊತೆಗಿದ್ದು ಕೆಲಸ ಕಾರ್ಯಗಳನ್ನು ಮೆಚ್ಚಿ ಅಭಿನಂದನೆ ಸಲ್ಲಿಸಿದರು. ಬೆಂಗಳೂರನ್ನು ನಿಜವಾಗಲೂ ಸಿಲಿಕಾನ್ ಸಿಟಿ ಮಾಡಬೇಕು. ನಗರವು ಪ್ರವಾಸಿ ತಾಣ ಆಗಬೇಕು, ಅನೇಕ ಅಭಿವೃದ್ಧಿ ಕೆಲಸಗಳಾಗಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇದಕ್ಕಾಗಿ ಹಗಲು ಇರಳು ದುಡಿದು ಒಳ್ಳೆಯ ಅಭಿವೃದ್ಧಿ ಕೆಲಸ ಮಾಡಲಾಗಿದೆ. ಗುಣಮಟ್ಟವುಳ್ಳ ರಾಜಕಾಲುವೆ, ಕೆರೆ ಅಭಿವೃದ್ಧಿ ಮಾಡಲಾಗುತ್ತಿದೆ. ಹಣಕಾಸಿನ ಕೊರತೆ ಆಗದಂತೆ ನೋಡಿಕೊಂಡು ಬೆಂಗಳೂರನ್ನು ಅಭಿವೃದ್ಧಿ ಪಡಿಸಲಾಗುತ್ತೆ. ಕೆರೆ ಕಟ್ಟೆ ನಿರ್ಮಾಣ ಪಾರ್ಕ್ ನಿರ್ಮಾಣ ಹೀಗೆ ಹೆಚ್ಚು ಕೆಲಸ ಮಾಡಿ ಬೆಂಗಳೂರು ಅಭಿವೃದ್ಧಿ ಮಾಡಲಾಗುತ್ತದೆ ಎಂದು ನಗರ ಪ್ರದಕ್ಷಿಣೆ ಬಳಿಕ ಅವರು ಹೇಳಿಕೆ ನೀಡಿದ್ದಾರೆ.

ಮಳೆಯಿಂದ ಅನಾಹುತ ಆಗ್ತಿದೆ ಅಂತಾ ಸುದ್ದಿ ಇದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಾತನಾಡುತ್ತಿದ್ದೇನೆ. ಕಳೆದ ನಾಲ್ಕೈದು ದಿನಗಳಿಂದ ಡಿಸಿಗಳ ಜೊತೆ ಚರ್ಚೆ ಮಾಡುತ್ತಿದ್ದೇನೆ. ಗೋವಿಂದ ಕಾರಜೋಳ ಅವರಿಗೂ ಸೂಚಿಸಿದ್ದೇನೆ. ಜುಲೈ 25ರವರೆಗೆ ಜಿಲ್ಲೆಯಲ್ಲಿರಲು ಸೂಚಿಸಿದ್ದೇನೆ. ಪ್ರಾಣ ಹಾನಿ ಆಗದಂತೆ ನೋಡಿಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಬಿಎಸ್‌ವೈರಿಂದ ನಗರ ಪ್ರದಕ್ಷಿಣೆ ನಡೆಸಲಾಗಿದೆ. ಈ ಮಧ್ಯೆ, ಬ್ರಿಗೇಡ್ ರಸ್ತೆ ವೀಕ್ಷಣೆ ವೇಳೆ ಸಿಎಂಗೆ ಸನ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಶಾಸಕ ಹ್ಯಾರಿಸ್ ಸನ್ಮಾನ ಮಾಡಿದ್ದಾರೆ. ಸಿಎಂ ಇದ್ದ ಬಸ್‌ ಒಳಗೆ ಹೋಗಿ ಬಿ.ಎಸ್. ಯಡಿಯೂರಪ್ಪಗೆ ಸನ್ಮಾನ ಮಾಡಲಾಗಿದೆ.

ಇದನ್ನೂ ಓದಿ: BS Yediyurappa: ರಾಜೀನಾಮೆಗೆ ಸಿದ್ಧವೆಂದಿರುವ ಸಿಎಂ ಯಡಿಯೂರಪ್ಪ ಇಂದು ಬೆಂಗಳೂರು ಸಿಟಿ ರೌಂಡ್ಸ್

ಜಿಲ್ಲೆ, ಸ್ವಕ್ಷೇತ್ರ ಬಿಟ್ಟು ಎಲ್ಲೂ ಹೋಗಬೇಡಿ: ಮಳೆ ನಿರ್ವಹಣೆಗೆ ಉಸ್ತುವಾರಿ ಸಚಿವರು, ಶಾಸಕರಿಗೆ ಸಿಎಂ ಯಡಿಯೂರಪ್ಪ ಸೂಚನೆ

(CM BS Yediyurappa on Bangalore Roads Silicon City Bengaluru City Rounds)

Published On - 2:49 pm, Fri, 23 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್