AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಮಾಧಾನಿತರ ಕೋಪ ಶಮನಕ್ಕೆ ಮುಂದಾದ ಕಾಂಗ್ರೆಸ್​​: ಶಾಸಕರ ಜೊತೆ ನಾಯಕರ ಚರ್ಚೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ಸಿಗದೆ ಭುಗಿಲೆದ್ದಿರುವ ಕಾಂಗ್ರೆಸ್ ಶಾಸಕರ ಬಂಡಾಯವನ್ನು ಶಮನಗೊಳಿಸಲು ಪಕ್ಷದ ಹಿರಿಯ ನಾಯಕರು ಮುಂದಾಗಿದ್ದಾರೆ. ರಾಜೀನಾಮೆ ಬೆದರಿಕೆ ಹಾಕಿರುವ ಶಾಸಕರನ್ನು ಮನವೊಲಿಸಲು ಸಿಎಂ, ಕೆಪಿಸಿಸಿ ಅಧ್ಯಕ್ಷರು ಹಾಗೂ ಹಿರಿಯ ಸಚಿವರ ಹಂತದಲ್ಲಿ ಬಿರುಸಿನ ಮಾತುಕತೆಗಳು ನಡೆಯುತ್ತಿವೆ.

ಅಸಮಾಧಾನಿತರ ಕೋಪ ಶಮನಕ್ಕೆ ಮುಂದಾದ ಕಾಂಗ್ರೆಸ್​​: ಶಾಸಕರ ಜೊತೆ ನಾಯಕರ ಚರ್ಚೆ
ಅಸಮಾಧಾನಿತರ ಕೋಪ ಶಮನಕ್ಕೆ ಮುಂದಾದ ಕಾಂಗ್ರೆಸ್​​Image Credit source: PTI
ಪ್ರಸನ್ನ ಹೆಗಡೆ
|

Updated on:Aug 05, 2026 | 7:23 PM

Share

ಮುಖ್ಯಾಂಶಗಳು

  • ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಭಾರಿ ಅಸಮಾಧಾನ
  • ನಾಯಕರ ನಡೆಗೆ ಮುನಿಸಿಕೊಂಡಿರುವ 'ಕೈ' ಶಾಸಕರು
  • ಅಸಮಾಧಾನಿತರ ಕೋಪ ಶಮನಕ್ಕೆ ಮುಂದಾದ ನಾಯಕರು

ಬೆಂಗಳೂರು, ಆಗಸ್ಟ್​​ 05: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್​​ ಪಾಳಯದಲ್ಲಿ ಭುಗಿಲೆದ್ದಿರುವ ಶಾಸಕರ ಅಸಮಾಧಾನ ಶಮನಕ್ಕೆ ಇದೀಗ ಸ್ವತಃ ಮುಖ್ಯಮಂತ್ರಿಗಳ ಆದಿಯಾಗಿ ಕೆಪಿಸಿಸಿ ಅಧ್ಯಕ್ಷರು ಕೂಡ ಅಖಾಡಕ್ಕೆ ಇಳಿದಿದ್ದಾರೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಹಿರಿಯ ಶಾಸಕ ದಿನೇಶ್ ಗುಂಡೂರಾವ್ ಜೊತೆ ನಿನ್ನೆಯೇ ಡಿಕೆಶಿ ಮಾತುಕತೆ ನಡೆಸಿದ್ದು, ಕೆಲವೊಮ್ಮೆ ಹೈಕಮಾಂಡ್ ನಿರ್ಧಾರಕ್ಕೆ ತಲೆಬಾಗಬೇಕಾಗುತ್ತದೆ ಎಂದು ಮನವರಿಕೆ ಮಾಡಿದ್ದಾರೆ. ಜೊತೆಗೆ ಯಶವಂತ ರಾಯಗೌಡಗೆ ಕರೆ ಮಾಡಿ ಸುಮಾರು 10 ನಿಮಿಷ ಮಾತಾಡಿದ್ದಾರೆ ಎನ್ನಲಾಗಿದೆ.

ನಿಮ್ಮ ನಿವಾಸಕ್ಕೆ ಬಂದು ಮಾತನಾಡ್ತೀನಿ ಎಂದು ಸಿಎಂ ಯಶವಂತ ರಾಯಗೌಡಗೆ ತಿಳಿಸಿದ್ದಾರೆ. ಸಚಿವ ಲಕ್ಷ್ಮಣ ಸವದಿ, ಮಹಂತೇಶ ಕೌಜಲಗಿ, ವಿನಯ್ ಕುಲಕರ್ಣಿ, ಬಿ. ಆರ್. ಪಾಟೀಲ್​​ರಿಂದಲೂ ಮನವೊಲಿಕೆ ಯತ್ನ ನಡೆದಿದೆ. ಮಾತುಕತೆ ವೇಳೆ ರಾಜೀನಾಮೆ ವಾಪಸ್​​ ಪಡೆಯುವಂತೆ ಸಚಿವ ಲಕ್ಷ್ಮಣ್​​ ಸವದಿ ಮನವಿ ಮಾಡಿದ್ದು, ತಮ್ಮ ಸ್ಥಾನವನ್ನೇ ಬೇಕಿದ್ದರೆ ಬಿಟ್ಟುಕೊಡೋದಾಗಿ ಹೇಳಿದ್ದಾರೆ. ಮತ್ತೊಂದೆಡೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​​ರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನ ವಂಚಿತ ಸುಬ್ಬಾರೆಡ್ಡಿ ಬೆಂಬಲಿಸಿ ಮೂರು ತಾಲೂಕುಗಳು ಬಂದ್: ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ

ಕೋಲಾರ ಶಾಸಕರ ಹೊಣೆ ಪರಮೇಶ್ವರ್​​ಗೆ?

ಸಚಿವ ಸ್ಥಾನ ಸಿಗದ ಸಂಬಂಧ ತೀವ್ರ ಅಸಮಾಧಾನ ಹೊರಹಾಕಿರುವ ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರ ಸಮಾಧಾನಪಡಿಸುವ ಹೊಣೆಯನ್ನು ಡಿಸಿಎಂ ಪರಮೇಶ್ವರ್​ಗೆ ನೀಡುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿಗಳು ಸದ್ಯ ಸದ್ಯ ವಿದೇಶದಲ್ಲಿದ್ದು, ಈ ಬಗ್ಗೆ ಅದಾಗಲೇ ಸಿಎಂ ಡಿ.ಕೆ.ಶಿವಕುಮಾರ್​ರಿಂದಲೂ ಸಂದೇಶ ರವಾನೆಯಾಗಿದೆ ಎಂಬ ಮಾಹಿತಿ ಇದೆ.

‘ತನ್ನಿಂದಲೇ ಪಕ್ಷ ಎಂಬುದು ಸುಳ್ಳು’

ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೆಲ ಶಾಸಕರ ಜತೆ ವರಿಷ್ಠರು ವೈಯಕ್ತಿಕವಾಗಿ ಮಾತನಾಡ್ತಿದ್ದಾರೆ. ನಿನ್ನೆ ನಮ್ಮ ಸ್ನೇಹಿತರು ಕೆಲವು ಮಾತನಾಡಿರುವುದನ್ನು ನೋಡಿದೆ. ನಮ್ಮಿಂದ ಪಕ್ಷ ಇದೆಯೋ ಹೊರತು ಪಕ್ಷದಿಂದ ನಾವಿಲ್ಲ ಎಂದಿದ್ದಾರೆ. ಪಕ್ಷದ ಕಚೇರಿಗೆ ಅಲೆದಾಡಿದ್ದು, ಪಕ್ಷದ ಚಿಹ್ನೆ ಬಯಸಿದ್ದು ನಾವಲ್ಲವೇ? ನಮ್ಮನ್ನು ಗುರುತಿಸಿ ಬಿ ಫಾರಂ ಕೊಟ್ಟಿದ್ದು ಪಕ್ಷ. ಹೀಗಾಗಿ ಪಕ್ಷ ಹಾಗೂ ನಾಯಕರ ವಿರುದ್ಧ ಮಾತನಾಡುವುದು ಸರಿಯಲ್ಲ. ತನ್ನಿಂದಲೇ ಪಕ್ಷ ಎಂಬುದು ಸುಳ್ಳು. ಪಕ್ಷದ ಕಚೇರಿಯ ಬಾಗಿಲು ಕಾದಿದ್ದನ್ನು ಮರೆಯಬಾರದು ಎಂದು ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:09 pm, Wed, 5 August 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ