ಮೊಟೊಮಾಚಿಯಲ್ಲಿರುವ ಟೊಯೋಟಾ ಘಟಕಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಟೊಯೋಟಾ ಮುಖ್ಯಸ್ಥರೊಂದಿಗೆ ಮಹತ್ವದ ಮಾತುಕತೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಪಾನ್‌ನಲ್ಲಿ ಟೊಯೋಟಾ ಸಂಸ್ಥೆಗೆ ಭೇಟಿ ನೀಡಿ ಕರ್ನಾಟಕಕ್ಕೆ ಹೆಚ್ಚಿನ FDI ಆಕರ್ಷಿಸಲು ಮಾತುಕತೆ ನಡೆಸಿದರು. 'ಬಿಯಾಂಡ್ ಬೆಂಗಳೂರು' ಯೋಜನೆಯಡಿ ಕೈಗಾರಿಕಾ ವಿಸ್ತರಣೆಗೆ ಒತ್ತು ನೀಡಿದ್ದು, ರಾಜ್ಯದಾದ್ಯಂತ ಉದ್ಯೋಗಾವಕಾಶ ಸೃಷ್ಟಿಗೆ ಗುರಿ ಹೊಂದಲಾಗಿದೆ. ಬಿಡದಿಯ ಐಟಿಐ ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಾದ ನಡೆಸಿ, ಜಾಗತಿಕ ಕೌಶಲ್ಯಗಳನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಲು ಪ್ರೋತ್ಸಾಹಿಸಿದರು.

ಮೊಟೊಮಾಚಿಯಲ್ಲಿರುವ ಟೊಯೋಟಾ ಘಟಕಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಟೊಯೋಟಾ ಮುಖ್ಯಸ್ಥರೊಂದಿಗೆ ಮಹತ್ವದ ಮಾತುಕತೆ
ಡಿಕೆ ಶಿವಕುಮಾರ್

Updated on: Nov 23, 2026 | 7:52 PM

ಟೋಕಿಯೋ, ನ.23; ಕರ್ನಾಟಕಕ್ಕೆ ಹೆಚ್ಚಿನ ವಿದೇಶಿ ನೇರ ಹೂಡಿಕೆ (FDI) ಆಕರ್ಷಿಸುವ ಹಾಗೂ ರಾಜ್ಯದ ಯುವಕರಿಗೆ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಇಂದು (ನವೆಂಬರ್ 23) ಜಪಾನ್‌ನ ಮೊಟೊಮಾಚಿಯಲ್ಲಿರುವ ಪ್ರತಿಷ್ಠಿತ ಟೊಯೋಟಾ ಮೋಟಾರ್ ಕಾರ್ಪೊರೇಷನ್ ಘಟಕಕ್ಕೆ ಭೇಟಿ ನೀಡಿತು. ಈ ವೇಳೆ ಟೊಯೋಟಾ ಸಂಸ್ಥೆಯ ಉನ್ನತ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೊಸ ಹೂಡಿಕೆ ಮತ್ತು ಕೈಗಾರಿಕಾ ವಿಸ್ತರಣೆ ಕುರಿತು ಮಹತ್ವದ ಮಾತುಕತೆ ನಡೆಸಲಾಯಿತು.

ಬಿಯಾಂಡ್ ಬೆಂಗಳೂರು’ ಯೋಜನೆಯಡಿ ರಾಜ್ಯಾದ್ಯಂತ ಕೈಗಾರಿಕಾ ಬೆಳವಣಿಗೆಗೆ ಒತ್ತು:

ಟೊಯೋಟಾ ಮುಖ್ಯಸ್ಥರೊಂದಿಗಿನ ಚರ್ಚೆಯ ಬಳಿಕ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರದ ಕೈಗಾರಿಕಾ ನೀತಿ ಮತ್ತು ಭವಿಷ್ಯದ ಗುರಿಗಳನ್ನು ಹಂಚಿಕೊಂಡರು. “ಬೆಂಗಳೂರು ನಗರದ ಹೊರಗೂ ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆ ವಿಸ್ತರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ‘ಬಿಯಾಂಡ್ ಬೆಂಗಳೂರು’ ಯೋಜನೆಯಡಿ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ” ಎಂದು ಸಿಎಂ ತಿಳಿಸಿದ್ದಾರೆ. ಕರ್ನಾಟಕವನ್ನು ದೇಶದ ಪ್ರಮುಖ ವಿದೇಶಿ ನೇರ ಹೂಡಿಕೆ ತಾಣವಾಗಿ ಮತ್ತಷ್ಟು ಬಲಪಡಿಸುವುದು ಹಾಗೂ ಕೈಗಾರಿಕೆಗಳ ವಿಸ್ತರಣೆಯ ಮೂಲಕ ರಾಜ್ಯದ ಪ್ರತಿಯೊಂದು ಪ್ರದೇಶವನ್ನೂ ಅಭಿವೃದ್ಧಿಯ ಪಾಲುದಾರನಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

Loading...

ಇದನ್ನೂ ಓದಿ: ದಂಪತಿಗಳಿಗೆ ನ್ಯಾಯಾಲಯ ನೀಡದ ಪರಿಹಾರವನ್ನು ಕೊಪ್ಪಳದ ಗವಿಮಠ ನೀಡಿದೆ: ನಿವೃತ್ತ ಜಡ್ಜ್ ಕೃಷ್ಣ ಎಸ್. ದೀಕ್ಷಿತ್ ಅಚ್ಚರಿಯ ಹೇಳಿಕೆ

ಬಿಡದಿಯ 20ಕ್ಕೂ ಹೆಚ್ಚು ಐಟಿಐ ಪ್ರಶಿಕ್ಷಣಾರ್ಥಿಗಳೊಂದಿಗೆ ಸಿಎಂ ಸಂವಾದ

ಟೊಯೋಟಾದ ‘ಗ್ಲೋಬಲ್ ಸ್ಕಿಲ್-ಅಪ್’ ಕಾರ್ಯಕ್ರಮದಡಿ ಜಪಾನ್‌ನಲ್ಲಿ ಉನ್ನತ ತರಬೇತಿ ಪಡೆಯುತ್ತಿರುವ ಕರ್ನಾಟಕದ ಬಿಡದಿ ಘಟಕದ 20ಕ್ಕೂ ಹೆಚ್ಚು ಐಟಿಐ ಪ್ರಶಿಕ್ಷಣಾರ್ಥಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಆತ್ಮೀಯವಾಗಿ ಸಂವಾದ ನಡೆಸಿದರು. ಪ್ರಶಿಕ್ಷಣಾರ್ಥಿಗಳ ತರಬೇತಿ ಅನುಭವಗಳ ಬಗ್ಗೆ ಮಾಹಿತಿ ಪಡೆದ ಸಿಎಂ, ಜಾಗತಿಕ ಮಟ್ಟದ ತಾಂತ್ರಿಕ ಕೌಶಲ್ಯ ಮತ್ತು ಪರಿಣತಿಯನ್ನು ಹೆಚ್ಚಿಸಿಕೊಳ್ಳುವಂತೆ ಯುವಕರಿಗೆ ಪ್ರೋತ್ಸಾಹ ನೀಡಿದರು. ಅಲ್ಲದೆ, ಜಪಾನ್‌ನಲ್ಲಿ ಪಡೆದ ಈ ಅತ್ಯಾಧುನಿಕ ತರಬೇತಿಯನ್ನು ಮರಳಿ ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಬಳಸಿಕೊಳ್ಳುವಂತೆ ಕರೆ ನೀಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us